ರೋಹನ್ ಸಿಟಿ ಸ್ಮರಣೀಯ ಸಾಧನೆ: 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳು
ಮ೦ಗಳೂರು: ಸುರಕ್ಷತೆಗೆ ಸಾಕ್ಷಿಯಾಗಿ, ರೋಹನ್ ಕಾರ್ಪೊರೇಶನ್ ಮಾ.6 ರಂದು ರೋಹನ್ ಸಿಟಿ ಬಿಜೈನಲ್ಲಿ 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳನ್ನು ತಲುಪಿದ ಗಮನಾರ್ಹ ಸಾಧನೆಯನ್ನು ಆಚರಿಸಿತು. 5ನೇ ರಾಷ್ಟ್ರೀಯ ಸುರಕ್ಷತಾ ದಿನದ ವಾರದ ಅಭಿಯಾನದಲ್ಲಿ ಸಾಧಿಸಿದ ಮೈಲಿಗಲ್ಲು, ಸುರಕ್ಷತೆ ಮತ್ತು ಯೋಗಕ್ಷೇಮದ ಸಂಸ್ಕೃತಿಯನ್ನು ಬೆಳೆಸುವಲ್ಲಿ ರೋಹನ್ ಕಾರ್ಪೊರೇಶನ್ ಬದ್ಧವಾಗಿದೆ.
ಈ ಐತಿಹಾಸಿಕ ಕ್ಷಣವನ್ನು ಕಾರ್ಮಿಕರು, ಉದ್ಯೋಗಿಗಳು...
ಬಜರಂಗದಳದ ಮುರಳಿಕೃಷ್ಣ ಹಸಂತಡ್ಕ ಬಂಧನ; ಜಿಲ್ಲಾ ಬಿಜೆಪಿ ಖಂಡನೆ
ಮ೦ಗಳೂರು: ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ,ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿ೦ದ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್ ನಲ್ಲಿ ಪೊಲೀಸರು ಬಂಧಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದು ಸರಕಾರದ ಈ ನಡೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ...
ಜನಜಾಗೃತಿ ರಥಕ್ಕೆ ಚಾಲನೆ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಬಾಲಕಾರ್ಮಿಕ ಯೋಜನಾ ಸಂಘದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ಮಾನವ ಕಳ್ಳ ಸಾಗಣಿಕೆ ತಡೆ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಾ.6 ರಂದು...
ಮಾ. 7 ರಂದು ಗ್ಯಾರಂಟಿ ಸಮಾವೇಶ
ಮಂಗಳೂರು: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಾಗೂ ಜಿಲ್ಲೆಯ ಪ್ರತಿ ಅರ್ಹ ಪಲಾನುಭವಿಗೆ ಈ ಯೋಜನೆಗಳ ಸೌಲಭ್ಯವನ್ನು ಪರಿಣಾಮಕಾರಿಯಾಗಿ ತಲುಪಿಸಲು ಪ್ರತಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿದೆ.
ಮಂಗಳೂರು ತಾಲೂಕಿನಲ್ಲಿ ಮಾ. 7 ರಂದು ಗುರುವಾರ ಸಂಜೆ 4.30ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು...
ರಾಷ್ಟ್ರೀಯ ಲೋಕ ಅದಾಲತ್ ಮುಂದೂಡಿಕೆ
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇದೇ ಮಾರ್ಚ್ 9 ರಂದು ಶನಿವಾರ ನಡೆಯಬೇಕಿದ್ದ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾರ್ಚ್ 16 ರ ಶನಿವಾರಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳಿಂದ ಚೆಕ್ ಪೋಸ್ಟ್ ಪರಿಶೀಲನೆ
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಂಗಳೂರು ನಗರ ಪೆÇಲೀಸ್ ಆಯುಕ್ತ ಅನುಪಮ ಅಗರ್ವಾಲ್ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾ.6ರ೦ದು ತಲಪಾಡಿ, ದೇವಿನಗರ, ಮುಡಿಪುಗಳಲ್ಲಿ ರಚಿಸಲಾದ ಚೆಕ್ ಪೋಸ್ಟ್ ಗಳಲ್ಲಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು.
ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ
ಮಂಗಳೂರು,: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 2024ನೇ ಸಾಲಿನ ಬೇಸಿಗೆಯಲ್ಲಿ ಸಂಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ, ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಅನ್ವಯವಾಗುವಂತೆ ಸಹಾಯವಾಣಿ ತೆರೆಯಲಾಗಿದೆ.
ಸಾರ್ವಜನಿಕರು ದೂರವಾಣಿ ಸಂಖ್ಯೆ: 0824-2951583 ಅಥವಾ ಮೊಬೈಲ್ ಸಂಖ್ಯೆ: 7204653395 ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎನ್ ಐಟಿಕೆ : ಎಸ್ ಡಿಎಎಎಂಸಿಐ ಕುರಿತು ಕಾರ್ಯಾಗಾರ
ಮಂಗಳೂರು, ಮಾ.6: ಸುರತ್ಕಲ್ ನ ಎನ್ ಐಟಿಕೆ ಮೈನಿಂಗ್ ಇಂಜಿನಿಯರಿಂಗ್ ವಿಭಾಗವು "ಸೇಫ್ಟಿ ಡಾಟಾ ಅನಾಲಿಟಿಕ್ಸ್, ಅಪ್ಲಿಕೇಷನ್ಸ್ ಇನ್ ಮೈನಿಂಗ್ ಮತ್ತು ಇತರ ಕೋರ್ ಇಂಡಸ್ಟ್ರೀಸ್ (ಎಸ್ ಡಿಎಎಎಂಸಿಐ) 2024" ಎಂಬ ಒಂದು ವಾರದ ಕಾರ್ಯಾಗಾರವನ್ನು ಆಯೋಜಿಸಿದ್ದು ಕಾರ್ಯಾಗಾರವು ಮಾ. 6ರಿ೦ದ ಮಾ. 12 ರವರೆಗೆ ನಡೆಯಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ (ಡಿಎಸ್ಟಿ)...
ಮಂಗಳೂರು ವಿವಿ: ಬೋಧಕರ ಪುನಶ್ಚೇತನಾ ಕಾರ್ಯಾಗಾರ ಮುಕ್ತಾಯ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ. - ಎ.ಟಿ.ಎ.ಎಲ್ಸ ಹಯೋಗದೊಂದಿಗೆ ಆಯೋಜಿಸಲಾದ, ಒಂದು ವಾರದ ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ಲ ರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್ ಎಂಬ ಬೋಧಕರ ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ ಐ.ಬಿ.ಎಂ. ಸೆಂಟರ್ ಆಫ್ ಎಕ್ಸಲೆನ್ಸ್ ಹಾಲ್ ನಲ್ಲಿ ಇತ್ತೀಚೆಗೆನಡೆಯಿತು.ಮುಖ್ಯ...
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ವಿಡಿಯೋ ಸಂವಾದ,ಶುಭಹಾರೈಕೆ
ಮಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ರಾಜ್ಯದ್ಯಂತ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಶೇ. ನೂರರಷ್ಟು ಶ್ರಮವಹಿಸಿ ಓದುವ ಮೂಲಕ ಹೆಚ್ಚು ಅಂಕಗಳಿಸಿ ಚಾಂಪಿಯನ್ ಗಳಾಗುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕರೆ ನೀಡಿದರು.
ಅವರು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ...






