ಸೂಟರ್ ಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ : ನೂತನ ಕೊಠಡಿ ಉದ್ಘಾಟನೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಸೂಟರ್ ಪೇಟೆಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಿರ್ಮಾಣವಾದ 13.90 ಲಕ್ಷ ವೆಚ್ಚದ ನೂತನ ಕೊಠಡಿಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯೋಜನೆ ಅನುಮೋದನೆಗೊಂಡು, ಅನುದಾನ ಬಿಡುಗಡೆಯಾಗಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಯ ನಂತರ ಮಾತನಾಡಿದ...
ಮಾದಕ ದ್ರವ್ಯ ವಶ; ಆರೋಪಿಗಳ ಬ೦ಧನ
ಉಳ್ಳಾಲ: ಮಾದಕ ದ್ರವ್ಯ ಮಾರಾಟ ಮಾಡಲು ಬ೦ದಿದ್ದ ಇಬ್ಬರು ಆರೋಪಿಗಳನ್ನು ಬ೦ಧಿಸಿರುವ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬ೦ಧಿಸಿದ್ದಾರೆ.ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್ ಬ೦ಧಿತ ಆರೋಪಿಗಳು.
4-12-2023 ರಂದು ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಸ್ವಿಪ್ಟ್ ಕಾರಿನಲ್ಲಿ ಬಂದಿರುವ ಆರೋಪಿಗಳಾದ ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್.ನಿಷೇದಿತ ಮಾದಕ...
ಮತದಾರರ ಪಟ್ಟಿ ವಿಶೇಷ ಅಭಿಯಾನ
ಮಂಗಳೂರು:203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ 2024ರ ಸಂಬಂಧ ವಿಶೇಷ ಅಭಿಯಾನ ನಡೆಯಲಿದೆ.ಮತದಾರರ ಪಟ್ಟಿಯಲ್ಲಿ 2024 ಜನವರಿ 01ರಂದು 18 ವರ್ಷ ತುಂಬುವ ಮತ್ತು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಗೊಳಿಸುವ, ತಿದ್ದುಪಡಿ, ಮೃತಪಟ್ಟ ಹಾಗೂ ವಾಸ್ತವ್ಯ ಬದಲಾವಣೆ ಮಾಡಲಾದ ಮತದಾರರನ್ನು...
ಡಾ. ಬಿ. ಯಶೋವರ್ಮ ಸಂಸ್ಮರಣೆ-ಯಶೋಭಿವ್ಯಕ್ತಿ ಕಾರ್ಯಕ್ರಮ
ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾನಿಲಯ ಕಾಲೇಜುಮಂಗಳೂರು ಕನ್ನಡ ಸಂಘದ ಜಂಟಿ ಸಹಯೋಗದಲ್ಲಿ ಸಾಹಿತ್ಯ ಪ್ರೇಮಿ, ಸಾಹಿತ್ಯ ಪೋಷಕ, ಶಿಕ್ಷಣ ತಜ್ಞ ಡಾ.ಬಿ. ಯಶೋವರ್ಮ ಸಂಸ್ಮರಣೆ ಯಶೋಭಿವ್ಯಕ್ತಿ ಕಾರ್ಯಕ್ರಮ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ(ಡಿಸೆಂಬರ್ 5) ದಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ.
ನಗರದ...
ಆಯುಷ್ಮಾನ್ ಭಾರತ್ ಸೌಲಭ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ದೂರುಗಳು
ಮಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಜಿಲ್ಲೆಯಲ್ಲಿ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ನಿಗದಿತ ಸೌಲಭ್ಯ ಕೊಡದಿರುವ ಬಗ್ಗೆ ಹಾಗೂ ಹೆಚ್ಚುವರಿ ಮೊತ್ತ ಪಾವತಿಸಿರುವ ಬಗ್ಗೆ ಒಟ್ಟು 16 ದೂರುಗಳು ಮಾರ್ಚ್ 2023 ರಿಂದ ದಾಖಲಾಗಿದೆ.ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್.ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯುಷ್ಮಾನ್ ಯೋಜನೆಯ ಜಿಲ್ಲಾ ಕುಂದು ಕೊರತೆ ನಿವಾರಣಾ ಸಮಿತಿ...
ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಡಿ.3ರ೦ದುಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು.
ಅಂದು ಬೇಳಿಗೆಯಿಂದ...
ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು : ಹೊಸ ಕಟ್ಟಡದ ಉದ್ಘಾಟನೆ
ವಾಮಂಜೂರು: ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು ಇದರ ಹೊಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ದಿವ್ಯ ಬಲಿಪೂಜೆಯೊಂದಿಗೆ ಡಿ. 3ರ೦ದು ನೆರವೇರಿತು.ವಂದನೀಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾರವರು ಇತರ ಹನ್ನೆರಡು ಮಂದಿ ಗುರುಗಳೊಂದಿಗೆ ಪೂಜಾವಿಧಿಯನ್ನು ನಡೆಸಿದರು. ಬೆಥನಿ ಸಂಸ್ಥೆಯ ಮಹಾಮಾತೆ ವಂದನೀಯ ಭಗಿನಿ ರೋಸ್ಸೆ ಲಿನ್‌ರವರು ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು...
ವಿಭಿನ್ನ ಕಥಾಹಂದರದ “ಕ್ಲಾಂತ” ಸಿನಿಮಾ ಸದ್ಯದಲ್ಲೇ ಬಿಡುಗಡೆ
ಮಂಗಳೂರು: ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಹೊಸ ಕನ್ನಡ ಚಲನಚಿತ್ರ "ಕ್ಲಾಂತ" ಸಿನಿಮಾ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಉದಯ ಅಮ್ಮಣ್ಣಾಯ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಅನುಗ್ರಹ ಪವರ್ ಮೀಡಿಯಾ ಎಂಬ ಸಂಸ್ಥೆಯಡಿ ಮೊದಲಬಾರಿಗೆ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಈ ಹಿಂದೆ ತೆರೆಕಂಡಿದ್ದ "ದಗಲ್ ಬಾಜಿಲು" ತುಳು ಚಿತ್ರದ ಜೋಡಿಆದ ನಿರ್ದೇಶಕ ವೈಭವ್...
ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಗೆ “ರಂಗಚಾವಡಿ-2023” ಪ್ರಶಸ್ತಿ ಪ್ರದಾನ
ಸುರತ್ಕಲ್: "ರಂಗಚಾವಡಿ" ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ-ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ದಂಪತಿಯನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ವಿಜಯ್ ಕುಮಾರ್ ಕೊಡಿಯಾಲ್...
ದೇಶಕ್ಕೆ ಮೋದಿಯೇ ಗ್ಯಾರಂಟಿ: ಶಾಸಕ ಕಾಮತ್
ಮ೦ಗಳೂರು : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ ಛತ್ತೀಸ್ಗಢ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ ಮೂರನೇ ತಾರೀಕಿಗೆ ಕಾಂಗ್ರೆಸ್ ಛೂ ಮಂತರ್ ಆಗಲಿದೆ ಎಂದು ಉಲ್ಲೇಖಿಸಿದ್ದರು. ಈಗ ಅದನ್ನು ಅಲ್ಲಿಯ ಜನತೆ ನಿಜ ಮಾಡಿ ತೋರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು...







