ಎಕ್ಕಾರ್ : ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ

ಮ೦ಗಳೂರು : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು -ಎಕ್ಕಾರು ಘಟಕದ ಆಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು ತಿಳಿಸಿದರು.ಸರಕಾರಿ ಪ್ರೌಢಶಾಲೆ...

ಸೇನಾ ತರಬೇತಿಗೆ ಅರ್ಜಿ ಆಹ್ವಾನ

0
ಮಂಗಳೂರು: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ (ಬಾಲಕರಿಗೆ ಮಾತ್ರ) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು,...

ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

0
ಮಂಗಳೂರು: ಜಿಲ್ಲೆಯಾದ್ಯಂತ ಜೂನ್ 21ರಂದು ಹಮ್ಮಿಕೊಳ್ಳಲಾಗಿರುವ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ. ಅವರು ಅದಿಕಾರಿಗಳಿಗೆ ಸೂಚನೆ ನೀಡಿದರು.ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶನಿವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲಾಡಳಿತ, ಆಯುಷ್ ಇಲಾಖೆ,...

ಶಾಲಾ ಸಮವಸ್ತ್ರ, ಮತ್ತು ಪುಸ್ತಕ ವಿತರಣೆ

0
ಮ೦ಗಳೂರು: ಕೆನರಾ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ, ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಶನಿವಾರ ಜರಗಿತು.ಕೆನರಾ ಆಡಳಿತ ಮಂಡಳಿ, ಶಾರದಾ ಯುವಕ ವೃಂದ ಮತ್ತು ಬುಕ್ ಮಾರ್ಕ್ ವತಿಯಿಂದ ಸಮವಸ್ತ್ರ ಮತ್ತು ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರು ಮತ್ತು ಶಾಲೆಯ ಸಂಚಾಲಕರಾದ ಕೆ.ಸುರೇಶ್ ಕಾಮತ್ ,...

ತೇಲುವ ಜಟ್ಟಿ ಕಾಮಗಾರಿ ತ್ವರಿತಗೊಳಿಸುವಂತೆ ಮೀನುಗಾರಿಕಾ ನಿಗಮ ಅಧ್ಯಕ್ಷರ ಸೂಚನೆ

0
ಮಂಗಳೂರು: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ. ನಾರಾಯಣ ರಾವ್ ಅವರು ನಿಗಮದ ಕೇಂದ್ರ ಕಚೇರಿಗೆ ಶನಿವಾರ ಭೇಟಿ ನೀಡಿ ನಿಗಮದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದರು.ಮಂಗಳೂರಿನ ಮೀನುಗಾರಿಕಾ ಬಂದರು, ಮಂಜುಗಡ್ಡೆ ಸ್ಥಾವರ ಡೀಸಿಲ್ ಬಂಕ್‍ಗಳ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಾಡದೋಣಿಗಳ ನಿಲುಗಡೆಗೆ ನಿಗಮದಿಂದ ಕೈಗೊಂಡಿರುವ ತೇಲುವ ಜಟ್ಟಿ...

ಜೂ.22ರಿಂದ ಪಿಲಿಕುಳದಲ್ಲಿ ಹಣ್ಣುಗಳ ಮೇಳ

0
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.22 ಹಾಗೂ 23 ರಂದು (ಶನಿವಾರ ಮತ್ತು ಆದಿತ್ಯವಾರ) ‘ಹಣ್ಣುಗಳ ಮೇಳ’ ವನ್ನು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆಯನ್ನು...

ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿ: ಡಾ.ರೊನಾಲ್ಡ್ ಕೊಲಾಸೊ ಆಶಯ

0
ಮಂಗಳೂರು : ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ನಗರವನ್ನು ಎರಡನೆ ರಾಜ್ಯದ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ. ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಬಹುದು. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ತಿಳಿಸಿದರು.ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ...

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ : ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದಲ್ಲಿ 2024-25ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳಿಗೆ, ಡಿಪ್ಲೋಮಾ ಇನ್ ಪ್ರಿಶಿಷನ್ ಮಾನ್ಯಫ್ಯಾಕ್ಚರಿಂಗ್ ವಿಭಾಗದಲ್ಲಿ 30 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು...

ಬ್ಯೂಟಿಷನ್ ಕೋರ್ಸ್: ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರಿನ ಯೆಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಹಿಳಾ ವಿಭಾಗದ ವತಿಯಿಂದ ಜೂನ್ 24 ರಿಂದ ಜುಲೈ 5 ರ ವರೆಗೆ 10 ದಿನಗಳ ಕಾಲ ಬ್ಯೂಟಿಷನ್ ಕೋರ್ಸ್ ಏರ್ಪಡಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಸದರಿ...

“ತುಡರ್” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.ಬಳಿಕ ಮಾತಾಡಿದ ಕರಾವಳಿ ಗ್ರೂಪ್ ಆಫ್ ಎಜುಕೇಷನ್ ಸಂಸ್ಥೆಯ ಚೇರ್ ಮೆನ್ ಗಣೇಶ್ ರಾವ್ ಅವರು, "ತುಡರ್ ಅಂದರೆ ಕನ್ನಡದಲ್ಲಿ...