ಮಂಗಳೂರು ಲಿಟ್ ಫೆಸ್ಟ್: ಸಿರಿ ವೈಭವ ವಿಚಾರಗೋಷ್ಠಿ
ಮಂಗಳೂರು : ನಗರದ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆರನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ನಲ್ಲಿ ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವ ಜರಗಿತು.ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವದಲ್ಲಿ ಡಾ ಗಾಯತ್ರಿ ನಾವಡ ಮತ್ತು ರವೀಶ್ ಪಡುಮಲೆ ತಮ್ಮ ಅಭಿಪ್ರಾಯವನ್ನಿಟ್ಟರು ಮತ್ತು ವಿವೇಕಾದಿತ್ಯ ನಿರ್ವಹಿಸಿದರುಡಾ...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು — ಶ್ರೀ ರಾಮ ವೈಭವ ಅನಾವರಣ
ಮಂಗಳೂರು:ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣ ಭಾರತೀಯರ ಅತ್ಯಂತ ದೊಡ್ಡ ಕನಸು. ಅದು ಪ್ರಸ್ತುತ ಸಾಕಾರಗೊಳ್ಳುತ್ತಿದೆ. ಈ ಮೂಲಕ ಭಾರತ ಇತಿಹಾಸ ನಿರ್ಮಾಣದ ಕಡೆಗೆ ಹೆಜ್ಜೆ ಹಾಕಿದೆ. ಭಾರತೀಯರ ಕಣಕಣದಲ್ಲೂ ರಾಮ ನಾಮ ಪುಟಿದೆಳುತ್ತಿದೆ. ಎಂದು ವೇದಮೂರ್ತಿ ಶ್ರೀ ಎಸ್ ವೈ ಸುಧಾಕರ್ ಭಟ್ ಅವರು ಹೇಳಿದರು.ಟಿ ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಕೆನರಾ...
ವೀಕ್ಷಕರಿಂದ ಮತದಾರರ ಪಟ್ಟಿ ಪರಿಶೀಲನೆ: ದ.ಕ. ಜಿಲ್ಲೆಯಲ್ಲಿ17.85 ಲಕ್ಷ ಮತದಾರರು
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತೆ ಡಾ. ಬಿ.ಆರ್. ಮಮತಾ ಅವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿಗಳ ಮಾಹಿತಿ ಪಡೆದರು.ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ವೀಕ್ಷಕರಿಗೆ ಮಾಹಿತಿ ನೀಡಿ,...
ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಜರುಗಿತು. ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ಉದ್ಘಾಟನೆ ನೆರವೇರಿಸಿ ಮಾತಾಡಿದ ಜಾಗತಿಕ ಬಂಟರ...
ಕಾಶೀಮಠದಿಂದ ಅಯೋಧ್ಯೆ ಶ್ರೀರಾಮನಿಗೆ ವಿಶೇಷ ಸ್ವರ್ಣ ಹಾರ
ಮ೦ಗಳೂರು: ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ ವತಿಯಿಂದ ಅಯೋಧ್ಯೆ ಶ್ರೀರಾಮದೇವರಿಗೆ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನದಿಂದ ತಯಾರಿಸಿದ ನವರತ್ನಗಳ ಪೇಂಡೆಂಟ್ ಒಳಗೊಂಡಿರುವ 28 ಚಕ್ರಣಿಕಾ ಸಾಲಿಗ್ರಾಮ ದಿಂದ ಅಲಂಕರಿಸಲ್ಪಟ್ಟ ಸ್ವರ್ಣಹಾರವನ್ನು ಸಮರ್ಪಿಸಿದರು.
ಆಕರ್ಷಕ ಶೈಲಿಯಲ್ಲಿ ರಚಿಸಲ್ಪಟ್ಟಿರುವ ಈ ಆಭರಣವನ್ನು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ...
ಜ.23ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜನವರಿ 23ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಮಂಗಳವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10ಗಂಟೆಗೆ ಸುಳ್ಯಕ್ಕೆ ಆಗಮನ. 10.30ಕ್ಕೆ- ಸುಳ್ಯ, ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ...
ಜ.22:ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವ್ಯಾಪಕ ಬಂದೋಬಸ್ತ್
ಮಂಗಳೂರು : ಜ.22:ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಯೋಜನೆಯನ್ನು ಕೈಗೊಳ್ಳಲಾಗಿದೆ ಎ೦ದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ..ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ...
ಸಣ್ಣ ಕೈಗಾರಿಕೆಗಳು ಸಕಾಲದಲ್ಲಿ ಆರ್ಥಿಕ ನೆರವು ಅಗತ್ಯ: ಜಯಪ್ರಕಾಶ್ ಹೆಗ್ಡೆ
ಕಿರು ಮತ್ತು ಸಣ್ಣ ಕೈಗಾರಿಕೆಗಳ ಸಮಸ್ಯೆಗಳು ಪರಿಹಾರವಾದರೆ ಮಾತ್ರ ಉದ್ಯಮ ರಂಗ ಅಭಿವೃದ್ಧಿ ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.ಅವರು ಶನಿವಾರ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಮತ್ತು ಹಣಕಾಸಿನ ಅರಿವು ಕುರಿತು ಕಾರ್ಯಕ್ರಮವನ್ನು...
ಬಸ್ ನಲ್ಲಿ ಗಮನ ಬೇರೆಡೆಗೆ ಸೆಳೆದು ಚಿನ್ನದ ಚೈನ್ ಕಳವು
ಪುತ್ತೂರು:ಪುತ್ತೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೋವ೯ರ ಗಮನ ಬೇರೆಡೆಗೆ ಸೆಳೆದು ಚಿನ್ನದ ಚೈನ್ ಕಳವು ಮಾಡಿರುವ ಘಟನೆ ನಡೆದಿದೆ.ಪುತ್ತೂರು ನಿವಾಸಿ ಜಯರಾಮ ಭಟ್ ಪಿ ಎಂಬವರು ಶುಕ್ರವಾರ ಮಧ್ಯಾಹ್ನ ಮಂಗಳೂರಿನ ಜುವೆಲ್ಲರಿ ಒಂದರಲ್ಲಿ 1,60,436 ರೂ. ಮೌಲ್ಯದ 23.970 ಗ್ರಾಂ ಚಿನ್ನ ಚೈನ್ ಖರೀದಿಸಿದ್ದರು. ಚಿನ್ನದ ಚೈನ್ ನ್ನು ಬ್ಯಾಗ್ ನಲ್ಲಿರಿಸಿ ಕೆ ಎಸ್...
ಜಿಪಿಎಲ್ ಉತ್ಸವ್ ಕ್ರಿಕೆಟ್ ಪಂದ್ಯಾವಳಿ : ಗೋವಾದ ಕಡಲ ಮಡಿಲಲ್ಲಿ ಜೆರ್ಸಿ ಲಾಂಚ್!
ಮಂಗಳೂರು: ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವಎಂಟನೇ ವರ್ಷದ ಜಿಪಿಎಲ್ ಉತ್ಸವ್ 2024 ಇದರ ಕ್ರಿಕೆಟ್ ಪಂದ್ಯಾವಳಿಯ ಜೆರ್ಸಿ ಲಾಂಚ್ ಕಾರ್ಯಕ್ರಮ ಶನಿವಾರ ನಡೆಯಿತು. ಗೋವಾದ ರಾಜಧಾನಿ ಪಣಜಿಯ ಕಡಲಲ್ಲಿ ಖಾಸಗಿ ನೌಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಿ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್...







