ಜೈಲು ನರ್ಸರಿ: ಸ್ಥಳ ಪರಿಶೀಲನೆ
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗ್ರೃಹದಲ್ಲಿ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಗುರುವಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.ಕಾರಾಗೃಹದ ಮುಂಭಾಗದ ಆಭರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತವಾಗಿದೆ ಎಂದು ಪರಿಶೀಲನೆಯಲ್ಲಿ ಅಂತಿಮಗೊಳಿಸಲಾಗಿದೆ.ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,...
ದುಂಡುಮೇಜಿನ ಸಮ್ಮೇಳನದಲ್ಲಿ ಸ್ಪೀಕರ್ ಭಾಗಿ
ಮಂಗಳೂರು: ಪುಣೆಯ ಎಂ.ಐ.ಟಿ. ವಲ್ಡ್‌೯ ಪೀಸ್ ವಿಶ್ವವಿದ್ಯಾಲಯದಲ್ಲಿ 13ನೇ ಭಾರತೀಯ ಚಾತ್ರಾ ಸಂಸದ್ (ಇಂಡಿಯನ್ ಸ್ಟೂಡೆಂಟ್ ಪಾರ್ಲಿಮೆಂಟ್) ವತಿಯಿಂದ ನಡೆಯುತ್ತಿರುವ ದುಂಡುಮೇಜಿನ ಸಮ್ಮೇಳನದಲ್ಲಿ ಶೈಕ್ಷಣಿಕ ಅಧಿವೇಶನದ ಅಧ್ಯಕ್ಷತೆಯನ್ನು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ವಹಿಸಿದ್ದರು.ಸಮ್ಮೇಳನದಲ್ಲಿ "ಪ್ರಜಾಪ್ರಭುತ್ವ 2.0: ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮಗಳು ಯಾವ ರೀತಿ ಪ್ರಜಾಪ್ರಭುತ್ವ ಪ್ರಜಾತಂತ್ರ ವ್ಯವಸ್ಥೆಯನ್ನು ಮನ್ವಂತರಗೊಳಿಸುತ್ತಿವೆ? ವಿಷಯದ...
ಎಚ್‍ಪಿಸಿಎಲ್ ಮುಷ್ಕರ ವಾಪಾಸ್
ಮಂಗಳೂರು:ಸುರತ್ಕಲ್ ಎಚ್‍ಪಿಸಿಎಲ್ ಸಂಸ್ಥೆಯಲ್ಲಿ ಎಲ್‍ಪಿಜಿ ಬುಲೆಟ್ ಟ್ಯಾಂಕರ್ ಕ್ಲೀನರ್‍ಗಳ ಸಂಬಳ ವಿವಾದದಲ್ಲಿ ನಡೆಯುತ್ತಿದ್ದ ಮುಷ್ಕರ ಹಿಂಪಡೆಯಲಾಗಿದೆ.ಈ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಷ್ಕರ ಹಿಂಪಡೆದು, ನಾಳೆಯಿಂದ ಬುಲೆಟ್ ಟ್ಯಾಂಕರ್‍ಗಳಿಗೆ ಅಡುಗೆ ಅನಿಲ ಲೋಡಿಂಗ್ ಕಾರ್ಯ ನಡೆಸಲು ನಿರ್ಧರಿಸಲಾಗಿದೆ. ಕ್ಲೀನರ್‍ಗಳಿಗೆ ಪ್ರತಿ ಟ್ರಿಪ್‍ಗೆ ರೂ. 900...
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು, ಜ.11(ಕ.ವಾ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜನವರಿ 12ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.ಶುಕ್ರವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 9- ಮಂಗಳಾದೇವಿಯ ರಾಮಕೃಷ್ಣ ಮಠದಲ್ಲಿ ನ್ಯಾಷನಲ್ ಯೂತ್ ಡೇ ಕಾರ್ಯಕ್ರಮ, 9.30- ಮಂಗಳಾ ಕ್ರೀಡಾಂಗಣದಲಿ,್ಲ ಮಂಗಳೂರು...
ಕಾವಳಪಡೂರು: ಮನೆಗೆ ನುಗ್ಗಿ ಚಾಕು ತೋರಿಸಿ ನಗ,ನಗದು ದರೋಡೆ
ಬಂಟ್ವಾಳ : ಮು೦ಜಾನೆ ನಾಲ್ಕು ಮ೦ದಿಯ ತ೦ಡ ಮನೆಗೆ ನುಗ್ಗಿ ಮಹಿಳೆಯರಿಗೆ ಚಾಕು ತೋರಿಸಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಬಿ.ಸಿ.ರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿ ರಸ್ತೆಯ ತಿಮ್ಮಕ್ಕ ಉದ್ಯಾನವನ ಸಮೀಪದ ಮೇನಾಡು ಎಂಬಲ್ಲಿ ಗುರುವಾರ ಮುಂಜಾನೆ ನಡೆದಿದೆ.ಮೆರಿಟಾ ಸಿಂತಿಯಾ ಪಿಂಟೋ ಎ೦ಬವರು ಮೇನಾಡು...
“ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ
ಮಂಗಳೂರು: ರಂಗಭೂಮಿಯಲ್ಲಿ ಶ್ರೀ ಲಲಿತೆ ಕಲಾವಿದರ ತಂಡ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರಿಗೆ ಹೊಸತನವನ್ನು ನೀಡಿದೆ. ಅದರಲ್ಲೂ ಶ್ರೀಲಲಿತೆ ಕಲಾವಿದರು ತಂಡದಿಂದ ಪ್ರದರ್ಶನಗೊಂಡ ಗರುಡ ಪಂಚಮಿ ನಾಟಕದಲ್ಲಿ ವಿಶಿಷ್ಠವಾದ ರಂಗವಿನ್ಯಾಸವನ್ನು ಬಳಸಲಾಗಿದೆ. ಕಿಶೋರ್ ಡಿ ಶೆಟ್ಟಿ ಅವರು ರಂಗಭೂಮಿಗೆ ಬಹಳಷ್ಟು ಉತ್ತಮ ಮೌಲ್ಯಯುತ ನಾಟಕಗಳನ್ನು ನೀಡಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವೂ ಇದೆ ಎಂದು...
ಬಳ್ಪ ಸಂಸದರ ಆದರ್ಶ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ:ಕೇಂದ್ರ ಸಚಿವ ಭಗವಂತ್ ಖೂಬ
ಮಂಗಳೂರು:ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಭಗವಂತ ಖೂಬ ಶ್ಲಾಘಿಸಿದರು.ಅವರು ಬುಧವಾರ ಬಳ್ಪ-ಕೇನ್ಯದ ಗ್ರಾಮ ಉತ್ಸವ ಸಮಿತಿ ಆಶ್ರಯ ದಲ್ಲಿ ಹಮ್ಮಿಕೊಂಡಿದ್ದ ಸಂಸದರ ಆದರ್ಶ...
ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದೋಚಿ ಪರಾರಿಯಾದ ಮೂವರ ಬ೦ಧನ
ಮಂಗಳೂರು: ಕಾರ್ ಸ್ಟ್ರೀಟ್ ನ ಜ್ಯುವೆಲ್ಲರ್ಸ್ ವೊ೦ದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6,00,000ರೂ. ಮೌಲ್ಯದ 97.11 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾದ ಮೂವರನ್ನು ಪೊಲೀಸರು ಬ೦ಧಿಸಿದ್ದಾರೆ.ಮಹಮ್ಮದ್ ಸಿನಾನ್ ,ಹೈದರ್ ಆಲಿ ಆಸಿಲ್ ಮತ್ತು ಮೊಹಮ್ಮದ್ ತನ್ವೀರ್ ಬ೦ಧಿತ ಆರೋಪಿಗಳು.
ಕಾರ್ ಸ್ಟ್ರೀಟ್ ನ ಜಿ.ಎಚ್.ಎಸ್ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ...
ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ
ಮಂಗಳೂರು:ನಗರದ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ಮನಪರಿವರ್ತನೆಗಾಗಿ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮದಲ್ಲಿ ಮಾತನಾಡಿದರು. ಜೈಲಿನಲ್ಲಿ ಖೈದಿಗಳೇ ವಿವಿಧ...
ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು: ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೋಮೋ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೋಮಾ ಅಭ್ಯರ್ಥಿಗಳಿಗೆ ಮಾಸಿಕ ರೂ.1,500 ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ.12ರ...







