ಪುತ್ತೂರು :ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ.
ಪುತ್ತೂರು : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ ಆ.26 ರಂದು ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮ೦ದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದು ಸುಮಾರು ರೂ 4,15,925 ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ...
ಸಾಹಿತಿ, ಲೇಖಕ ಶೇಖರ್ ಅಜೆಕಾರ್ ನಿಧನ
ಕಾಕ೯ಳ: ಸಾಹಿತಿ, ಲೇಖಕ ಶೇಖರ್ ಅಜೆಕಾರ್ ಹೃದಯಘಾತದಿಂದ ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು.ಶೇಖರ್ ಅಜೆಕಾರ್ ಅವರು 22 ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತಿದ್ದರು.
ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ...
ಲೀಲಾವತಿ ಬೈಪಾಡಿತ್ತಾಯ ಸೇರಿದ೦ತೆ 68 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಬೆ೦ಗಳೂರು: ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ, ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಸೇರಿದ೦ತೆ 68 ಮಂದಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.ಕನ್ನಡ ಮತ್ತು ಸ೦ಸ್ಕೃತಿ ಇಲಾಖಾ ಸಚಿವ ಶಿವರಾ ತ೦ಗಡಗಿ ಅವರು ಮ೦ಗಳವಾರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದರು.ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಸ೦ಬ೦ಧಿಸಿದ೦ತೆ ಯಕ್ಷಗಾನದಲ್ಲಿ ಲೀಲಾವತಿ ಬೈಪಡಿತ್ತಾಯ,...
ಮಿಜಾರುಗುತ್ತು ಆನಂದ ಆಳ್ವ ನಿಧನ
ಮೂಡಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ ಅವರು ಮ೦ಗಳವಾರ ನಿಧನರಾದರು.106 ವರ್ಷ ಪ್ರಾಯದ ಆನಂದ ಆಳ್ವ ಅವರು ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.ಪ್ರಗತಿಪರ ರೈತರೂ ಆಗಿದ್ದ...
ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
ತಿರುಪತಿ: ತಿರುಪತಿಯ ಕಾಶಿ ಮಠದಲ್ಲಿ ಮೊಕ್ಕಾಂ ಇರುವ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಇ.ವಿ ಧರ್ಮ ರೆಡ್ಡಿಯವರು ಭೇಟಿ ಮಾಡಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ , ಗುಜರಾತಿನ ಐಎಎಸ್ ಅಧಿಕಾರಿ ವಿನೋದ್...
ಆಂತರಿಕ ದೂರು ಸಮಿತಿ ರಚನೆಗೆ ಸೂಚನೆ
ಮಂಗಳೂರು: ಸುಪ್ರೀಂ ಕೋರ್ಟ್ ವಿಶಾಖಾ ಮಾರ್ಗಸೂಚಿಯಂತೆ “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013” ರನ್ವಯ ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳಿರುವ ಸ್ಥಳಗಳಲ್ಲಿ “ಆಂತರಿಕ ದೂರು ಸಮಿತಿ”ಯನ್ನು ರಚನೆ ಮಾಡುವುದು ಕಡ್ಡಾಯವಾಗಿರುತ್ತದೆ.ಇದಕ್ಕೆ ಸಂಬಂಧಿಸಿದ ಆದೇಶವನ್ನು ಕರ್ನಾಟಕ...
ಅಕ್ಟೋಬರ್ 31ರಂದು ಉದ್ಯೋಗ ಮೇಳ
ಮಂಗಳೂರು: ನಗರದ ಕಾರ್ ಸ್ಟ್ರೀಟ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಿಸ್ಟ್ ಆಫ್ ಇಂಡಿಯಾ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 9 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.ಶಾಸಕರಾದ ವೇದವ್ಯಾಸ್ ಕಾಮತ್ ಕಾರ್ಯಕ್ರಮ ಉದ್ಘಾಟಿಸುವರು.30 ಬೇರೆ ಬೇರೆ ನೇಮಕಾತಿ ಕಂಪೆನಿಗಳ ಪ್ರತಿನಿಧಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಪಿಯುಸಿ, ಡಿಪ್ಲೋಮಾ, ಐಟಿಐ,...
ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ಯುವಕ ಆತ್ಮಹತ್ಯೆ
ಮ೦ಗಳೂರು : ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೋವ೯ ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ..ಚಿಕ್ಕಮಗಳೂರು ಗ್ರಾಮಾ೦ತರದ ಬೈರಪುರ ಕಾತಿ೯ಕೆರೆ ನಿವಾಸಿ ಶಂಕರಗೌಡ ಎಂಬವರ ಪುತ್ರ ಪ್ರಸನ್ನ ಕುಮಾರ್ (36) ಆತ್ಮಹತ್ಯೆ ಮಾಡಿಕೊ೦ಡಿರುವ ಯುವಕ.ಮಧ್ಯಾಹ್ನ ಒ೦ದು ಗ೦ಟೆಯ ವೇಳೆಗೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66...
ವರದಕ್ಷಿಣೆ ಕಿರುಕುಳ :ನವ ವಿವಾಹಿತೆ ಆತ್ಮಹತ್ಯೆ
ಬಂಟ್ವಾಳ: ಪತಿಯ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ೦ಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಸ೦ಭವಿಸಿದೆಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಎ೦ಬಾತನನ್ನು ಪ್ರೇಮಿಸಿ ಮೂರು ತಿಂಗಳ...
ಮುಲ್ಕಿ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ ಜಿಲ್ಲಾಧಿಕಾರಿ
ಮಂಗಳೂರು: ಮುಲ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ.ಅವರು ಸೋಮವಾರ ಮುಲ್ಕಿಯಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.ಜನತಾದರ್ಶನ ಕಾರ್ಯಕ್ರಮದಲ್ಲಿ ಹಲವು ಸಾರ್ವಜನಿಕರು ತಮ್ಮ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನಕ್ಕೆ ತಂದಿದ್ದಾರೆ. ಉಪ್ಪು ನೀರಿನ...