ಸಮಗ್ರ ಅಭಿವೃದ್ಧಿ ಪಿಎಂ ಜನ್‍ಮನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜು
ಮಂಗಳೂರು: ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗ ಸಮುದಾಯದವರು ಬುಡಕಟ್ಟು...
ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಕೆ. ಪ್ರಕಾಶ್ ಶೆಟ್ಟಿ
ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್‌ಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್...
ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ
ಮಂಗಳೂರು: "ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ" ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್...
ಮಂಗಳೂರಿನಲ್ಲಿ ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ
ಮ೦ಗಳೂರು:ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿ ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992 ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ...
‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಬೆಂಗಳೂರು ನಗರ ಪ್ರಥಮ,ಹಾಸನ ದ್ವಿತೀಯ
ಮಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ಸ್ಮರಣೆ ಯೊಂದಿಗೆ ನಡೆದ ಪಂದ್ಯಾವಳಿ ಯಲ್ಲಿ ಬೆಂಗಳೂರು ನಗರ ಕಾರ್ಯ ನಿರತ ಪತ್ರಕರ್ತರ...
ಆರೋಗ್ಯ ಕಾರ್ಡ್ ಫಲಾನುಭವಿ: ಗುರುತಿನ ಕಾರ್ಡ್ ಸ್ವಯಂ ನೋಂದಾವಣೆ
ಮಂಗಳೂರು: ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಪಿಎಲ್ ಕುಟುಂಬಗಳಿಗೆ ವರ್ಷಕ್ಕೆ ರೂ.5 ಲಕ್ಷ ಹಾಗೂ ಎಪಿಎಲ್ ಕುಟುಂಬಗಳಿಗೆ ರೂ.1.5 ಲಕ್ಷದವರೆಗಿನ ಚಿಕಿತ್ಸೆಯನ್ನು ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಹೆಚ್ಚುವರಿ ಚಿಕಿತ್ಸೆಗಾಗಿ ಮೇಲ್ದರ್ಜೆ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುವ ಸಲುವಾಗಿ ಫಲಾನುಭವಿ ಗುರುತಿನ ಚೀಟಿ...
ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ
ಮ೦ಗಳೂರು: ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ. ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್...
ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ ರೂ. 3000, ಡಿಪ್ಲೊಮಾ – ರೂ.1500
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ ರೂ. 1500 ಸಾವಿರ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ ಉದ್ಯೋಗ...
ಬೈಕಂಪಾಡಿ-ಕೂಳೂರು ಫ್ಲೈಓವರ್: ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು:ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಂಪಾಡಿಯಿಂದ ಕೂಳೂರುವರೆಗೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚಿಸಿದ್ದಾರೆ.ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಭೆಯಲ್ಲಿ ಉಪಸ್ಥಿತರಿದ್ದ ಕೈಗಾರಿಕಾ ಅಸೋಸಿಯೇಶನ್‍ಗಳ ಪದಾಧಿಕಾರಿಗಳು, ಹೆದ್ದಾರಿಯಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶ ತಿರುವಿನಲ್ಲಿ ಹಾಗೂ ಕೂಳೂರು...
ಖ್ಯಾತ ಜಾನಪದ ತಜ್ಞ,ಸಾಹಿತಿ ಅಮೃತ ಸೋಮೇಶ್ವರ ವಿಧಿವಶ
ಮ೦ಗಳೂರು:ಖ್ಯಾತ ಜಾನಪದ ತಜ್ಞ,ಯಕ್ಷಗಾನ ಪ್ರಸಂಗಕರ್ತ, ಸಂಶೋಧಕ,ಕವಿ, ಕಥೆಗಾರ, ವಿಮರ್ಶಕ ,ಅನುವಾದಕ ಹೀಗೆಹಲವು ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆಯೊಂದಿಗೆಸಾಹಿತ್ಯಲೋಕದಲ್ಲಿ ತನ್ನದೆ ಛಾಪು ಮೂಡಿಸಿರುವ ಅಮೃತ ಸೋಮೇಶ್ವರ( ೮೮) ಅವರು ಶನಿವಾರ ಬೆಳಗ್ಗೆ ನಿಧನ ಹೊ೦ದಿದ್ದಾರೆ. ಅವರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಂಗಳೂರು ತಾಲೂಕಿನ ಕೋಟೆಕಾರು ಅಡ್ಕದಲ್ಲಿ 1935ರ ಸೆ. 27 ರಂದು ಜನಿಸಿದರು. ತಂದೆ ಚಿರಿಯಂಡ....








