ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ : ಮುಹೂರ್ತ ಮತ್ತು: ಲಾಂಛನ ಬಿಡುಗಡೆ
ಮ೦ಗಳೂರು: ತನ್ನ ಅಸ್ತಿತ್ವದ ನಲ್ವತ್ತನೇ ವರ್ಷಾಚರಣೆ (1986 – 2026) ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾಸಮಾವೇಶವನ್ನು ಆಯೋಜಿಸುತ್ತಿದೆ. ನವೆಂಬರ್ 3 ರ೦ದ 15 ರವರೆಗೆ ಮಂಗಳೂರಿನಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು...
ನೈಋತ್ಯ ರೈಲ್ವೆಯ ರೈಲ್ವೆ ರಕ್ಷಣಾ ಪಡೆಯಿ೦ದ (ಆರ್‌ಪಿಎಫ್) 15 ಹುಡುಗಿಯರು ಸೇರಿದಂತೆ 37 ಮಕ್ಕಳ ರಕ್ಷಣೆ
ಹುಬ್ಬಳ್ಳಿ: ನೈಋತ್ಯ ರೈಲ್ವೆಯ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) 2026ರ ಮಾರ್ಚ್ ನಲ್ಲಿ ನನ್ಹೆ ಫರಿಷ್ಠೇ” ಕಾರ್ಯಾಚರಣೆಯಡಿಯಲ್ಲಿ (ಕಳೆದುಹೋದ ಮಕ್ಕಳ ರಕ್ಷಣೆ) ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ37 ಮಕ್ಕಳನ್ನು (22 ಹುಡುಗರು ಮತ್ತು 15 ಹುಡುಗಿಯರು) ರಕ್ಷಿಸಿ ಅವರ ಕುಟುಂಬಗಳೊಂದಿಗೆ ಮರುಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ವಿವಿಧ ಕಾರಣಗಳಿಂದ ಕುಟುಂಬಗಳಿಂದ ಬೇರ್ಪಟ್ಟಿದ್ದ ಈ ಮಕ್ಕಳನ್ನು...
ರೆಡ್‌ಕ್ರಾಸ್‌ನಿಂದ ವಿಶ್ವ ಆರೋಗ್ಯ ದಿನಾಚರಣೆ
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಮತ್ತು ನಿಟ್ಟೆ ಪರಿಗಣಿತ ವಿ.ವಿ. ಸಹಯೋಗದಲ್ಲಿ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಆರೋಗ್ಯ ದಿನ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಕೆಎಂಸಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗಶಾಸ್ತ್ರ ತಜ್ಞೆ ಡಾ.ಶ್ರದ್ಧಾ ಶೆಟ್ಟಿ ಮಾತನಾಡಿ...
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ – ಅಧಿಕಾರಿಗಳಿಗೆ ಸ್ಪೀಕರ್ ಸೂಚನೆ
ಮಂಗಳೂರು: ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಗ್ರಾಮ ಪಂಚಾಯತ್‍ಗಳು, ನಗರ ಸ್ಥಳೀಯ ಸಂಸ್ಥೆಗಳು, ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ...
ಎಂಸಿಸಿ ಬ್ಯಾಂಕ್ : 2025-26 ವಿತ್ತೀಯ ವರ್ಷದಲ್ಲಿ 13 ಕೋಟಿ ರೂ. ಲಾಭ
ಮ೦ಗಳೂರು: ಎಂಸಿಸಿ ಬ್ಯಾಂಕ್, 31 ಮಾರ್ಚ್ 2026ಕ್ಕೆ ಅಂತ್ಯಗೊ೦ಡ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ ದಾಖಲಿದೆ. ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ ಹಾಗೂ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು ಸಿದ್ಧತೆ. ನಡೆಸಿದೆ. ಎಂಸಿಸಿ ಬ್ಯಾಂಕ್ ಈ ವರ್ಷ...
ಆಟೋ ಪಾರ್ಕ್ ಗೆ ಅಳವಡಿಸಲಾಗಿದ್ದ ಮೇಲ್ಛಾವಣಿ ಹಾಗೂ ಇಂಟರ್‌ಲಾಕ್ ಉದ್ಘಾಟನೆ
ಮಂಗಳೂರು: ಮಹಾನಗರ ಪಾಲಿಕೆಯ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನ ಶ್ರೀ ವೈದ್ಯನಾಥ ಆಟೋ ಪಾರ್ಕ್ ಗೆ ಮೇಲ್ಛಾವಣಿ ಹಾಗೂ ಇಂಟರ್‌ಲಾಕ್ ಅಳವಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು.
ನಂತರ ಮಾತನಾಡಿದ ಶಾಸಕರು, ಆಟೋ ಚಾಲಕರು ಶ್ರಮಿಕ ವರ್ಗವಾಗಿದ್ದು, ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುವವರು. ಸದ್ಯ ಎಲ್ಲೆಡೆ ವಿಪರೀತ ಬಿಸಿಲಿನ...
ಅತ್ತಾವರ ಬಾಬುಗುಡ್ಡೆ 3ನೇ ಅಡ್ಡರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿ
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಬಾಬುಗುಡ್ಡೆ 3ನೇ ಅಡ್ಡರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯು 26ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು.
ನಂತರ ಮಾತನಾಡಿದ ಶಾಸಕರು ಇಂಟರ್ ಲಾಕ್ ನಿಂದ ನಿರ್ಮಿಸಲಾಗಿದ್ದ ಇಲ್ಲಿನ ಹಳೆಯ ರಸ್ತೆಯನ್ನು ಇದೀಗ ಸ್ಥಳೀಯರ ಹಲವು...
ಪಿ ಎ ಪ್ರಥಮ ದರ್ಜೆ ಕಾಲೇಜ್: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ
ಮ೦ಗಳೂರು: ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಪಿ ಎ ಪ್ರಥಮ ದರ್ಜೆ ಕಾಲೇಜು ನಡುಪದವು ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ “ನನ್ನ ಭಾರತಕ್ಕಾಗಿ ಯುವ ಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ನಡೆಯಲಿರುವ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2025-26ಕ್ಕೆ ಎಪ್ರಿಲ್ 4,...
ಅಸಂಘಟಿತ ಕಾರ್ಮಿಕರ ಉಚಿತ ನೋಂದಣಿ
ಮಂಗಳೂರು: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ...
ರಕ್ತದಾನದಿಂದ ಮಾನವೀಯ ಸೇವೆಗೆ ಪ್ರೇರಣೆ: ಪುಷ್ಪರಾಜ್ ಜೈನ್
ಮಂಗಳೂರು : ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್ನಷ್ಟು ಮಾನವೀಯ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಲಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕ ಪುಷ್ಪರಾಜ್ ಜೈನ್ ಹೇಳಿದರು.ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ -ಡಾ.ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ...








