ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ
ಹಳೆಯಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್,...
ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಶಾಸಕ ಹರೀಶ್ ಪೂಂಜ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಲೇವಡಿ ಮಾಡಿದರು.
ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಬುಧವಾರ...
ಅಗಲ್ಪಾಡಿ ಕ್ಷೇತ್ರದಲ್ಲಿ ಯಾಗ: ಭವ್ಯ ಶೋಭಯಾತ್ರೆಯೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಕಾ ಯಾಗದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಮಂಗಳವಾರ ಭವ್ಯ ಶೋಭಯಾತ್ರೆಯೊಂದಿಗೆ ನಡೆಯಿತು.
ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಿಂದ ಆರಂಭಗೊಂಡ ಹಸಿರುವಾಣಿ ಹೊರೆಕಾಣಿಕೆಗೆ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಚಾಲನೆ ನೀಡಿದರು....
ಹುಚ್ಚು ಮನಸ್ಸಿನ ಸಾಹಸ ಯಶಸ್ಸಿಗೆ ಕಾರಣ :ಡಾ.ಎಂ.ಮೋಹನ ಆಳ್ವ
ಮಂಗಳೂರು : ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗ ಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪ್ರೆಸ್ ಕ್ಲಬ್‌ನ...
ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ
ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,...
ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು:“ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಪ್ರತಿ ಬಾರಿ ಧರ್ಮ ಯುದ್ಧದ...
ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ
ಸುರತ್ಕಲ್: ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮಕಲಶೋತ್ಸವ ನೋಡುವ ಭಾಗ್ಯ ನನಗೆ ಸಿಕ್ಕಿದೆ, ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಮುಂದಿನ ಎಪ್ರೀಲ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ ಹೇಳಿದರು .ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏಪ್ರೀಲ್ 26 ರಂದು...
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ. 3ರಂದು ನಾಮಪತ್ರ ಸಲ್ಲಿಕೆ: ಹರೀಶ್ ಕುಮಾರ್
ಮಂಗಳೂರು: ದ.ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎ೦ದು ದ.ಕನ್ನಡ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.ಜಿಲ್ಲಾ ಕಾ೦ಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ....
ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು:ದತ್ತಾತ್ರೇಯ
ಮಂಗಳೂರು: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಯ ಮಾತೇ ಇಲ್ಲವಾಗಿದೆ. ವಾಸ್ತವಿಕ ಅರ್ಥದಲ್ಲಿ ಕಾಂಗ್ರೆಸ್ ಮತ್ತು ಅಭಿವೃದ್ಧಿ ಎರಡೂ ವಿರೋಧ ಪದಗಳು ಎಂದು ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ ದತ್ತಾತ್ರೇಯ ಅವರು ಹೇಳಿದರು.
ದ.ಕ. ಜಿಲ್ಲಾ ಬಿಜೆಪಿ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸರಕಾರ ಬಂದ ಮೇಲೆ...
ಮಾ.29ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ
ಮ೦ಗಳೂರು: ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾ.29ರಿಂದ ಆರಂಭಗೊಳ್ಳಲಿದ್ದು, ಮಾ.31ರವರೆಗೆ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿದೆ.ನಡಾವಳಿ ಉತ್ಸವದ ಪ್ರಯುಕ್ತ ರವಿವಾರ ಗೊನೆ ಮುಹೂರ್ತ ನೆರವೇರಿದೆ. ಮಾ.28ರಂದು ಬೆಳಗ್ಗೆ 8ಕ್ಕೆ ಮಹಾಪೂಜೆ, ಶ್ರೀ ಕ್ಷೇತ್ರ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶುದ್ಧ ಕಲಶ, ಗಣಹೋಮ, ಮಧ್ಯಾಹ್ನ ಮಹಾಪೂಜೆ...








