ಸೇತುವೆಗಳ ಪಕ್ಕದಲ್ಲಿ ಸಿ.ಸಿ ಟಿವಿ ಅಳವಡಿಕೆ – ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು: ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳಲ್ಲಿ ಬರುವ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಬುಧವಾರ ಪೋಳಲಿ-ಅಡ್ಡೂರು ರಾಜ್ಯ ಹೆದ್ದಾರಿಯ ಸೇತುವೆಯ ಬಲಗೊಳಿಸುವ ಕಾಮಗಾರಿಯನ್ನು ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನದಿಗಳ ಸೇತುವೆಗಳ ಆಸು ಪಾಸಿನಲ್ಲಿ ಮರಳನ್ನು ಎತ್ತುವುದರಿಂದ ಸೇತುವೆಗಳು...
ಸಾಲ ಪಡೆದವರಿಗೆ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಲು ಸೂಚನೆ
ಮಂಗಳೂರು ಫೆ.5: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪೆನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ...
ರಂಗಮಂದಿರ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಮಂಗಳೂರು ನಗರದಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಬುಧವಾರ ರಂಗಮಂದಿರ ನಿರ್ಮಾಣ ಕುರಿತು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗ ರಂಗಮಂದಿರ ನಿರ್ಮಾಣ ಸಂಬಂಧ ರೂ. 9.95 ಕೋಟಿ ಅಂದಾಜು ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ...
ಫೆ.8: “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ
ಮಂಗಳೂರು: “ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8ರಂದು ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದ್ದು ರಾತ್ರಿ 8:30ರವರೆಗೆ ಕಾರ್ಯಕ್ರಮ...
ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ
ಮ೦ಗಳೂರು: ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದ್ದು ಫೆಬ್ರವರಿ 9ರ೦ದು ಬಿಜೈ ಚರ್ಚ್ ಸಭಾಂಗಣದಲ್ಲಿ ಶತಮಾನೋತ್ಸವದ ಉದ್ಘಾಟನೆ ನೆರವೇರಲಿದೆ.ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಞರ್ ಅತೀ ವಂದನೀಯ ಫಾ| ಮ್ಯಾಕ್ಸಿಮ್ ನೊರೊನ್ಹಾರವರು ಶತಮಾನೋತ್ಸವದ ಲಾಂಛನವನ್ನು ಬಿಡುಗಡೆ ಮಾಡಲಿದ್ದಾರೆ....
ಸವಿತಾ ಮಹರ್ಷಿ ಜಯಂತಿ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಸವಿತಾ ಸಮಾಜ ಇವರ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಮಂಗಳವಾರ ನಗರದ ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ್ ಭಂಡಾರಿ ಹೊಸಬೆಟ್ಟು ಮಾತನಾಡಿ, ಸವಿತಾ ಸಮಾಜ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾ ದ ಉದ್ಯಮಿಯಿಂದ 1.25 ಕೋಟಿ ದೇಣಿಗೆ
ಮ೦ಗಳೂರು: ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ,ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾ ಪ್ರಸಾದ್ ರವರು ಹಾಗೂ ಅವರ ಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ಶುಭದಿನವೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು...
“ಫೆ.22ರಂದು ಹೊಂಬೆಳಕು ಎರಡನೇ ಆವೃತ್ತಿಯ ಕಾರ್ಯಕ್ರಮ“
ಮಂಗಳೂರು: “ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು...
ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ
ಮಂಗಳೂರು,: ಜಿಲ್ಲಾ ಕೌಶಲ್ಯ ಮಿಷನ್ ಸಭೆ ಜನವರಿ 31 ರಂದು ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಮಾತನಾಡಿ, ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ನೀಡಲು ಪ್ರಾರಂಭಿಸಿದ್ದು, ಜಿಲ್ಲೆಯ ಯುವನಿಧಿ ಫಲಾನುಭವಿಗಳು ಕೌಶಲ್ಯ...
ಕೋಡಿಕಲ್ : ಡಾ.ಬಿ.ಆರ್ ಅಂಬೇಡ್ಕರ್ ಸಮಾಜ ಭವನ ಉದ್ಘಾಟನೆ
ಕೋಡಿಕಲ್: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಅವರು ಪ್ರತಿನಿಧಿಸುತ್ತಿರುವ ವಾರ್ಡ್ 17ರ ಕೋಡಿಕಲ್ ಶಾಲೆಯ ಬಳಿ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ರವಿವಾರ ನಡೆಯಿತು.ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಾತನಾಡಿ,ಬಾಬಾ ಸಾಹೇಬ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದಾಗ ಸಮಾಜದಲ್ಲಿ ಶಿಕ್ಷಣದೊಂದಿಗೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ....