ಬಿಜೆಪಿ ಸ್ಥಾಪನಾ ದಿನಾಚರಣೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯದಲ್ಲಿ ಬಿಜೆಪಿಯ ೪೪ ನೇಸ್ಥಾಪನಾ ದಿನಾಚರಣೆಯ ಕಾರ್ಯಕ್ರಮ ಜರಗಿತು.ಬಿಜೆಪಿಯಹಿರಿಯ ನಾಯಕ ಕೆ ಮೋನಪ್ಪ ಭಂಡಾರಿಯವರು ಬಿಜೆಪಿಯ ಹುಟ್ಟು ಬೆಳವಣಿಗೆ ಹಾಗೂ ಪ್ರಸ್ತುತತೆಯ ಬಗ್ಗೆ ಸಂದೇಶವನ್ನು ನೀಡಿದರು. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ , ರವಿಶಂಕರ್ ಮಿಜಾರ್ , ನಿತಿನ್ ಕುಮಾರ್ , ದೇವದಾಸ್ ಶೆಟ್ಟಿ , ಪೂಜಾ ಪೈ,...
ಡಾ.ಬಾಬು ಜಗಜೀವನ್ ರಾಂ ಅವರ ವ್ಯಕ್ತಿತ್ವ ಮಾದರಿ:ಮುಲ್ಲೈ ಮುಗಿಲನ್ ಎಂ.ಪಿ.
ಮಂಗಳೂರು: ದೇಶದ ಕೃಷಿಯ ಏಳಿಗೆಗೆ ಅಪಾರ ಕೊಡುಗೆ ನೀಡಿದ ಹಾಗೂ ಕಾರ್ಮಿಕರ ಕಾನೂನುಗಳು, ಅವರ ಹಕ್ಕುಗಳ ಅನುಷ್ಠಾನಕ್ಕೆ ಶ್ರಮಿಸಿದ ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆಗಳು ಅನನ್ಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬಣ್ಣಿಸಿದರು.ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ...
ಲಂಚ ಸ್ವೀಕಾರ ಆರೋಪ: ಮುಡಾ ಕಮಿಷನರ್ ಮನ್ಸೂರ್ ಅಲಿಗೆ ಜಾಮೀನು ನಿರಾಕರಣೆ
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧನಕ್ಕೊಳಗಾಗಿದ್ದ ಮುಡಾ ಕಮಿಷನರ್ ಮನ್ಸೂರ್ ಅಲಿ ಮತ್ತು ಬ್ರೋಕರ್ ಮುಹಮ್ಮದ್ ಸಲೀಂ ಅವರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ಮಾ. 23 ರಂದು ಮುಡಾ ಆಯುಕ್ತ ಮನ್ಸೂರ್ ಅಲಿ ನಿರ್ದೇಶನದಂತೆ ಬ್ರೋಕರ್ ಮಹಮ್ಮದ್ ಸಲಿಂ ದೂರುದಾರರಿಂದ 25,00,000ರೂ. (ಇಪ್ಪತ್ತೈದು ಲಕ್ಷ) ಲಂಚದ...
90,496 ಲೀಟರ್ ಮದ್ಯ ವಶ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 5ರವರೆಗೆ ಜಿಲ್ಲೆಯಲ್ಲಿ 1,95,65,212 ರೂಪಾಯಿ ಮೌಲ್ಯದ 90,496 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 347 ಎಫ್ ಐ ಆರ್ ಪ್ರಕರಣ ದಾಖಲಾಗಿದೆ. ಎಂದು...
10 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ
ಮಂಗಳೂರು: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಏ.5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು.ಬಹುಜನ್ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ, ಕರುನಾಡ ಸೇವಕ ಪಕ್ಷದ ಅಭ್ಯರ್ಥಿ...
ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ: ಬಾಳ ಜಗನ್ನಾಥ ಶೆಟ್ಟಿ
ಸುರತ್ಕಲ್: ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಸೇವಾ ಸಂಸ್ಥೆ. ಕಳೆದ 45 ವರ್ಷಗಳಿಂದ ತಡಂಬೈಲ್ ಪರಿಸರದಲ್ಲಿ ವೀರಕೇಸರಿ ಸೇವಾ ಸಂಸ್ಥೆಯು ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಸಮಾಜಪರ ಕೆಲಸ ಮಾಡಿ ಶ್ಲಾಘನೆಗೆ ಪಾತ್ರವಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಕಟಪೂರ್ವ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ತಿಳಿಸಿದರು.ಮಾರಿಪೂಜಾ ಮಹೋತ್ಸವದ ಅಂಗವಾಗಿ...
ಆಕಾಂಕ್ಷ ರಂಜನ್ ಚುನಾವಣಾ ಸಾಮಾನ್ಯ ವೀಕ್ಷಕರು
ಮಂಗಳೂರು:- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಕು. ಆಕಾಂಕ್ಷ ರಂಜನ್ ಅವರನ್ನುನಿಯೋಜನೆ ಮಾಡಿದ್ದು ಏ.3ರಂದು ಜಿಲ್ಲೆಗೆ ಆಗಮಿಸಿದ್ದಾರೆ.ಚುನಾವಣಾ ಸಾಮಾನ್ಯ ವೀಕ್ಷಕರು ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ...
ಎ೦.ಸಿ.ಸಿ. ಬ್ಯಾಂಕ್ : 13.12 ಕೋ. ರೂ. ಲಾಭ, ಕರ್ನಾಟಕ ರಾಜ್ಯಕ್ಕೆ ಕಾರ್ಯ ಕ್ಷೇತ್ರ ವಿಸ್ತರಣೆ
ಮ೦ಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿ೦ಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎ೦.ಸಿ.ಸಿ. ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2024 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು,...
ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ: ಬೃಹತ್ ರೋಡ್ ಶೋ
ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಎ.4ರಂದು ನಾಮಪತ್ರ ಸಲ್ಲಿಸಿದರು.ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದ.ಕ. ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಬೆಳಿಗ್ಗೆ ಮಂಗಳೂರಿನ...
ಎಸ್‌ಸಿಡಿಸಿಸಿ ಬ್ಯಾಂಕ್ : 79.09 ಕೋಟಿ ರೂ. ಸಾರ್ವಕಾಲಿಕ ದಾಖಲೆಯ ಲಾಭ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ದಿನಾಂಕ 31-03-2024ಕ್ಕೆ ಅಂತ್ಯವಾದ ಆರ್ಥಿಕವರ್ಷದಲ್ಲಿ ರೂ.79.09 ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ.61.29 ಕೋಟಿ) ಕ್ಕಿಂತ ಶೇ. 29.04 ಏರಿಕೆಯಾಗಿದ್ದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎ೦ದುಬ್ಯಾಂಕಿನ ಅಧ್ಯಕ್ಷರಾದ ಡಾ...







