ಮೌಢ್ಯತೆ ತೊರೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಸಿ. ಆರ್. ಚಂದ್ರಶೇಖರ್
ಮಂಗಳೂರು: ಸಮಾಜದಲ್ಲಿರುವ ಮೌಢ್ಯತೆಯ ಮನೋಭಾವವನ್ನು ತೊರೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ. ಬದುಕಿನ ಪ್ರತಿ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿತುಕೊಳ್ಳಿ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯಾಧ್ಯಕ್ಷ, ಖ್ಯಾತ ಮನೋವೈದ್ಯ ಹಾಗೂ ಪದ್ಮಶ್ರೀಪ್ರಶಸ್ತಿ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ,...
ಹಿರಿಯ ಪತ್ರಕರ್ತ, ವಾಗ್ಮಿ, ನಿರೂಪಕ ಮನೋಹರ್ ಪ್ರಸಾದ್ ನಿಧನ
ಮಂಗಳೂರು: ಹಿರಿಯ ಪತ್ರಕರ್ತ, ವಾಗ್ಮಿ, ನಿರೂಪಕ ಮನೋಹರ್ ಪ್ರಸಾದ್ (65) ಅವರು ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಏರ್ಲಪಾಡಿಯವರಾದ ಮನೋಹರ ಪ್ರಸಾದ್ ಅವರು ದೀರ್ಘ ಕಾಲ ಉದಯವಾಣಿ ಮಂಗಳೂರು ಆವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದರು,ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು....
ಅಗ್ನಿವೀರ ನೇಮಕಾತಿ: ಅರ್ಜಿ ಆಹ್ವಾನ
ಮಂಗಳೂರು: ಅಗ್ನಿವೀರರಾಗಿ ಭಾರತೀಯ ಸೇನೆಗೆ ಸೇರಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.17 ರಿಂದ 21 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಮಾರ್ಚ್ 22 ರೊಳಗೆ ಭಾರತೀಯ ಸೇನೆಯ ವೆಬ್‍ಸೈಟ್: https://www.joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ : ಮತಗಟ್ಟೆಗಳ ಮೂಲಸೌಕರ್ಯಗಳ ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತು ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ...
“ಹೊ೦ಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು:ಆಮ೦ತ್ರಣ ಪತ್ರಿಕೆ ಬಿಡುಗಡೆ
ಮ೦ಗಳೂರು: ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾನಸಿಕ ನೆಮ್ಮದಿ ಹಾಗೂ ಸೌಹಾರ್ದ ಸಂಬಂಧಗಳನ್ನು ಬೆಳೆಸುವ ಉದ್ದೇಶದಿಂದ ಗ್ರಾಮ ಸ್ವರಾಜ್ ಟ್ರಸ್ಟ್ (ರಿ) ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಗಳು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಸಹಕಾರದೊಂದಿಗೆ "ಹೊಂಬೆಳಕು" ಎನ್ನುವ...
ನಳಿನ್ ಕುಮಾರ್ ಕಟೀಲ್ ಸ೦ಸದರಾಗಿ ದ.ಕ. ಜಿಲ್ಲೆಗೆ ಲಕ್ಷ ಕೋ.ರೂ.ಅನುದಾನ
ಮ೦ಗಳೂರು: ನಳಿನ್ ಕುಮಾರ್ ಕಟೀಲ್ ಸ೦ಸದರಾಗಿ ದ.ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸುಮಾರು ಒ೦ದು ಲಕ್ಷ ಕೋ.ರೂ.ವಿವಿಧ ಅಭಿವೃದ್ಧಿ ಅನುದಾನಗಳು ಬಿಡುಗಡೆ ಆಗಿದೆ.ನಳಿನ್ ಕುಮಾರ್ ಕಟೀಲ್ ಸ೦ಸದರಾಗಿ 3 ನೇ ಬಾರಿ ಆಯ್ಕೆಯಾದ ಅವಧಿಯಲ್ಲಿ ಅನುದಾನಗಳು ಬಿಡುಗಡೆ,ಕ್ಷೇತ್ರ ಅಭಿವೃದ್ಧಿ ಮತ್ತು ರಾಜ್ಯಾಧ್ಯಕ್ಷರಾಗಿ ಮಾಡಿದ ಸಾಧನೆಗಳ ಪಕ್ಷಿನೋಟದ ಕಿರುಹೊತ್ತಗೆಯನ್ನು ಗುರುವಾರ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ...
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ :ಶಾಸಕ ಕಾಮತ್ ಆಕ್ರೋಶ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯು ತನ್ನ ಪಕ್ಷದ ಅಭ್ಯರ್ಥಿಗಳ ಗೆಲುವನ್ನು ಹಿಂದುಸ್ತಾನ್ ಜಿಂದಾಬಾದ್, ಭಾರತ್ ಮಾತಾಕಿ ಜೈ ಘೋಷಣೆ ಮೂಲಕ ಸಂಭ್ರಮಿಸಿದರೆ, ಕಾಂಗ್ರೆಸ್ ತನ್ನ ರಾಜ್ಯಸಭೆ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಅವರ ಜಯದ ಸಂಭ್ರಮವನ್ನು "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ ಮೂಲಕ ಆಚರಿಸಿ ತನ್ನ ಓಲೈಕೆ ರಾಜಕಾರಣದ ಅಂತಿಮ ಘಟ್ಟವನ್ನು ಮೀರಿದೆ ಎಂದು ಶಾಸಕ...
ವೆನ್‍ಲಾಕ್ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಲು ಡಿಸಿ ಸೂಚನೆ
ಮಂಗಳೂರು: ವೆನ್‍ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಸರ್ಜಿಕಲ್ ಬ್ಲಾಕ್‍ನಲ್ಲಿ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಸಮಧಾನ ವ್ಯಕ್ತಪಡಿಸಿದ್ದಾರೆ.ಅವರು ಬುಧವಾರ ನಗರದ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಹಲವು ವರ್ಷಗಳು ಕಳೆದರೂ ಸರ್ಜಿಕಲ್ ಬ್ಲಾಕ್ ಕಾಮಗಾರಿ ನಡೆಯುತ್ತಿದೆ. ಈ ಕಟ್ಟಡವು ಪೂರ್ಣಗೊಳ್ಳಲು ಉಳಿದಿರುವ ವ್ಯವಸ್ಥೆಗಳನ್ನು ಆದಷ್ಟು ಬೇಗ...
ತಾರಸಿ ತೋಟ ಮತ್ತು ಕೈತೋಟ ತರಬೇತಿ
ಮಂಗಳೂರು: ಮಂಗಳೂರು, ಉಳ್ಳಾಲ ಹಾಗೂ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ತಾರಸಿ ತೋಟ ಮತ್ತು ಕೈತೋಟ ಮಾಡಬಯಸುವ ಆಸಕ್ತ ರೈತರಿಗೆ / ಫಲಾಪೇಕ್ಷಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಬೆಂದೂರು ಕ್ರಾಸ್ ನಲ್ಲಿರುವ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಆಸಕ್ತರು ತಮ್ಮ ಜಮೀನಿನ ಆರ್.ಟಿ.ಸಿ. ವಿವರ ಅಥವಾ ತಮ್ಮ ವಾಸ್ತವ್ಯ ಸ್ಥಳದ ದೃಢೀಕರಣ, ಆಧಾರ್ ವಿವರ ಹಾಗೂ...
ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ
ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು...








