ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ಅವರ “ಶತ ಸಂಭ್ರಮ”
ಮ೦ಗಳೂರು: ಬಿಕರ್ನಕಟ್ಟೆಯಲ್ಲಿ ವಾಸವಾಗಿರುವ ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ರಾಮಣ್ಣ ಶೆಟ್ಟಿಯವರು ನೂರನೇ ವಸಂತಕ್ಕೆ ಕಾಲಿಟ್ಟ ಸಂಭ್ರಮವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
"ಶತ ಸಂಭ್ರಮ"ದಲ್ಲಿ ಭಾಗಿಯಾಗಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಬಾಲ್ಯದಲ್ಲಿ ದೂರದ ಊರುಗಳಲ್ಲಿರುವ ನಮ್ಮ ಬಂಧು ಮಿತ್ರರ ಒಂದು ಪತ್ರಕ್ಕಾಗಿ ಅಂಚೆಯಣ್ಣನ ಬರುವಿಕೆಗೆ ಕಾತರದಿಂದ ಕಾಯುತ್ತಿದ್ದೆವು. ಎಲ್ಲರ ಬದುಕಿನಲ್ಲೂ ಇಂತಹ ಅಂಚೆಯಣ್ಣಂದಿರ ಸುಮಧುರ...
ವಿಶೇಷ ಶಿಕ್ಷಕರಿಂದ ಅರ್ಜಿ ಆಹ್ವಾನ
ಮಂಗಳೂರು: ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿಯಲ್ಲಿ 2024-25ನೇ ಸಾಲಿಗೆ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ವಿಶೇಷ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಕಲಚೇತನ ಮಕ್ಕಳಿಗೆ ಬೋಧಿಸುವ ವಿಶೇಷ ಪ್ರೌಢ ಶಿಕ್ಷಕರು ಬಿ.ಇಡಿ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ ವಿದ್ಯಾರ್ಹತೆ ಪ್ರಮಾಣ ಪತ್ರ ಹೊಂದಿರಬೇಕು.ಬಿ.ಐ.ಇ.ಆರ್.ಟಿ ಶಾಲೆಗಳು:ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ,...
ಜೂ.9: ಬಿಜೆಪಿ ವಿಜಯೋತ್ಸವ
ಮ೦ಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭವು ಜೂ.9 ರಂದು ಸಂಜೆ 7.15 ಕ್ಕೆ ನವದೆಹಲಿಯಲ್ಲಿ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪ್ರತೀ ಬೂತ್‌ನಲ್ಲಿ ಅಧ್ಯಕ್ಷರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಬೇಕೆಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಕರೆ ನೀಡಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪದಾಧಿಕಾರಿ...
ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಯುವಕ ಸಾವು
ಮ೦ಗಳೂರು: ನಗರದ ಮೇರಿ ಹಿಲ್ ಜಂಕ್ಷನ್ ಬಳಿ ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ,ಕಾವೂರು ನಿವಾಸಿ ನಿಶಾಂಕ್ (23 ) ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.ನಿಶಾಂಕ್ ಗುರುವಾರ ರಾತ್ರಿ ಸ್ಕೂಟರ್ ನಲ್ಲಿ ಏರ್ಪೋರ್ಟ್ ರಸ್ತೆಯಲ್ಲಿ KPT ಕಡೆಯಿಂದ ಪದವಿನಂಗಡಿ ಕಡೆಗೆ ಹೋಗುತ್ತಿದ್ದಾಗ ಮೇರಿ ಹಿಲ್ ಜಂಕ್ಷನ್ ಬಳಿಯ ನೆಕ್ಸಾ ಶೋರೂಮ್...
ಶಾಲಾ ಕಾಲೇಜುಗಳ ಮುಖ್ಯಸ್ಥರು,ಶಾಲಾ ವಾಹನ ಚಾಲಕರ ಸಭೆ
ಮಂಗಳೂರು: ನಗರದ ಪ್ರಮುಖ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾದ್ಯಾಯರು, ಮುಖ್ಯಸ್ಥರು, ಶಾಲೆಗಳ ಮಕ್ಕಳ ಸುರಕ್ಷತಾ ಸಮಿತಿಯ ಸದಸ್ಯರು ಮತ್ತು ಶಾಲಾ ವಾಹನ ಚಾಲಕರ ಸಭೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜೂ.7 ರಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಆಗ್ರವಾಲ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.ಶಾಲಾ ವಾಹನಗಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಮೋಟಾರು...
ಸಾಹಿತಿ – ಸಂಘಟಕ ಸಿಕೇರಾಮ್ ಅವರಿಗೆ ನುಡಿನಮನ
ಮ೦ಗಳೂರು: ಇತ್ತೀಚೆಗೆ ಅಗಲಿದ ಹಿರಿಯ ಕೊಂಕಣಿ ಸಾಹಿತಿ, ಸಂಘಟಕ ಮತ್ತು ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷ ಸಿಕೇರಾಮ್, ಸುರತ್ಕಲ್ ಅವರಿಗೆ ನುಡಿನಮನ ಕಾರ್ಯಕ್ರಮ ಬೆಂದೂರ್ ಮಿನಿ ಸಭಾಗೃಹದಲ್ಲಿ, ಅವರ 70 ಜನ್ಮದಿನ ಜೂ. 5 ರ ರ೦ದು ಜರುಗಿತು. ಸಿಕೇರಾಮ್ ಅವರ ಅತ್ಯಂತ ಕಿರಿಯ ಅಭಿಮಾನಿ ಪುಟಾಣಿ ಜೊಅನ್ ನೈರಾ ಮೊರಾಸ್...
ಮಂಗಳೂರು: ಬೋರ್ಡುಗಳಲ್ಲಿ ಕನ್ನಡ ಕಡ್ಡಾಯ
ಮಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರಗಳ ಉದ್ದಿಮೆಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೇಲ್‍ಗಳು ಮುಂತಾದವುಗಳು ತಮ್ಮ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನುಶೇ. 60 ಪ್ರದರ್ಶಿಸುವುದು ಕಡ್ಡಾಯವಾಗಿದೆ.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರಿಗೆ ತಮ್ಮ ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಶೇ....
ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್ -ಬಿಜೆಪಿ ಮೈತ್ರಿಕೂಟದ ಭೋಜೇಗೌಡರಿಗೆ ಜಯ
ಮೈಸೂರು: ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಭೋಜೇಗೌಡ ಅವರು 5267 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
18658 ಸಿಂಧು ಮತಗಳ ಪೈಕಿ ಭೋಜೇಗೌಡ ಅವರು 9829 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4562 ಮತಗಳನ್ನು ಗಳಿಸಿದ್ದಾರೆ.ಡಾ. ಹರೀಶ್ ಅಚಾಯ೯...
ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಮೈಸೂರು ರಂಗಾಯಣ ಭಾರತೀಯ ರಂಗ ಶಿಕ್ಷಣ ಕೇಂದ್ರ ದಲ್ಲಿ 2024-25 ನೇ ಸಾಲಿನ ಒಂದು ವರ್ಷದ ರಂಗ ಶಿಕ್ಷಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಂಗ ತರಬೇತಿಗೆ ಸೇರ ಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು...
ರೋಹನ್ ಕಾರ್ಪೊರೇಷನ್ :ವಿಶ್ವ ಪರಿಸರ ದಿನ ಆಚರಣೆ
ಮ೦ಗಳೂರು: ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್ ವತಿಯಿ೦ದ ವಿಶ್ವ ಪರಿಸರ ದಿನದ ಅಂಗವಾಗಿ ನಗರದ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.
ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ಅವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ "ರೋಹನ್ ಕಾರ್ಪೊರೇಷನ್...




