ಬಳ್ಪ ಸಂಸದರ ಆದರ್ಶ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ:ಕೇಂದ್ರ ಸಚಿವ ಭಗವಂತ್ ಖೂಬ
ಮಂಗಳೂರು:ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಭಗವಂತ ಖೂಬ ಶ್ಲಾಘಿಸಿದರು.ಅವರು ಬುಧವಾರ ಬಳ್ಪ-ಕೇನ್ಯದ ಗ್ರಾಮ ಉತ್ಸವ ಸಮಿತಿ ಆಶ್ರಯ ದಲ್ಲಿ ಹಮ್ಮಿಕೊಂಡಿದ್ದ ಸಂಸದರ ಆದರ್ಶ...
ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದೋಚಿ ಪರಾರಿಯಾದ ಮೂವರ ಬ೦ಧನ
ಮಂಗಳೂರು: ಕಾರ್ ಸ್ಟ್ರೀಟ್ ನ ಜ್ಯುವೆಲ್ಲರ್ಸ್ ವೊ೦ದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6,00,000ರೂ. ಮೌಲ್ಯದ 97.11 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾದ ಮೂವರನ್ನು ಪೊಲೀಸರು ಬ೦ಧಿಸಿದ್ದಾರೆ.ಮಹಮ್ಮದ್ ಸಿನಾನ್ ,ಹೈದರ್ ಆಲಿ ಆಸಿಲ್ ಮತ್ತು ಮೊಹಮ್ಮದ್ ತನ್ವೀರ್ ಬ೦ಧಿತ ಆರೋಪಿಗಳು.
ಕಾರ್ ಸ್ಟ್ರೀಟ್ ನ ಜಿ.ಎಚ್.ಎಸ್ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ...
ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ
ಮಂಗಳೂರು:ನಗರದ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ಮನಪರಿವರ್ತನೆಗಾಗಿ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮದಲ್ಲಿ ಮಾತನಾಡಿದರು. ಜೈಲಿನಲ್ಲಿ ಖೈದಿಗಳೇ ವಿವಿಧ...
ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು: ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೋಮೋ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೋಮಾ ಅಭ್ಯರ್ಥಿಗಳಿಗೆ ಮಾಸಿಕ ರೂ.1,500 ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ.12ರ...
ಸಂಗೀತ ಮನಸ್ಸಿಗೆ ಮುದ ನೀಡುವ ಕಲಾ ಸಾಧನ-ಗಣೇಶ್ ಕಾರ್ಣಿಕ್
ಮಂಗಳೂರು:ಸಂಗೀತ ಮನಸ್ಸಿಗೆ ಮುದ ನೀಡುವ ಅದ್ಭುತ ಕಲಾ ಸಾಧನಎಂದು ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.ಮಂಗಳವಾರ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ನಗರದ ಚಿಲಿಂಬಿ ಶಾರದಾ ಮಹೋತ್ಸವ ಸಮಿತಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಸಂಗೀತ ನಮ್ಮ ತನು ಮತ್ತು ಮನಕ್ಕೆ ವಿಶೇಷವಾದ ಚೇತನವನ್ನು ನೀಡುವ...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು: ಶ್ರೀ ರಾಮ ವೈಭವ ಕಾರ್ಯಕ್ರಮ ಉದ್ಘಾಟನೆ
ಮಂಗಳೂರು: ವಿಭಿನ್ನ ಪರಂಪರೆಯನ್ನು ಹೊಂದಿರುವ ಭರತ ಖಂಡವನ್ನು ಆಳಿದ ಅದೆಷ್ಟೋ ಪುಣ್ಯಾತ್ಮರು ಭವ್ಯ ಪರಂಪರೆಯನ್ನು ಈ ಮಣ್ಣಿಗೆ ಅರ್ಪಿಸಿದ್ದಾರೆ.ಅಯೋಧ್ಯೆಯನ್ನು ಆಳಿದ ಶ್ರೀರಾಮ ಕೇವಲ ರಾಜನಾಗಿರಲಿಲ್ಲ;ಧರ್ಮಪ್ರಜ್ಞೆಯ ದ್ಯೋತಕನಾಗಿದ್ದನು. ಭಾರತಕ್ಕೆ ಶ್ರೀರಾಮ ಹೆಸರೇ ಸಕಲರನ್ನು ಒಂದುಗೂಡಿಸುವಂತೆ,ಧರ್ಮದ ಜಾಗೃತಿಯನ್ನು ಎಚ್ಚರಿಸಿ ಭಕ್ತಿಯ ಪರಾಕಾಷ್ಠೆಯಲ್ಲಿ ಮಿಂದೇಳುವ ಅಪರಿಮಿತ ಆನಂದವನ್ನು ಉಂಟುಮಾಡುತ್ತದೆ ಎಂದು ಖ್ಯಾತ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು...
ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡಕ್ಕೆ ಭಾರತ್ ಆಗ್ರೋವೆಟ್‌ನಿಂದ 5 ಲಕ್ಷ ರೂ.ದೇಣಿಗೆ
ಮಂಗಳೂರು : ದ.ಕ.ಜಿಲ್ಲಾಧಿಕಾರಿ ಕಚೇರಿ ಸಮೀಪ ನಿರ್ಮಾಣವಾಗುತ್ತಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಕಟ್ಟಡಕ್ಕೆ ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತನ್ನ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ 5 ಲಕ್ಷ ರೂ.ದೇಣಿಗೆ ನೀಡಿದೆ. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅವರು ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್...
ಜ.20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ
ಮಂಗಳೂರು: ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನಮೇಳ ಜ.20 ಹಾಗೂ 21ರಂದು ಸವಣೂರಿನ...
ಆಕಾಶಭವನ ಶರಣ್ ಬ೦ಧನ,ಕಾಲಿಗೆ ಗು೦ಡೇಟು
ಮ೦ಗಳೂರು: ಕುಖ್ಯಾತ ರೌಡಿ ಆಕಾಶಭವನ ಶರಣ್ ನನ್ನು ಮ೦ಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಬ೦ಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದಾಗ ಆತನ ಕಾಲಿಗೆ ಫೈರಿಂಗ್ ಮಾಡಿದ್ದು ಗು೦ಡೇಟುನಿ೦ದ ಗಾಯಗೊ೦ಡಿರುವ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೋಹಿದಾಸ್ ಕೆ @ಶರಣ್ @ ಶರಣ್ ಪೂಜಾರಿ @ ಶರಣ್ ಆಕಾಶಭವನ ಸುಳ್ಯ ಕೆ.ವಿ.ಜಿ ವಿದ್ಯಾಸಂಸ್ಥೆಯ...
ಸ್ಮಾರ್ಟ್ ಸಿಟಿ ಕಾಮಗಾರಿಗಳ ತ್ವರಿತ ಪೂರ್ಣ: ಡಿಸಿ ಸೂಚನೆ
ಮ೦ಗಳೂರು: ಸ್ಮಾರ್ಟ್ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ನಡೆಯಿತು.ಕದ್ರಿ ಪಾರ್ಕ್ ಅಭಿವೃದ್ಧಿಯ ಕುರಿತು, ಇಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ದಿದ್ದು, ಫುಡ್ ಕೋರ್ಟ್ ಗಳಿಗೆ ಪ್ರತ್ಯೇಕ ಘಟಕ ವನ್ನು ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಕದ್ರಿ ಉದ್ಯಾನವನ, ಜಿಂಕೆವನ, ಪಾರ್ಕ್ ರಸ್ತೆ ಗಳನ್ನು...







