ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ : ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ
ಮಂಗಳೂರು: ದ. ಕ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವು ಫಾದರ್ ಮುಲ್ಲರ್...
ಸೆ.15ರಂದು ಬೃಹತ್ ಮಾನವ ಸರಪಳಿ : ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ 1ಲಕ್ಷಕ್ಕೂ ಜನರು ಅಧಿಕ ಭಾಗಿ
ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರವರೆಗೆ ಸೆಪ್ಟೆಂಬರ್ 15ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ.ಈ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ ತಾಲೂಕಿನ ಹೆಜಮಾಡಿ ಟೋಲ್‍ಗೇಟ್ ನಿಂದ ಸುಳ್ಯ ತಾಲೂಕಿನ...
ಪ್ಲಾಸ್ಟಿಕ್ ನಿರ್ಮೂಲನಕ್ಕೆ ಜನ ಜಾಗೃತಿ ಮೂಡಿಸುವ ಅಗತ್ಯವಿದೆ :ಸ್ಪೀಕರ್ ಯು. ಟಿ .ಖಾದರ್
ಮಂಗಳೂರು: ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿಗಳ ಕುರಿತು ಜನಜಾಗೃತಿ ಮೂಡಿಸುವ ಕೆಲಸಗಳನ್ನು ಸಂಘ ಸಂಸ್ಥೆಗಳು ಮಾಡಬೇಕು. ಇದನ್ನು ಸಂಪೂರ್ಣ ನಿಯಂತ್ರಿಸಲು ಜನರ ಸಹಭಾಗಿತ್ವ ಅಗತ್ಯ ಇದೆ ಎಂದು ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ್ ಹೇಳಿದರು.ನೂತನವಾಗಿ ಆರಂಭಗೊಂಡ ಸ್ವಚ್ಚ ಪರಿಸರ ಪ್ರತಿಷ್ಠಾನ ವನ್ನು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಉದ್ಘಾಟಿಸಿ ಮಾತನಾಡಿದ...
ಸೆ.13 ರಂದು ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ತೆರೆಗೆ
ಮಂಗಳೂರು: ಈಗಾಗಲೇ ಅನೇಕ ಮಂದಿ ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗ ಪ್ರವೇಶಿಸಿ ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ ‘ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ.ನಿರ್ದೇಶಕ ಸುಮನ್ ಸುವರ್ಣ ಮಾತನಾಡಿ, “ಹಿಮಾನಿ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಶರತ್ ಕುಮಾರ್ ಎ.ಕೆ. ನಿರ್ಮಾಣ ಮಾಡಿದ್ದಾರೆ....
ಸಂಗೀತ ನಿರ್ದೇಶಕ ಗುರುಕಿರಣ್ ಗೆ ಗೌರವ ಡಾಕ್ಟರೇಟ್ ಪ್ರದಾನ
ಬೆಂಗಳೂರು : ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಬೆಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 10 ರಂದು ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿತು.ಕಲೆ,ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಗೌರವ ಲಭಿಸಿದೆ
ಹಿರಿಯ ನಾಗರಿಕರ ಕ್ರೀಡಾಕೂಟ
ಮಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು.ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ...
ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ
ಮಂಗಳೂರು[: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ...
ಗಣೇಶ ಕೇಳಿದ ವರ ಕೊಡುವ ದೇವರು :ನಾಗರಾಜ ಶೆಟ್ಟಿ
ಮಂಗಳೂರು: ಗಣಪತಿಯು ಭಕ್ತರ ಇಷ್ಟಾರ್ಥ ಈಡೇರಿಸುವ ದೇವರು ಎಂದು ಮಾಜಿ ಸಚಿವ ಬಿ.ನಾಗರಾಜ್ ಶೆಟ್ಟಿ ಅವರು ಹೇಳಿದರು.ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭದ...
ಅಸಂಘಟಿತ ಕಾರ್ಮಿಕರ ಸೌಲಭ್ಯ : ಹೆಸರು ನೋಂದಾಯಿಸಲು ಸೂಚನೆ
ಮಂಗಳೂರು: ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ.
ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುವ ಡೆಲಿವರಿ...
ʻಸಾಹಿತ್ಯದ ಮೂಲಕವೂ ಪ್ರತಿಭಟನೆ ವ್ಯಕ್ತಪಡಿಸಬಹುದುʼ : ಮೆಲ್ವಿನ್ ಪಿಂಟೊ ನೀರುಡೆ
ಮ೦ಗಳೂರು: ನಾವು ನೇರವಾಗಿ ಹೇಳಲಾಗದುದನ್ನು ಸಾಹಿತ್ಯದ ಮೂಲಕ ಹೇಳಿ ಅನ್ಯಾಯದ ವಿರುದ್ದ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಬಹುದುʼ ಎಂದು ಕೊಂಕಣಿಯ ಪ್ರಮುಖ ಸಮಕಾಲೀನ ಕಥೆಗಾರ ಮೆಲ್ವಿನ್ ಪಿಂಟೊ ನೀರುಡೆ ಹೇಳಿದರು. ಅವರು ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಆರಂಭಿಸಿರುವ ʻಬೋಲ್ಕಾಂವ್ʼ ಮಾಸಿಕ ಸಾಹಿತ್ಯಾವಲೋಕನದ ಮೊದಲ ಸಭೆಯಲ್ಲಿಸಣ್ಣ ಕಥೆಗಳು ಮತ್ತು ನಾನುʼ ಎಂಬ...