ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟನೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣಾ ಕಚೇರಿ ಬಂಟ್ಸ್ ಹಾಸ್ಟೆಲ್ ಬಳಿ ಗುರುವಾರ ಉದ್ಘಾಟನೆಗೊ೦ಡಿತು. ಸ೦ಸದ ನಳಿನ್ ಕುಮಾರ್ ಕಟೀಲು ಅವರು ಅವರು ಕಚೇರಿಯನ್ನು ಉದ್ಘಾಟಿಸಿದರು.ಈ ಕಚೇರಿ ಭಾರತೀಯ ಜನತಾ ಪಾರ್ಟಿಯ ಪಾಲಿಗೆ ಅದೃಷ್ಟದ ಕಚೇರಿಯಾಗಿದ್ದು 2004 ರಿ೦ದ ನಡೆದ ಎಲ್ಲಾ ಚುನಾವಣೆಗಳಲ್ಲಿ ಈ ಚುನಾವಣಾ ಕಚೇರಿ ಬಿಜೆಪಿ ಪಾಲಿಗೆ ಜಯತ೦ದು ಕೊಟ್ಟಿದೆ.ಈ...
ಜಾನುವಾರುಗಳ ಆಕಸ್ಮಿಕ ಸಾವು: ಅನುಗ್ರಹ ಯೋಜನೆಯಡಿ ಅರ್ಜಿ ಆಹ್ವಾನ
ಮಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಅನುಗ್ರಹ ಯೋಜನೆಯಡಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರಿಗೆ ಗರಿಷ್ಠ 10,000 ಪರಿಹಾರ ಧನ ವಿತರಿಸಲಾಗುತ್ತದೆ.ಸದರಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಕಂತುಗಳಲ್ಲಿ ಒಟ್ಟು ರೂ. 44 ಲಕ್ಷ ಅನುದಾನ ಹಂಚಿಕೆಯಾಗಿದೆ. ಆಕಸ್ಮಿಕ ಮರಣ ಹೊಂದಿದ ರಾಸುಗಳ (ಹಸು, ಎಮ್ಮೆ, ಎತ್ತು, ಕುರಿ/ಆಡು/ಮೇಕೆ) ಜಾನುವಾರು...
ಕೆಟಿಎಂ ಕನ್ನಡ ಚಲನ ಚಿತ್ರ ಫೆಬ್ರವರಿ 16 ಕ್ಕೆ ತೆರೆಗೆ
ಮಂಗಳೂರು: ಮಹಾಸಿಂಹ ಮೂವೀಸ್ ಲಾಂಛನದಲ್ಲಿ ತಯಾರಾದ ದೀಕ್ಷಿತ್ ಶೆಟ್ಟಿ ಅಭಿನಯದ ಕೆಟಿಎಂ ಕನ್ನಡ ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಟಿ ಉಷಾ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಕನ್ನಡದ ದಿಯಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ದಕ್ಷಿಣಕನ್ನಡ ಜಿಲ್ಲೆಯ ಬೇರೆ ಬೇರೆ ತಾಣಗಳಲ್ಲಿ ಕೆಟಿಎಂ ಸಿನಿಮಾಕ್ಕೆ ಚಿತ್ರೀಕರಣ...
ನಮೋ ಬ್ರಿಗೇಡ್ ವತಿಯಿ೦ದ ಶಿಲ್ಪಿಗಳು ಹಾಗೂ ಚಿತ್ರಕಾರರಿಗೆ ಸಮ್ಮಾನ
ಮ೦ಗಳೂರು: ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಫೆಬ್ರವರಿ 14 ರಂದು ' ಮೈ ಲವ್ ಮೈ ನೇಶನ್' ಅಭಿಯಾನದಡಿ ಶಿಲ್ಪಿಗಳನ್ನು ಹಾಗೂ ಚಿತ್ರಕಾರರನ್ನು ಸನ್ಮಾನಿಸುವ ಕಾರ್ಯ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ಬುಧವಾರ ನಡೆಯಿತು.ಸನ್ಮಾನ ಸ್ವೀಕರಿಸಿದ ಜಯಪ್ರಕಾಶ್, ವಿನಾಯಕ ಶೇಟ್, ಕಿಶೋರ್ ಪೈ, ಸುಧಾಮ ಆಚಾರ್ಯ, ರಾಮಚಂದ್ರ ಆಚಾರ್ಯ,...
ಪುತ್ತೂರು: ಚಿನ್ನಾಭರಣಗಳು ತುಂಬಿದ್ದ ಪಸ್‌೯ ಕಳವು
ಮ೦ಗಳೂರು: ಬಸ್ಸು ಹತ್ತುವ ಸಮಯ ಮಹಿಳೆಯ ಹ್ಯಾಂಡ್ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳು ತುಂಬಿದ್ದ ಪಸ್‌೯ ಕಳವು ಮಾಡಿರುವ ಘಟನೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ನಡೆದಿದೆ.ಮಹಿಳೆಯೋವ೯ರು ತನ್ನ ತ೦ದೆಯ ಜತೆ ಜ. 12 ರಂದು ಬೆಳಿಗ್ಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಮಂಗಳೂರಿನಿಂದ ಬಂದ ಮೈಸೂರು ಬಸ್ಸುಹತ್ತಿದ್ದರು. ಬಸ್ಸಿನಲ್ಲಿ ತುಂಬಾ ಪ್ರಯಾಣಿಕರಿದ್ದುದರಿಂದ ನಿಂತು ಕೊಂಡು ಹ್ಯಾಂಡ್...
ಫೆ. 25ರಂದು ಲಿಖಿತಾ ಪರೀಕ್ಷೆ: ಸೂಚನೆ
ಮಂಗಳೂರು : 2022-23ನೇ ಸಾಲಿನ ಪೋಲೀಸ್ ಕಾನ್ ಸ್ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ, ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆ. 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತಾ ಪರೀಕ್ಷೆಯನ್ನು ನಡೆಸಲಾಗುತ್ತದೆ.ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ...
ಫೆ.26ಹಾಗೂ 27ರಂದು ಬೃಹತ್ ಉದ್ಯೋಗ ಮೇಳ
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26 ಹಾಗೂ 27 ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ,...
ಬ್ಯಾಂಕ್ ಗಳ ಸುರಕ್ಷತೆ: ಮುಖ್ಯಸ್ಥರ ಜತೆ ಪೊಲೀಸ್ ಅಧೀಕ್ಷಕರ ಸಭೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ, ಜ.13 ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಅವರ ಉಪಸ್ಥಿತಿಯಲ್ಲಿ ಎಲ್ಲಾ ಬ್ಯಾಂಕ್ ಮುಖ್ಯಸ್ಥರು ಗಳೊಂದಿಗೆ ಸಭೆಯನ್ನು ನಡೆಸಲಾಯಿತು.
ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಲಾಯಿತು. ಸಭೆಯಲ್ಲಿ ನೀಡಲಾಗಿರುವ...
ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ
ಮ೦ಗಳೂರು: ಧರ್ಮ ಸೂಕ್ಷ್ಮತೆಯನ್ನು ಮರೆತು ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮುಗ್ಧ ವಿದ್ಯಾರ್ಥಿಗಳ ಮುಂದೆ ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿದ ಶಿಕ್ಷಕಿಯ ನಡೆ ಖಂಡನೀಯವಾಗಿದ್ದು, ಘಟನೆ ತೀವ್ರ ಸ್ವರೂಪ ಪಡೆದಿದ್ದರೂ ಸಂತ ಜೆರೋಸಾ ಶಿಕ್ಷಣ ಸಂಸ್ಥೆ ಇಂತಹ ಶಿಕ್ಷಕಿಯನ್ನು ರಕ್ಷಿಸಲು ಯತ್ನಿಸಿದ್ದು ಅತ್ಯಂತ ಹೇಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು...
ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಪ್ರವೇಶಾತಿ ಅಧಿಸೂಚನೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಮತ್ತು ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ...






