ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ. 3ರಂದು ನಾಮಪತ್ರ ಸಲ್ಲಿಕೆ: ಹರೀಶ್ ಕುಮಾರ್
ಮಂಗಳೂರು: ದ.ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎ೦ದು ದ.ಕನ್ನಡ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.ಜಿಲ್ಲಾ ಕಾ೦ಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ....
ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು:ದತ್ತಾತ್ರೇಯ
ಮಂಗಳೂರು: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಯ ಮಾತೇ ಇಲ್ಲವಾಗಿದೆ. ವಾಸ್ತವಿಕ ಅರ್ಥದಲ್ಲಿ ಕಾಂಗ್ರೆಸ್ ಮತ್ತು ಅಭಿವೃದ್ಧಿ ಎರಡೂ ವಿರೋಧ ಪದಗಳು ಎಂದು ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ ದತ್ತಾತ್ರೇಯ ಅವರು ಹೇಳಿದರು.
ದ.ಕ. ಜಿಲ್ಲಾ ಬಿಜೆಪಿ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸರಕಾರ ಬಂದ ಮೇಲೆ...
ಮಾ.29ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ
ಮ೦ಗಳೂರು: ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾ.29ರಿಂದ ಆರಂಭಗೊಳ್ಳಲಿದ್ದು, ಮಾ.31ರವರೆಗೆ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿದೆ.ನಡಾವಳಿ ಉತ್ಸವದ ಪ್ರಯುಕ್ತ ರವಿವಾರ ಗೊನೆ ಮುಹೂರ್ತ ನೆರವೇರಿದೆ. ಮಾ.28ರಂದು ಬೆಳಗ್ಗೆ 8ಕ್ಕೆ ಮಹಾಪೂಜೆ, ಶ್ರೀ ಕ್ಷೇತ್ರ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶುದ್ಧ ಕಲಶ, ಗಣಹೋಮ, ಮಧ್ಯಾಹ್ನ ಮಹಾಪೂಜೆ...
ಮದ್ಯ ನಿಷೇಧ
ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ...
ಎಸ್‍ಎಸ್‍ಎಲ್‍ಸಿ ಪರೀಕ್ಷೆ: 28,537 ವಿದ್ಯಾರ್ಥಿಗಳು ಹಾಜರು
ಮಂಗಳೂರು: ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಿದ್ದು, ಮಾ.25ರಂದು ಸೋಮವಾರ ಪ್ರಥಮ ಭಾಷೆಯ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 28,866 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 28,537 ವಿದ್ಯಾಥಿಗಳು ಹಾಜರಾಗಿದ್ದು, 329 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತಿನಲ್ಲಿ ಭಾರತ ನಂ.1 ಆಗಲು ಮತ್ತೆ ಮೋದಿ ಸರಕಾರ ಬರಬೇಕು: ಬಿಜೆಪಿ ಎಸ್‌ಸಿ ಮೋರ್ಚಾ ಪ್ರತಿಪಾದನೆ
ಮಂಗಳೂರು: ಕಳೆದ 10 ವರ್ಷಗಳ ಆಡಳಿತದಲ್ಲಿ ಭಾರತದ ಆಮೂಲಾಗ್ರ ಬದಲಾವಣೆ ಮತ್ತು ಅಭಿವೃದ್ಧಿಗೆ ಶ್ರಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಮತ್ತೊಮ್ಮೆ ಬರಬೇಕಿದೆ. ಮುಂದಿನ ನೂರಾರು ವರ್ಷಗಳ ಅಭಿವೃದ್ಧಿ ಹೊಂದಿದ ಭಾರತಕ್ಕೆ ಈಗ ಹಾಕಿರುವ ಬುನಾದಿಯನ್ನು ಗಟ್ಟಿಗೊಳಿಸಲು, ವಿಶ್ವದಲ್ಲಿ ಭಾರತದ ಸ್ಥಾನಮಾನಗಳನ್ನು ನಂಬರ್ 1 ಮಟ್ಟಕ್ಕೆ ಒಯ್ಯಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಿದೆ. ಈ...
ಬೊಳ್ಳಿಮಲೆತ ಶಿವ ಶಕ್ತಿಲು ತುಳು ನಾಟಕದ ಸ್ವರ್ಣ ಸಂಭ್ರಮ
ಮ೦ಗಳೂರು: "ಬೊಳ್ಳಿಮಲೆತ ಶಿವಶಕ್ತಿಲು" ತುಳು ಪೌರಾಣಿಕ ನಾಟಕದ 55ನೇ ಪ್ರದರ್ಶನ "ಸ್ವರ್ಣ ಸಂಭ್ರಮ" ಮಾ. 29 ಶುಕ್ರವಾರ ಸಂಜೆ 6ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ಜರಗಲಿದೆ.
ಸ್ವರ್ಣ ಸಂಭ್ರಮದೊಂದಿಗೆ ವಜ್ರ ಮಹೋತ್ಸವದ ಪಥದಲ್ಲಿ ದಾಪುಗಾಲಿಡುತ್ತಿರುವ ಶುಭಾವಸರದಲ್ಲಿ ಕರ್ನಾಟಕ ಸರಕಾರದ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.ಕುದ್ರೋಳಿ ಶ್ರೀ ಭಗವತೀ ಯುವಜನ ಮಹಿಳಾ ಸೇವಾ...
ಭ್ರಷ್ಟಾಚಾರದ ಮತ್ತೊಂದು ಹೆಸರೇ ಕಾಂಗ್ರೆಸ್: : ರವಿಶಂಕರ ಮಿಜಾರು
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಹೇಳಿದ್ದಾರೆ.
ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ...
ತಮಿಳಿನಲ್ಲಿ ಸದ್ದು ಮಾಡಲಿರುವ ಬಿಗ್ ಬಾಸ್ ರೂಪೇಶ್ ಶೆಟ್ಟಿ
ಮ೦ಗಳೂರು: ಕರಾವಳಿಯ ರೂಪೇಶ್ ಶೆಟ್ಟಿ ಗಡಿ ದಾಟಿ ಹೋಗಿ ಸಿನೆಮಾ ರಂಗದಲ್ಲಿ ಸಾಧನೆ ಮಾಡುತ್ತಿದ್ದು, ಅದಕ್ಕೆ ಈಗ ಅವರು ತಮಿಳಿನಲ್ಲಿ ನಟಿಸುವ ಅವಕಾಶ ಪಡೆದುಕೊಂಡಿರುವುದು ಹೊಸ ಸೇರ್ಪಡೆ. ಬಿಗ್ ಬಾಸ್ ವಿನ್ನರ್ ಆದ ಬಳಿಕ ಅವರ ವೃತ್ತಿ ಜೀವನ ಮತ್ತೊಂದು ಎತ್ತರಕ್ಕೆ ಹೋಗಿದೆ. ಅದಕ್ಕೂ ಮೊದಲು ಅವರು ಮಾಡಿರುವ ಸಾಧನೆ, ಗಳಿಸಿರುವ ಜನಪ್ರಿಯತೆಯಿಂದಲೇ ಅವರಿಗೆ...
ಡಾ.ಎಂ.ಮೋಹನ ಆಳ್ವ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.26 ರಂದು ಬೆಳಗ್ಗೆ 11.00ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ಹಿರಿಯ ಪತ್ರಕರ್ತ ಯು.ವಿ.ಜಾರ್ಜ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ...





