ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ .ಬೆಳಗ್ಗೆ 9.30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭ ಭಾಗವಹಿಸುವರು.
ಬಲಿಷ್ಠ ಭಾರತ ನಿರ್ಮಾಣದಲ್ಲಿ ವಕೀಲರ ಸಮುದಾಯದ ಪಾತ್ರ ದೊಡ್ಡದು: ಪ್ರತಾಪ್ ಸಿಂಹ ನಾಯಕ್
ಮಂಗಳೂರು: ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು ವಕೀಲರ ಮಾತಿಗೆ ಸಮಾಜದಲ್ಲಿ ತೂಕ ಹೆಚ್ಚು. ಅವರ ಸಲಹೆಗಳನ್ನು ಮೀರುವ ವ್ಯಕ್ತಿಗಳು ಯಾರೂ ಇಲ್ಲ....
ಅಗಲ್ಪಾಡಿ ಯಾಗದಲ್ಲಿ ದುರ್ಗಾ ಸಪ್ತಶತೀ ಪಾರಾಯಣ
ಅಗಲ್ಪಾಡಿ: ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಸೋಮವಾರ ದುರ್ಗಾ ಸಪ್ತಶತೀ ಪಾರಾಯಣ ಹಾಗೂ ಕಲಶಪೀಠದಲ್ಲಿ ಮಹಾಪೂಜೆ ನೆರವೇರಿತು.
ಯಾಗದ ಪ್ರಯುಕ್ತ ಕುಮಾರೀ, ಸುವಾಸಿನೀ ಹಾಗೂ ದಂಪತಿ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ,...
ಪುತ್ತೂರಿನ ಅಭಿವೃದ್ಧಿಯ ಕನಸಿಗೆ ಕೈಜೋಡಿಸುತ್ತೇನೆ: ಪದ್ಮರಾಜ್ ಆರ್.
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ಸೋಮವಾರ ಮಂಜಲ್ಪಡ್ಪು ಉದಯಗಿರಿ ಸಭಾಭವನದಲ್ಲಿ ನಡೆಯಿತು.ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ರಾಜ್ಯದಿಂದ ಸಮೀಕ್ಷೆ ನಡೆಸುತ್ತಿದ್ದಾರೆ. ಅವರು ಕರೆ ಮಾಡಿ ತಿಳಿಸಿದರು, ಸ್ವಲ್ಪ ಪ್ರಯತ್ನ ಮಾಡಿದರೆ 75ರಿಂದ 1 ಲಕ್ಷದ ಮತದ ಅಂತರದಿಂದ ಗೆಲ್ಲಬಹುದು. ಆದ್ದರಿಂದ ಈ ಬಾರಿ ನಮ್ಮ ಪ್ರಯತ್ನವನ್ನು ಹೆಚ್ಚು ಹಾಕಿ, ಅಭ್ಯರ್ಥಿಯನ್ನು...
ಬಿಜೆಪಿ ಮನಪಾ ಪ್ರತಿನಿಧಿಗಳ ಮಹತ್ವದ ಸಭೆ
ಮಂಗಳೂರು: ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸದಸ್ಯರ ಮಹತ್ವದ ಸಂಘಟನಾತ್ಮಕ ಸಭೆ ನಡೆಯಿತು.ಜಿಲ್ಲಾ ಚುನಾವಣಾ ಪ್ರಭಾರಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಚುನಾವಣಾ ಉಸ್ತುವಾರಿಗಳಾದ ನಿತಿನ್ ಕುಮಾರ್, ಪಕ್ಷದ ಹಿರಿಯರಾದ ಮೋನಪ್ಪ ಭಂಡಾರಿ, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಚುನಾವಣೆ ಎದುರಿಸುವ...
ಲೋಕ ಸಮರಕ್ಕೆ ಸಜ್ಜು: ಬಿಜೆಪಿ-ಜೆಡಿಎಸ್ ಮಹತ್ವದ ಸಮನ್ವಯ ಸಭೆ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹತ್ತು ವರ್ಷಗಳ ಆಡಳಿತವನ್ನು ಗಮನಿಸಿ, ದೇಶದ ಅಭಿವೃದ್ಧಿಯಲ್ಲಿ ಆದ ಮಹತ್ವದ ಬದಲಾವಣೆಗಳನ್ನು ಪರಿಗಣಿಸಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಮತ್ತು ಅವರನ್ನು ಇನ್ನೊಂದು ಅವಧಿಗೆ ಪ್ರಧಾನಿಯಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಕೈಜೋಡಿಸಿವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಅವರು ಕೊಡಿಯಾಲ್ ಬೈಲ್ ನಲ್ಲಿರುವ ಜಿಲ್ಲಾ...
12,844 ಲೀಟರ್ ಮದ್ಯ ವಶಕ್ಕೆ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 1ರವರೆಗೆ ಜಿಲ್ಲೆಯಲ್ಲಿ 41,90,665 ರೂಪಾಯಿ ಮೌಲ್ಯದ 12,844 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 243 ಎಫ್ ಐ ಆರ್ ಪ್ರಕರಣ ದಾಖಲಾಗಿದೆ...
ಮನೋಜ್ ಕುಮಾರ್ ವೇಣೂರುಗೆ ಯಕ್ಷಧ್ರುವ ಪಟ್ಲಾಶ್ರಯ ಯೋಜನೆಯ 26 ನೇ ಮನೆ ಹಸ್ತಾಂತರ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ ಯೋಜನೆ "ಯಕ್ಷಧ್ರುವ ಪಟ್ಲಾಶ್ರಯ ಯೋಜನೆಯಲ್ಲಿ 26ನೇ ಮನೆಯ ಹಸ್ತಾಂತರ ಫಲಾನುಭವಿಯಾದ ಪರಿಶಿಷ್ಟ ವರ್ಗಕ್ಕೆ ಸೇರಿದ ವಿಶಿಷ್ಟ ಚೇತನ ಯಕ್ಷಗಾನ ಕಲಾವಿದ ಮನೋಜ್ ಕುಮಾರ್ ವೇಣೂರು ಇವರಿಗೆ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ಟ್ರಸ್ಟಿನ ಬೆಳ್ತಂಗಡಿ ಘಟಕದ ಪದಾಧಿಕಾರಿಗಳ ಸಮಕ್ಷದಲ್ಲಿ ನೆರವೇರಿತು.ಈ...
ವಿಕಸಿತ ಭಾರತದ ಗುರಿ ಸಾಧನೆಗೆ ಮೋದಿ ಮತ್ತೆ ಪ್ರಧಾನಿಯಾಗಬೇಕು: ಪ್ರತಾಪ್ ಸಿಂಹ ನಾಯಕ್
ಮಂಗಳೂರು: ದೇಶದ ಅಭಿವೃದ್ಧಿ, ಭಾರತವನ್ನು ಜಗತ್ತಿನಲ್ಲೇ ನಂಬರ್ ಒನ್ ರಾಷ್ಟ್ರವಾಗಿ ಕಟ್ಟಿ ಬೆಳೆಸುವ ದೂರದೃಷ್ಟಿ ಹೊಂದಿರುವ ಮತ್ತು ಈಗಾಗಲೇ ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಭಾರತವನ್ನು 5ನೇ ಸ್ಥಾನಕ್ಕೇರಿಸಿದ ಸಮರ್ಥ ಹಾಗೂ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪುನರಾಯ್ಕೆ ಮಾಡುವುದು ನಿಜವಾದ ದೇಶಪ್ರೇಮಿಗಳೆಲ್ಲರ ಹೊಣೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್...
ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವು
ವಿಟ್ಲ : ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವು ಮಾಡಿಕೊಂಡು ಹೋಗಿರುವ ಘಟನೆ ಬಂಟ್ವಾಳ ತಾಲೂಕು ವಿಟ್ಪಪಡ್ನೂರು ಗ್ರಾಮದ ಕಾಪುಮಜಲು ಎಂಬಲ್ಲಿ ನಡೆದಿದೆ.ವಿಟ್ಲಪಡ್ನೂರು ಕಾಪುಮಜಲು ನಿವಾಸಿ ಪೂವಪ್ಪಗೌಡ ಅವರು ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಸುಮಾರು 10 ಗೋಣಿ ಚೀಲದಷ್ಟು ಅಡಿಕೆಯನ್ನು ಕಳ್ಳರೂ ಕಳವು ಮಾಡಿಕೊಂಡು ಹೋಗಿದ್ದು ಅದರ ಮೌಲ್ಯ 75.000 ರೂ ಆಗಬಹುದು...







