“ಪಮ್ಮಕ್ಕೆನ ಪೊರುಂಬಾಟ” ಕೃತಿಗೆ ಪಣಿಯಾಡಿ ಪ್ರಶಸ್ತಿ
ಮಂಗಳೂರು: ತುಳುಕೂಟ ಉಡುಪಿ ವತಿಯಿಂದ ತುಳು ಭಾಷೆಯ ಪ್ರಪಥಮ ಕಾದಂಬರಿಕಾರ ದಿ ಎಸ್ ಯು ಪಣಿಯಾಡಿ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಈ ಸಾಲಿನಲ್ಲಿ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ "ಪಮ್ಮಕ್ಕೆನ ಪೊರುಂಬಾಟ" ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು 10 ಸಾವಿರ ರೂ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಈ ಬಾರಿ ಸ್ಪರ್ಧೆಗೆ ಬಂದ...
ರಸ್ತೆ ಅಗಲೀಕರಣಕ್ಕೆ ಜನರ ಸಹಕಾರ ಅತ್ಯಗತ್ಯ: ವೇದವ್ಯಾಸ ಕಾಮತ್
ಮಂಗಳೂರು: ಮಂಗಳೂರು ನಗರದ ಜನಸಂಖ್ಯೆ 8 ಲಕ್ಷಕ್ಕೆ ಏರಿದೆ. ನಗರದ ಅಭಿವೃದ್ಧಿಗೆ ರಸ್ತೆಗಳ ಅಗಲೀಕರಣ ಅನಿವಾರ್ಯ. ಜನರೂ ತಮ್ಮ ಜವಾಬ್ದಾರಿ ಅರಿತು ಸಹಕರಿಸಬೇಕೆಂದು, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.
ಮಂಗಳವಾರ ನಾಗುರಿ- ಮರೋಳಿ ಸೂರ್ಯನಾರಾಯಣ ದೇವಸ್ಥಾನ ರಸ್ತೆಯ ಅಗಲೀಕರಣ- ತೆರವು ಕಾರ್ಯಾಚರಣೆ ಕುರಿತು, ಇಲ್ಲಿನ ಚರ್ಚ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಂವಾದಕಾರ್ಯಕ್ರಮದಲ್ಲಿ...
ಭತ್ತ ಬೆಳೆ ವಿಮೆ ಯೋಜನೆ ನೋಂದಣಿ
ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ
ಅಧಿಸೂಚಿತ ಬೆಳೆಯ ವಿವರ:ಅಧಿಸೂಚಿತ ಬೆಳೆ - ಭತ್ತ(ಮಳೆಯಾಶ್ರಿತ), ಅಧಿಸೂಚಿತ ಘಟಕ - ಮಂಗಳೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‍ಗಳು ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು, ವಿಮಾ ಮೊತ್ತ – ರೂ. 63,750,...
ಗೋಡೆ ಮೇಲಿನ ಚಿತ್ತಾರ ಕೃತಿ ಬಿಡುಗಡೆ
ಮಂಗಳೂರು: ಸಾಹಿತ್ಯ ಕ್ಷೇತ್ರ ಗೊಂದಲಮಯವಾಗಿದೆ. ಎಡ ಬಲ ಪಂಥದಿಂದಾಗಿ ಸಾಹಿತ್ಯ ಕ್ಷೇತ್ರ ಸೊರಗುತ್ತಿದೆ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ಮುಖ್ಯವಾಗುತ್ತಿದೆ. ಅರ್ಹತೆಗೆ ಪುರಸ್ಕಾರ ಸಿಗುವ ಬದಲು ಪಂಥದ ಮೇಲೆ ನಿರ್ಧರಿತವಾಗುತ್ತದೆ. ಇದರಿಂದಾಗಿ ಹೊಸ ಸಾಹಿತಿಗಳಲ್ಲಿ ಗೊಂದಲ ಮೂಡುತ್ತಿದೆ ಎಂದು ಬರಹಗಾರ್ತಿ ಡಾ| ಪಾರ್ವತಿ ಜಿ. ಹೇಳಿದರು.ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ಕೆನರಾ ಕಾಲೇಜಿನ ಸಭಾಂಗಣದಲ್ಲಿ...
ವಿದ್ವತ್ ಸ್ಪೂರ್ತಿ ಸಂಚಿಕೆ ಮೊದಲನೇ ಭಾಗ ಅನಾವರಣ
ಮ೦ಗಳೂರು: ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರುದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
" ವಿದ್ವತ್ ಸ್ಫೂರ್ತಿ ಸಂಚಿಕೆ ಯ ( Motivational Edition) ಮೊದಲನೇ ಭಾಗವಾದ ಈ ಕಾರ್ಯಕ್ರಮವನ್ನ ವಿದ್ವತ್ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ ಮಂಡಗಳಲೆ ಅವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ...
ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆ
ಮಂಗಳೂರು: ತುಳುನಾಡಿನಲ್ಲಿ ಪ್ರತಿಯೊಂದು ಧಾರ್ಮಿಕ ಕ್ಷೇತ್ರಗಳು ಕಾರಣಿಕ ಕ್ಷೇತ್ರಗಳಾಗಿ ಪ್ರಸಿದ್ಧಿ ಪಡೆದಿವೆ. ಧಾರ್ಮಿಕ ಆಚರಣೆಗಳು ನಿರಂತರವಾಗಿ ಮುಂದುವರಿಯಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧವಾಗುತ್ತಿರುವ ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಕಾರ್ಯಗಳಿಗೆ ತನ್ನಿಂದಾದ ಅಗತ್ಯ ನೆರವು ಒದಗಿಸಲಾಗುವುದು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.ಅವರು ಸೋಮವಾರ ಶ್ರೀ ಕೋಟೆದ ಬಬ್ಬುಸ್ವಾಮಿ...
‘ಹಸಿರೇ ಉಸಿರು’ ಕಾರ್ಯಕ್ರಮಕ್ಕೆ ಚಾಲನೆ
ಮ೦ಗಳೂರು: ‘ಸಾಲುಮರದ ತಿಮ್ಮಕ್ಕ’ ಅವರ ಜನ್ಮದಿನದ ಅಂಗವಾಗಿ ಮಂಗಳೂರು ಮಹಾನಗರ ಪಾಲಿಕೆ ನೇತೃತ್ವದಲ್ಲಿ ‘ಉದಯವಾಣಿ’ ಸಹಭಾಗಿತ್ವದಲ್ಲಿ ೬೦ ವಾರ್ಡ್‌ಗಳ ವ್ಯಾಪ್ತಿಯಲ್ಲಿ ೧೦ ಸಾವಿರ ಗಿಡ ನೆಡುವ ‘ಹಸಿರೇ ಉಸಿರು’ ಕಾರ್ಯಕ್ರಮಕ್ಕೆ ಸೋಮವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಚಾಲನೆ ನೀಡಲಾಯಿತು.ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು ಮಾತನಾಡಿ, ಹವಾಮಾನ ಬದಲಾವಣೆ ಹಾಗೂ ಸಮುದ್ರ ಮಟ್ಟ ಏರಿಕೆ...
ಲಸಿಕೆಯಿಂದ ಮಾತ್ರ ದಢರಾ, ರುಬೆಲ್ಲಾ ರೋಗದ ನಿರ್ಮೂಲನೆ:ಸಿ.ಎಲ್. ಆನಂದ್
ಮಂಗಳೂರು,: ದಢರಾ ಮತ್ತು ರುಬೆಲ್ಲಾ ರೋಗದ ನಿಯಂತ್ರಣವೂ ಸಮರ್ಪಕವಾದ ಲಸಿಕಾಕರಣದಿಂದ ಮಾತ್ರ ಸಾಧ್ಯ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಹೇಳಿದರು.ಅವರು ಸೋಮವಾರ ನಗರದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮಕ್ಕಳಿಗೆ ನೀಡುವ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಕೆ.ಎಸ್.ಆರ್.ಟಿ.ಸಿ : ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರು ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಅಥವಾ ಐಟಿಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್, ಡೀಸೆಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ರೋಗ್ರಾಮಿಂಗ್ & ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು...
ಬೆಂಗ್ರೆ : ಶಾಲಾ ಕೊಠಡಿಗಳ ಉದ್ಘಾಟನೆ
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆ ವಾರ್ಡಿನ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ, ಸ್ಯಾಂಡ್ಸ್ ಪಿಟ್ ಇಲ್ಲಿನ ವಿವೇಕ ಶಾಲಾ ಕೊಠಡಿ ನಿರ್ಮಾಣ ಯೋಜನೆಯಡಿ 28 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಎರಡು ನೂತನ ತರಗತಿಗಳ ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಕಲಿತವನಾಗಿದ್ದು ಈ ಶಾಲೆಗಳ ಬಗ್ಗೆ ವಿಶೇಷ...







