ತಾಪಮಾನ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳು
ಮಂಗಳೂರು:ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ.ಭಾರತೀಯ ಹವಾಮಾನ ಇಲಾಖೆಯು 2024ರ ಏಪ್ರಿಲ್ 1 ರಂದು ಬಿಡುಗಡೆ ಮಾಡಿದ ಹವಾಮಾನ ಮಾಹೆಯಿಂದ ಮೇ 2024ರ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು...
ಗುಡುಗು – ಸಿಡಿಲು : ಸಲಹೆ/ಸೂಚನೆಗಳು
ಮಂಗಳೂರು:ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು - ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. 'ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ:
ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ...
ಬಹುನಿರೀಕ್ಷಿತ ಕೊಂಕಣಿ ಸಿನಿಮಾ ‘ಪಯಣ್’ ಚಿತ್ರೀಕರಣ ಆರಂಭ
ಮಂಗಳೂರು: ʻಸಂಗೀತ್ ಘರ್ʼ ಬ್ಯಾನರ್ನಡಿಯಲಿ ತಯಾರಾಗುವ ಯೊಡೆಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನಿರ್ದೇಶಕ ಜೋಯಲ್ ಪಿರೇರಾ ಅವರ ಚೊಚ್ಚಲ ಕೊಂಕಣಿ ಚಲನಚಿತ್ರ 'ಪಯಣ್' (ಪ್ರಯಾಣ) ಇದರ ಚಿತ್ರೀಕರಣ ಏಪ್ರಿಲ್ 19 ರಂದು ಮಂಗಳೂರಿನ ʻವೈಟ್ ಡವ್ಸ್ʼ ನಿರಾಶ್ರಿತರ ಆಶ್ರಮದಲ್ಲಿ ಆರಂಭಗೊಂಡಿತು.
ನೀಟಾ ಪೆರಿಸ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ʻಸಂಗೀತ್ ಗುರುʼ ಎಂದೇ ಪ್ರಸಿದ್ಧರಾಗಿರುವ...
ಏಪ್ರಿಲ್ 24ರಿ೦ದ ಮದ್ಯ ನಿಷೇಧ
ಮಂಗಳೂರು:ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12...
ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪ್ರಮುಖರುಅಲ್ಲಿಪಾದೆ, ನಾವೂರು, ಅಮ್ಟಾಡಿ, ಮೂಲರಪಟ್ಣ, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರ, ಸಿದ್ಧಕಟ್ಟೆ, ರಾಯಿ, ಪಂಜಿಕಲ್ಲು, ಕುಕ್ಕಿಪ್ಪಾಡಿ, ಬಸ್ತಿಕೋಡಿ, ಇರ್ವತ್ತೂರುಪದವು, ಕಾವಲ್...
ಕ್ಯಾ. ಚೌಟರು ಅತಿದೊಡ್ಡ ಅಂತರದಿಂದ ಗೆಲುವು ಸಾಧಿಸಲು ಶ್ರಮ : ಅಣ್ಣಾಮಲೈ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪ್ರಣಾಳಿಕೆ ಬಿಡುಗಡೆಯಾಗಿದೆ. 2019ರಲ್ಲಿ ಬಿಜೆಪಿ ಕೇಂದ್ರ ಪಕ್ಷದ ಪ್ರಣಾಳಿಕೆಯಲ್ಲಿ 295 ಅಂಶಗಳಿದ್ದವು. ಅವುಗಳನ್ನು ಸರಕಾರ ಪೂರ್ಣವಾಗಿ ಜಾರಿಗೊಳಿಸಿದೆ. ಈಗ 2024ರ ಪ್ರಣಾಳಿಕೆಯನ್ನೂ ಪ್ರಧಾನಿ ಮೋದಿಯವರು ಪ್ರಕಟಿಸಿದ್ದಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರು ಹೇಳಿದರು.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ...
ಮೋರ್ಗನ್ಸ್ ಗೇಟ್ ನಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ಇಲ್ಲಿನ ಮೋರ್ಗನ್ಸ್ ಗೇಟ್, ಬೋಳಾರ ಪರಿಸರದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ರೋಡ್ ಶೋ ನಡೆಸಿ, ಮತ ಯಾಚಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಉತ್ತಮ ಆಡಳಿತ ನೀಡಿರುವ ಕಾಂಗ್ರೆಸ್ ಮೇಲೆ ಜನರು ಭರವಸೆ ಇಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ...
ಮಹಾವೀರರ ಚಿಂತನೆಗಳು ವಿಶ್ವಕ್ಕೆ ಅನ್ವಯಿಸುವಂತದ್ದು: ಜಿಲ್ಲಾಧಿಕಾರಿ
ಮಂಗಳೂರು: ಸಕಲ ಜೀವ ರಾಶಿಗಳಿಗೂ ಬದುಕುವ ಹಕ್ಕಿದ್ದು, ಅದನ್ನು ಸಮಾನವಾಗಿ ನೋಡುವ ಚಿಂತನೆ ಜೈನ ಧರ್ಮದಲ್ಲಿ ಒಡಮೂಡಿದೆ. ರಾಜನಾಗಿ ಹುಟ್ಟಿ ಸಕಲವನ್ನೂ ಪರಿತ್ಯಜಿಸಿ ಆತ್ಮ ಸದ್ವಿಚಾರಕ್ಕಾಗಿ ಸತ್ ಚಿಂತನೆಗಳನ್ನು ರೂಢಿಸಿಕೊಂಡ ಭಗವಾನ್ ಮಹಾವೀರರ ತತ್ವಗಳು ಅನುಕರಣನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿಪ್ರಾಯಪಟ್ಟರು.
ಅವರು ಏ.22 ರ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಕಾಂಗ್ರೆಸ್ ಸರಕಾರ ಬಂದಾಗೆಲ್ಲ ಆತಂಕವಾದ ತಾಂಡವ: ನಳಿನ್ ಕುಮಾರ್ ಕಟೀಲ್
ಮಂಗಳೂರು: ರಾಜ್ಯದಲ್ಲಿ ಯಾವಾಗೆಲ್ಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬರುತ್ತದೋ ಆಗೆಲ್ಲ ಈ ರಾಜ್ಯದಲ್ಲಿ ಆತಂಕವಾದ ತಾಂಡವವಾಡುತ್ತದೆ. ಕಾಂಗ್ರೆಸ್ ಗೆ ಬಹುಮತ ಬಂದು ಮೆರವಣಿಗೆ ಮಾಡುವಾಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗುತ್ತದೆ. ರಸ್ತೆಯಲ್ಲಿ ಮೊಳಗಿದ ಆ ಘೋಷಣೆ, ವಿಧಾನ ಸೌಧದೊಳಗೂ ವ್ಯಾಪಿಸುತ್ತದೆ. ದೇಶವಿರೋಧಿ ಹೇಳಿಕೆ ಕೊಟ್ಟವರನ್ನು ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದರೂ ಅವರನ್ನು ಕಾಂಗ್ರೆಸ್...
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ
ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಎ.26ರಂದು ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಉಗ್ರಾಣ ಮುಹೂರ್ತ ಕಾರ್ಯಕ್ರಮವು ತಂತ್ರಿವರೇಣ್ಯ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಸೋಮವಾರ ಬೆಳಗ್ಗೆ ನಡೆಯಿತು.ಪ್ರಾರಂಭದಲ್ಲಿ ಕೊಡಮಣಿತ್ತಾಯ ದೈವಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ...







