“ಧರ್ಮದೈವ” ತುಳು ಚಲನಚಿತ್ರ ತೆರೆಗೆ
ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು. ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು...
ಹಸು, ಎಮ್ಮೆ ಖರೀದಿ: ಮಹಿಳೆಯರಿಗೆ ಸಹಾಯಧನ
ಮಂಗಳೂರು: 2024-25ನೇ ಸಾಲಿನಲ್ಲಿ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ಪಡೆಯುವ ಸಾಲ ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6% ಬಡ್ಡಿ ಸಹಾಯಧನ ನೀಡಲಾಗುವುದು.
ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ ರೂ. 65,000 ಸಾಲದ ಮೊತ್ತಕ್ಕೆ ಶೇ.6%...
ವಿಕಲಚೇತನರಿಗೆ ಸ್ಕೂಟರ್ ವಿತರಣೆ
ಮಂಗಳೂರು: ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು.
ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 30 ಮಂದಿ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಶಾಸಕರಾದ ಅಶೋಕ್...
ಬಿಜೆಪಿ: ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆ ಕಾರ್ಯಕ್ರಮ
ಮಂಗಳೂರು: ದೇಶದ ಅಖಂಡತೆಗೆ ಹಾಗೂ ಸಾರ್ವಭೌಮತ್ವಕ್ಕೆ ತಮ್ಮ ಬದುಕನ್ನೇ ಸಮರ್ಪಿಸಿದ ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ಸೂಟರ್ ಪೇಟೆಯ ಸಮಾಜ ಭವನದಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆ ಕಾರ್ಯಕ್ರಮವು ನಡೆಯಿತು.
ಜನಸಾಮಾನ್ಯರಿಗೆ...
ಸಂಕಷ್ಟದಲ್ಲಿರುವ ಕಲಾವಿದರಿಂದ ಮಾಸಾಶನ ಪಡೆಯಲು ಅರ್ಜಿ ಆಹ್ವಾನ
ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಾಡು –ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2,000 ರೂ.ಮಾಶಾಸನವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು....
ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ : ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಿದರೆ ಡೆಂಗ್ಯೂ ನಿಯಂತ್ರಣ ಸಾಧ್ಯ ಎಂದು ಆರೋಗ್ಯ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅವರು ಶುಕ್ರವಾರ ನಗರದ ಕೋಡಿಕಲ್ ನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಶುಕ್ರವಾರ ನಡೆಯುತ್ತಿರುವ "ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ"...
ಕುದ್ಮುಲ್ ರಂಗರಾವ್ ಅವರ 165ನೇ ಜನ್ಮದಿನಾಚರಣೆ
ಮಂಗಳೂರು: ದಲಿತೋದ್ಧಾರಕ, ಮಹಾನ್ ಮಾನವತಾವಾದಿ ಕುದ್ಮುಲ್ ರಂಗರಾವ್ ಅವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, "ನನ್ನ ಜೀವನದ ಆದರ್ಶ ಹಾಗೂ ದಾರಿ...
ಮಂಗಳೂರು ತಾ. ಕಚೇರಿಯಲ್ಲಿ ಜುಲೈ 10 ರಂದು ಲೋಕಾಯುಕ್ತ ಜನಸಂಪರ್ಕ ಸಭೆ
ಮಂಗಳೂರು: ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಜುಲೈ 10 ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮಂಗಳೂರು ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ...
ಮಹಿಳಾ ವಸತಿ ನಿಲಯ : ಅರ್ಜಿ ಆಹ್ವಾನ
ಮಂಗಳೂರು: ಉದ್ಯೋಗ ನಿರತ ಮಹಿಳೆಯರಿಗಾಗಿ, ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಂಚಾಡಿ ಮತ್ತು ಕಂಕನಾಡಿಯಲ್ಲಿ ಮಹಿಳಾ ವಸತಿ ನಿಲಯಗಳನ್ನು ಅನುಷ್ಠಾನಗೊಳಿಸಲಾಗಿದೆ.
ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ, ದಿನದ 24 ಗಂಟೆಯೂ ಬಿಸಿನೀರು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಪ್ರತ್ಯೇಕ ಶೌಚಾಲಯಗಳು ಹಾಗೂ ಸ್ನಾನಗೃಹದ ವ್ಯವಸ್ಥೆ...
ಸ್ಕೇಟಿಂಗ್ ಸಾಧಕರಿಗೆ ಸನ್ಮಾನ
ಮಂಗಳೂರು : ಮಕ್ಕಳ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಮಕ್ಕಳಲ್ಲಿ ಇರುವ ಕ್ರೀಡಾ ಪ್ರತಿಭೆಯನ್ನು ಪೋಷಕರು ಗುರುತಿಸಿ ಪ್ರೋತ್ಸಾಹ ನೀಡಿದರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ನೂರ್ ಜಹರ ಖಾನಂ ಹೇಳಿದರು.ನಗರದ...






