ಭಿಕ್ಷಾಟನೆ :ಮಕ್ಕಳ ರಕ್ಷಣೆ

0
ಮಂಗಳೂರು : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರದ ಪ್ರದೇಶಗಳಾದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಕಂಕನಾಡಿ, ಪಂಪ್‍ವೆಲ್ ವೃತ್ತ , ಕುದ್ರೋಳಿ, ರಥಬೀದಿ, ಕೆಪಿಟಿ ಸ್ಥಳಗಳಲ್ಲಿ ಕಾಯ್ಯಾಚರಣೆ...

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌

0
ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗು ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ...

ರಚನಾ ಪ್ರಶಸ್ತಿ 2023-25: ಅರ್ಜಿ/ ನಾಮಪತ್ರ ಆಹ್ವಾನ

0
ಮ೦ಗಳೂರು: ರಚನಾ' - ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ, ಮಂಗಳೂರು ಮೂಲದ ವಿವಿಧೆಡೆಗಳಲ್ಲಿ ಹಬ್ಬಿಕೊಂಡಿರುವ ಕ್ಯಾಥೊಲಿಕ್ ಕ್ರೈಸ್ತ ಸಮುದಾಯದ, ತಂತಮ್ಮ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗಳನ್ನು ಮಾಡಿರುವ ಗಣ್ಯರನ್ನು ಪರಿಗಣಿಸಿ, ಆಯ್ದು ‘ರಚನಾ’ ಪ್ರಶಸ್ತಿಯನ್ನು ನೀಡುವ ಮೂಲಕ ಪುರಸ್ಕರಿಸುತ್ತಿದೆ. 2023-25ನೇ ಸಾಲಿನ ಈ ಕೆಳಗಿನ ಪ್ರಶಸ್ತಿಗಳಿಗಾಗಿ ನಾಮಪತ್ರಗಳನ್ನು ಆಹ್ವಾನಿಸಲಾಗಿದೆ. ರಚನಾ ಕೃಷಿಕ, ರಚನಾ ವೃತ್ತಿಪರ (ವೈದ್ಯರು,...

ವೃತ್ತಿ ಹಾಗೂ ಪ್ರವೃತ್ತಿಗಳಿಂದ ಬದುಕು ಸಾರ್ಥಕ: ಡಾ. ಬಿ.ಎ. ಕುಮಾರ ಹೆಗ್ಡೆ

0
ಮಂಗಳೂರು: ವೃತ್ತಿಯ ಜೊತೆ ಸಮಾಜಮುಖಿ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನಮೌಲ್ಯಯುತವಾಗಿರುತ್ತದೆ, ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ. ಎ. ಕುಮಾರ ಹೆಗ್ಡೆ ಹೇಳಿದ್ದಾರೆ.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಅಧ್ಯಾಪಕರ ಸಂಘವನಶ್ರೀ ಹಾಗೂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಸನ್ಮಾನಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,...

ಶುಕ್ರವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು

0
ಮಂಗಳೂರು : ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಶುಕ್ರವಾರ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 92 ಪರೀಕ್ಷಾ ಕೇಂದ್ರಗಳ, 1332 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿರುವ ಈ ಪರೀಕ್ಷೆ ದಕ್ಷಿಣ ಕನ್ನಡ ಜಿಲ್ಲೆಯ 521 ಶಾಲೆಗಳ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಒಟ್ಟು...

ಬಿ-ಹ್ಯೂಮನ್ ಸಂಸ್ಥೆಯ ವತಿಯಿಂದ ವೆನ್ಲಾಕ್ ಆಸ್ಪತ್ರೆಗೆ ಎರಡು ಶುದ್ಧ ಕುಡಿಯುವ ನೀರಿನ ಯಂತ್ರ ದೇಣಿಗೆ

0
ಮಂಗಳೂರು: ಬಿ-ಹ್ಯೂಮನ್ ಸಂಸ್ಥೆಯ ವತಿಯಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಡಯಾಲಿಸಿಸ್ ಮತ್ತು ಏಡ್ಸ್ ವಿಭಾಗಕ್ಕೆ ಎರಡು ಶುದ್ಧ ಕುಡಿಯುವ ನೀರಿನ ವಿತರಣಾ ಯಂತ್ರ ದೇಣಿಗೆಯಾಗಿ ಬುಧವಾರ ನೀಡಲಾಯಿತು. ಟೀಮ್ ಬಿ-ಹ್ಯೂಮನ್ ಟ್ರಸ್ಟಿ ಶೆರೀಫ್ ಬೋಳಾರ್, ಕಾರ್ಪೊರೇಟರ್ ಅಬ್ದುಲ್ ರವೂಫ್ ಬಜಾಲ್ ಶುದ್ಧ ಕುಡಿಯುವ ನೀರಿನ ಯಂತ್ರಗಳನ್ನು ಆಸ್ಪತ್ರೆಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ರವೂಫ್, ಸಂಸ್ಥೆಯು ಜಾತಿ,...

ಮಾ. 24 : ಮಂಗಳೂರಿನಲ್ಲಿ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣೆ

0
ಮಂಗಳೂರು : ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭವು ಮಾರ್ಚ್ 24ರ೦ದು ಬೆಳಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.ಸಮಾರಂಭದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಎಂ.ಪಿ.ಅವರು ನೆರವೇರಿಸಲಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ...

ಯುವನಿಧಿ ಸ್ವಯಂ ದೃಢೀಕರಣ ಮೂರು ತಿಂಗಳಿಗೊಮ್ಮೆ

0
ಮಂಗಳೂರು : ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಈ ಮೊದಲು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡಬೇಕಾಗಿತ್ತು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾಗಳನ್ನು 2023 ಅಥವಾ 2024ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಣಿಯಾಗಿದ್ದು ಹಾಗೂ...

ನಸಿ೦೯ಗ್ ವೃತ್ತಿಪರರಿಗೆ ಬೆಲ್ಜಿಯಂನಲ್ಲಿ ಉದ್ಯೋಗಾವಕಾಶಗಳು

0
ಮಂಗಳೂರು : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿ ಬರುವ ಅಂತರಾಷ್ಟ್ರೀಯ ವಲಸಿಗರ ಕೇಂದ್ರ ಮುಖಾಂತರ GNM / BSc ನಸಿ೦೯ಗ್‌ ï / PBBN ತೇರ್ಗಡೆಯಾದ ಅಭ್ಯರ್ಥಿಗಳಿಗೆ ಬೆಲ್ಜಿಯಂನಲ್ಲಿ ನಸಿ೦೯ಗ್ ವೃತ್ತಿಪರರಿಗೆ ಉದ್ಯೋಗಾವಕಾಶಗಳಿರುತ್ತದೆ. 35 ವರ್ಷಕ್ಕಿಂತ ಕಡಿಮೆ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವೃತ್ತಿ ಅನುಭವ: ಒಂದು ವರ್ಷದ ಕ್ಲಿನಿಕಲ್ ಪ್ರಾಕ್ಟೀಸ್ ಅನುಭವ...

ಮಹಿಳಾ ಕಾಂಗ್ರೆಸ್ ನಿ೦ದ ಅಭಿನ೦ದನೆ ‌

0
ಮಂಗಳೂರು: ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಿಸಿಬಿ ಪೊಲೀಸರು ಬೃಹತ್ ಪ್ರಮಾಣದಲ್ಲಿ ಮಾದಕ ವಸ್ತುವನ್ನು ವಶಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತರನ್ನು ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಯೋಗ ಭೇಟಿಯಾಗಿ ಸೋಮವಾರ ಅಭಿನಂದಿಸಿತು. ಈ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಶಾಲೆಟ್ ಪಿಂಟೋ ಮಾತನಾಡಿ, “ಮಂಗಳೂರಿನ ಸಿಸಿಬಿ ಪೊಲೀಸರ ತಂಡ ಬೃಹತ್ ಮಾದಕ...