ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ :17,96,826 ಮತದಾರರು
ಮ೦ಗಳೂರು:ಭಾರತ ಚುನಾವಣಾ ಆಯೋಗ ಮಾ. 16ರಂದು ಹೊರಡಿಸಿದ ಆದೇಶದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ರ ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿದಿನಾಂಕ : 26.04.2024 ರ೦ದು ಚುನಾವಣೆ ನಡೆಯಲಿದೆ ಎ೦ದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು..ಮಾದರಿ ನೀತಿ ಸಂಹಿತೆಯು ಈಗಾಗಲೇ ಜ್ಯಾರಿಗೆ ಬಂದಿದ್ದು ಮಾ. 16...
ಬೆ೦ಗಳೂರು:ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ‘ಸಿಂಟಾಕ್ಸಿಯಾ’
ಬೆ೦ಗಳೂರು: ಬೆಂಗಳೂರಿನ ಸಂತ ಜೋಸೆಫ್ ಯೂನಿವರ್ಸಿಟಿಯ ವಾರ್ಷಿಕ ಕಾರ್ಯಕ್ರಮವಾದ ‘ಸಿಂಟಾಕ್ಸಿಯಾ’ ಮಾರ್ಚ್ 12 ಮತ್ತು 13ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ನಡೆಯಿತು. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಈವೆಂಟ್ ಗಳು ನಡೆದವು.ಎಐ ನೆಕ್ಸಸ್ ಹೆಲ್ತ್ಕೇರ್‌ನ ಭಾರತ ಮತ್ತು ಉಪಖಂಡದ ವ್ಯವಸ್ಥಾಪಕ ಮತ್ತು ಸಂಸ್ಥಾಪಕ ಪೀಟರ್ ಪುಷ್ಪರಾಜ್ ಅವರು ಈ ಸಂದರ್ಭದಲ್ಲಿ...
ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡ,ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಎಪ್ರಿಲ್ 26ರ೦ದು ಮತದಾನ
ಬೆಂಗಳೂರು: ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾ೦ಕ ಪ್ರಕಟಿಸಿದ್ದು ದಕ್ಷಿಣ ಕನ್ನಡ,ಉಡುಪಿ-ಚಿಕ್ಕಮಗಳೂರುಕ್ಷೇತ್ರಗಳಲ್ಲಿ ಎಪ್ರಿಲ್ 26ರ೦ದು ಮತದಾನ ನಡೆಯಲಿದೆ.ಜೂನ್ 4 ರಂದು ಫಲಿತಾಂಶಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಪ್ರಥಮ ಹ೦ತದಲ್ಲಿ 14 ಕ್ಷೇತ್ರಗಳಲ್ಲಿ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.
ಪ್ರಥಮ ಹ೦ತ:ಮತದಾನ...
ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 15 ಲಕ್ಷ ರೂ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸುಮಸದನ ಎದುರಿನ ರಸ್ತೆಗೆ ಅತೀ ಅಗತ್ಯವಾಗಿ ಕಾಂಕ್ರೆಟೀಕರಣವಾಗಬೇಕಿರುವ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರಾದ ಮನೋಹರ್ ಶೆಟ್ಟಿ...
ಮಂಗಳೂರು ಮಹಾನಗರಪಾಲಿಕೆ: ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ
ಮಂಗಳೂರು: ಮಹಾನಗರಪಾಲಿಕೆಯ ಶೇ 24.10, ಶೇ7.25 ಮತ್ತು ಶೇ.5 ನಿಧಿಯಡಿ ಮಹಾನಗರಪಾಲಿಕೆ ವ್ಯಾಪ್ತಿಯ ಸುಮಾರು 33 ಫಲಾನುಭವಿಗಳಿಗೆ ಮೇಯರ್ ಸುಧೀರ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ 13,51,425 ರೂ ಮೊತ್ತದ ಚೆಕ್ಕನ್ನು ವಿತರಿಸಲಾಯಿತು. ಮೇಯರ್ ಅವರ ಕೊಠಡಿಯಲ್ಲಿ ಆಯೋಜಿಸಲಾದ ಕಾಯ೯ಕ್ರಮದಲ್ಲಿ ಶೇ 24.10 ಯೋಜನೆಯಡಿ ಬರುವ ಪರಿಷಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಮನೆ ದುರಸ್ತಿ,...
ಬಿಜೆಪಿ: ಸಂಕಲ್ಪ ಪತ್ರ ಬಿಡುಗಡೆ
ಮಂಗಳೂರು: ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವತಿಯಿಂದ ನಿಮ್ಮ ಸಲಹೆ, ನಮ್ಮ ಸಂಕಲ್ಪ ದ ಸಂಕಲ್ಪ ಪತ್ರ ಬಿಡುಗಡೆ ಕಾರ್ಯಕ್ರಮದ ಜರಗಿತು.ಲೆಕ್ಕಪರಿಶೋಧಕ ಶಾಂತಾರಾಮ ಶೆಟ್ಟಿ, ಮಂಗಳೂರು ಲೋಕಸಭಾ ಚುನಾವಣ ಅಭ್ಯರ್ಥಿ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಮೇಯರ್, ಸುಧೀರ್ ಶೆಟ್ಟಿ ಕಣ್ಣೂರು, ನಿತಿನ್ ಕುಮಾರ್, ಸಂಜಯ್ ಪ್ರಭು, ಉಪಸ್ಥಿತರಿದ್ದರು.
ಆಳ್ವಾಸ್ ನಿಂದ 10 ಕೋಟಿಗೂ ಮಿಕ್ಕಿದ ವಿದ್ಯಾರ್ಥಿವೇತನ: ಡಾ.ಎಂ. ಮೋಹನ್ ಆಳ್ವ
ಮಾ.31, ಎ.14ರಂದು ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ
ಮಂಗಳೂರು: "ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ,ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂಅಧಿಕ ಮೌಲ್ಯದ ಶೈಕ್ಷಣಿಕ...
ಮೂಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳಿ೦ದ ಅನಿರೀಕ್ಷಿತ ಭೇಟಿ ; ದೊಡ್ಡ ಪ್ರಮಾಣದ ಹಣ ಪತ್ತೆ
ಮಂಗಳೂರು: ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಮೂಡ ಕಚೇರಿಗೆ ಮಾ. 13ರಂದು ಸಂಜೆ ಮಂಗಳೂರು ಲೋಕಾಯುಕ್ತಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಿದರು.ಪರಿಶೀಲನೆ ನಡೆಸಿದಾಗ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿಗಳಲ್ಲಿ ದೊಡ್ಡ ಪ್ರಮಾಣದ ಹಣವಿದ್ದು, ಸೂಕ್ತ...
65 ವರ್ಷಗಳ ನಂತರ ಕೊಂಗೂರಿಗೆ ರಸ್ತೆ : ಸ್ಥಳೀಯರ ಸಂಭ್ರಮ
ಮ೦ಗಳೂರು: ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.
ಶಾಸಕರು ಮಾತನಾಡಿ ಕಳೆದ 65 ವರ್ಷಗಳಿಂದ ಇಲ್ಲಿನ ಸ್ಥಳೀಯರು ರಸ್ತೆಯಿಲ್ಲದೇ ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿಯವರು...
ಎಸ್.ಎಸ್.ಎಲ್.ಸಿ: ಸುಗಮವಾಗಿ ಪರೀಕ್ಷೆ ಬರೆಯಲು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಾ.25ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸ್ ಎಸ್ ಎಲ್ ಸಿ 2024ರ ಪರೀಕ್ಷಾ ಸಿದ್ಧತೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್.ಎಸ್.ಎಲ್. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ...







