ಉಚಿತ ನೇತ್ರ ತಪಾಸಣೆ ಶಿಬಿರ
ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ಪ್ರಸಾದ್ ಮಲ್ಟಿ ಸ್ಪೆಷ್ಟಾಲಿಟಿ ಐ ಹಾಸ್ಪಿಟಲ್ ಸಹಯೋಗದಲ್ಲಿ...
ಜೀವನ ಶಿಕ್ಷಣ ನೀಡುತ್ತಿರುವ ಶಾಲೆ ರಾಜ್ಯಕ್ಕೆ ಮಾದರಿ-ಕೆ.ವಿ.ಪ್ರಭಾಕರ್
ಕುತ್ಲೂರು: ಕುತ್ಲೂರಿನಲ್ಲಿ ಶಾಲಾ ಪಠ್ಯದ ಜೊತೆ ಪರಿಸರದ ಜೊತೆ ಬದುಕುವ ಜೀವನ ಶಿಕ್ಷಣ ನೀಡುತ್ತಿರುವ ಶಾಲೆ ರಾಜ್ಯಕ್ಕೆ ಮಾದರಿ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.ಅವರು ಮಂಗಳವಾರ ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಶಾಲಾ ತರಕಾರಿ ತೋಟ,ಅಡಿಕೆ ತೋಟವನ್ನು ವೀಕ್ಷಿಸಿದ ಬಳಿಕ ಮಕ್ಕಳು ಮತ್ತು ಶಿಕ್ಷಕರು...
ಮಾ.29ರಂದು ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆ
ಮಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ. ಜಿಲ್ಲೆ, ಮಂಗಳೂರುಮತ್ತು ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಮಾ.29ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನ ತಾಲೂಕು ಮಿನಿವಿಧಾನ ಸೌಧ, ಮಂಗಳೂರು ಇಲ್ಲಿ ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆಯನ್ನು ಕರೆಯಲಾಗಿದೆ.ಜುಲೈ...
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯ: ಬ್ರಹ್ಮಕಲಶೋತ್ಸವ – ಮೂಡಪ್ಪ ಸೇವೆ
ಮ೦ಗಳೂರು: ಕುಂಬಳೆ ಸೀಮೆಯ ಹಾಗೂ ಉತ್ತರ ಕೇರಳದ ಪ್ರಸಿದ್ದ ದೇವಾಲಯವಾದ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯವು ಇದೀಗ ಅಷ್ಟಬಂಧ ಬ್ರಹ್ಮಕಲಶೋತ್ಸವ – ಮೂಡಪ್ಪ ಸೇವೆಯ ಸಂಭ್ರಮದಲ್ಲಿದೆ. ಮಾ. 27 ರಿಂದ ಏ. 7ರ ತನಕ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮತ್ತು ಮೂಡಪ್ಪ ಸೇವೆ ಇತ್ಯಾದಿ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎ೦ದು ಮಧುಸೂಧನ್ ಅಯಾರ್...
ಕುಡಿಯುವ ನೀರಿನ ಸಮಸ್ಯೆ : ಮುನ್ನೆಚ್ಚರಿಕೆ ವಹಿಸಲು ಜಿ.ಪಂ ಸಿಇಓ ಸೂಚನೆ
ಮಂಗಳೂರು : ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ ಪಂಚಾಯತ್‍ಗಳು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ ಸೂಚಿಸಿದರು.ಅವರು ಸೋಮವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೀರು ಸದಾ ಪೂರೈಕೆ ಇರುವಂತೆ ಗಮನಹರಿಸಬೇಕು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು...
ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣೆ
ಮಂಗಳೂರು : ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭವು ಸೋಮವಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು.
ಸಮಾರಂಭ ಉದ್ಘಾಟಿಸಿ ಮಾತಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು, “ ಗ್ರಾಹಕ ಸ್ನೇಹಿಯಾಗಿರುವ ಎಸ್ ಸಿಡಿಸಿಸಿ ಬ್ಯಾಂಕ್ ದೇಶಕ್ಕೆ ಮಾದರಿಯಾಗಿದೆ. ಬ್ಯಾಂಕಿನ ಅಧ್ಯಕ್ಷ...
ಜೀವ ಜಲ ಉಳಿಸಿ ಅಭಿಯಾನ
ಮಂಗಳೂರು : ಸಕಲ ಜೀವ ಸಂಕುಲಕ್ಕೆ ನೀರು ಆಧಾರವಾಗಿದ್ದು, ಜೀವ ಜಲ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ತಾಪಮಾನ ಹೆಚ್ಚುತ್ತಿದ್ದು ಪ್ರಾಣಿ ಪಕ್ಷಿಗಳ ಮೂಕ ವೇದನೆಯನ್ನು ನಾವು ಅರ್ಥಮಾಡಿಕೊಳ್ಳಬೇಕು. ನೀರು ಉಣಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು.ದ.ಕ.ಜಿಲ್ಲಾಡಳಿತ, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ರೋಟರಿ ಕ್ಲಬ್...
ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ-ವಿಚಾರ ಸಂಕಿರಣ
ಮಂಗಳೂರು: ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವುದಕ್ಕೆ ಮಾತ್ರ ಸೀಮಿತವಾಗದೆ ಭವಿಷ್ಯದ ಉತ್ತಮ ಪ್ರಜೆಗಳನ್ನು ಸೃಷ್ಟಿಸುವ ಜವಾಬ್ದಾರಿಯನ್ನು ಹೊಂದಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕಾರ್ಯವನ್ನು ಶಾಲಾ ಕಾಲೇಜುಗಳು ವಹಿಸಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಹೇಳಿದ್ದಾರೆ.ಅವರು ಶನಿವಾರ ಕರ್ನಾಟಕ ರಾಜ್ಯ...
ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್
ಮಂಗಳೂರು : ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಸಂಘಟನ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿ.ವಿ. ಹಾಗೂ ಸೈಂಟ್ ಆಗ್ನೆಸ್ ಕಾಲೇಜು ವತಿಯಿಂದ ಎರಡು ದಿನಗಳ ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್ ಶನಿವಾರ ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಆರಂಭಗೊಂಡಿತು.ಕಾರ್ಯಕ್ರಮ ಉದ್ಘಾಟಿಸಿದ ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ವೆನಿಸ್ಸಾ...
ಮಾರ್ಚ್ 24: ‘ರೋಹನ್ ನೆಸ್ಟ್’ನ ಭೂಮಿಪೂಜೆ
ಮಂಗಳೂರು: ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು ಮಾರ್ಚ್ 24 ರ೦ದು ಸಂಜೆ 4 ಗಂಟೆಗೆ ಮಂಗಳೂರಿನ ಅತ್ತಾವರ-ಬಾಬುಗುಡ್ಡ ಪ್ರದೇಶದಲ್ಲಿ ನಡೆಯಲಿದೆ.ರೋಹನ್ ನೆಸ್ಟ್:ರೋಹನ್ ನೆಸ್ಟ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ ರೂಪಿಸಲಾದ ಒಂದು ವಾಸಯೋಗ್ಯ ನಿವೇಶನವಾಗಿದೆ....