12,824 ಲೀಟರ್ ಮದ್ಯ ವಶಕ್ಕೆ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 29 ರವರೆಗೆ ಜಿಲ್ಲೆಯಲ್ಲಿ 41,80,391 ರೂಪಾಯಿ ಮೌಲ್ಯದ 12,824 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 212 ಎಫ್ ಐ ಆರ್...
ಚುನಾವಣಾ ವೆಚ್ಚ ವೀಕ್ಷಕರಿಂದ ಪರಿಶೀಲನೆ
ಮಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು -ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನು ನಿಯೋಜಿಸಿದೆ.ಐ ಆರ್ ಎಸ್ ಅಧಿಕಾರಿ ಮೆರಗು ಸುರೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಲೆಕ್ಕ ವೀಕ್ಷಕರಾಗಿ ಮಾರ್ಚ್ 28ರಂದು ಜಿಲ್ಲೆಗೆ...
ಚುನಾವಣೆ ಕಾರ್ಯತಂತ್ರ: ಜಿಲ್ಲಾ ಬಿಜೆಪಿ ಪ್ರಮುಖರ ಮಹತ್ವದ ಸಭೆ
ಮಂಗಳೂರು: ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಈವರೆಗೆ ನಡೆದ ಚುನಾವಣಾ ಬೂತ್ ಕಾರ್ಯಗಳ ಬಗ್ಗೆ ವರದಿಯನ್ನು ಪಡೆದರು.
ಇನ್ನಷ್ಟು ಮತದಾರರನ್ನು ತಲುಪಲು ಕೈಗೊಳ್ಳಬೇಕಾಗಿರುವ ಕಾರ್ಯಚಟುವಟಿಕೆಗಳ ಬಗ್ಗೆ ಗಮನಹರಿಸಿ ಮತ್ತಷ್ಟು ವೇಗದಲ್ಲಿ...
17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬ೦ಧನ
ಬಂಟ್ವಾಳ : 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬ೦ಧಿಸಿದ್ದಾರೆ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಅಬುಸಾಲಿ (41) ಬ೦ಧಿತ ಆರೋಪಿ.ಪ್ರಕರಣವೊ೦ದರಲ್ಲಿ ಆರೋಪಿಯಾಗಿದ್ದ ಅಬುಸಾಲಿ 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕ...
ಬೋರ್‌ವೇಲ್ ಲಾರಿ ರಿಪೇರಿಗೆ ಬಂದಿದ್ದ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಸಾವು
ಕಡಬ: ಬೋರ್‌ವೇಲ್ ಲಾರಿ ರಿಪೇರಿಗೆ ಬಂದಿದ್ದ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ಸ೦ಭವಿಸಿದೆ.ತಮಿಳುನಾಡಿನ ಪಾರ್ಥಸಾರಥಿ ಊವರಾಜ್ (29)ಮೃತಪಟ್ಟವರು.ತಮಿಳುನಾಡು ನಾಮಕ್ಕಲ್ ಜಿಲ್ಲೆಯ ದಿನೇಶ್ ಕುಮಾರ್ ಅವರ ಬೋರ್‌ವೇಲ್ ಲಾರಿ ರಿಪೇರಿಗಾಗಿ ಬಂದಿದ್ದ ಪಾರ್ಥಸಾರಥಿ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು...
‘ಉತ್ತಮ ಅರೋಗ್ಯಕ್ಕಾಗಿ ಸಂಗೀತ ಆಲಿಸಿ’
ಮಂಗಳೂರು: ‘ಶಾಸ್ತ್ರೀಯ ಸಂಗೀತದ ರಾಗಗಳು ನಮ್ಮ ಮನಸ್ಸಿನ ಮೇಲೆ ಗಾಢ ಪರಿಣಾಮ ಬೀರುವುದು ನಿಜ. ಇದುವೈಜ್ಞಾನಿಕವಾಗಿ ರುಜುವಾಗಿದೆ. ಹಾಗಾಗಿ ಅರೋಗ್ಯಕರ ಜೀವನಕ್ಕಾಗಿ ಉತ್ತಮ ಸಂಗೀತ ಆಲಿಸಿ’ ಎಂದು ಖ್ಯಾತ ವೈದ್ಯ ಡಾ.ಅಶೋಕ ಶೆಣೈ ಸಲಹೆ ನೀಡಿದರು.ವೈದ್ಯ ಕೆ. ಆರ್. ಕಾಮತ್ ಅವರ ನಿವಾಸ ‘ಶ್ರೀ ರಾಮಪ್ರಸಾದ್’ದಲ್ಲಿ ಕಲಾಶಾಲೆ ಮತ್ತು ಸ್ವರಾಲಯ ಸಾಧನಾಫೌಂಡೇಶನ್ ಜಂಟಿಯಾಗಿ...
ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ ನಿಧನ
ಮಂಗಳೂರು:. ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು...
ಅಗಲ್ಪಾಡಿ ಯಾಗ: ಐಕ್ಯಮತ್ಯ ಹೋಮ ಪೂರ್ಣಾಹುತಿ
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳ ಎರಡನೇ ದಿನವಾದ ಗುರುವಾರ ಬೆಳಗ್ಗೆ ಕಲಶ ಸ್ಥಾಪನೆಯಾಗಿ ಐಕ್ಯಮತ್ಯ ಹೋಮ ನಡೆಯಿತು. ಮಧ್ಯಾಹ್ನ...
ಕಾವೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆ
ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಬಿಜೆಪಿಗೆ ಸೋಲಿನ ಭಯ ಈಗಲೇ ಶುರುವಾಗಿದೆ. ಅದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಆರಂಭಿಸಿದ್ದಾರೆ. ಆದರೆ ತಾನು...
ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತ ಮುತ್ತ ನಿಷೇಧಾಜ್ಞೆ
ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೆರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮಾರ್ಚ್ 28 ರಿಂದ ಏಪ್ರಿಲ್ 8ರ ಸೋಮವಾರ ಬೆಳ್ಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ...





