ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ
ಮಂಗಳೂರು,:ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ...
ಹೋಟೆಲ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು: ಜಿ.ಪಂ ಸಿ.ಇ.ಒ ಸೂಚನೆ
ಮಂಗಳೂರು: ಹೋಟೆಲ್,ವಸತಿ ಗೃಹ, ಬಾರ್ ರೆಸ್ಟೋರೆಂಟ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು/ಆಹಾರ ಒದಗಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸೂಚಿಸಿದ್ದಾರೆ.ಅವರು ಜಿಲ್ಲಾ ಪಂಚಾಯತ್‍ನಲ್ಲಿ ಗುರುವಾರ ನಡೆದ ಜಿಲ್ಲಾ ಕಣ್ಗಾವಲು ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕುಡಿಯುವ ನೀರಿನ ಮಾದರಿಯನ್ನು ಕಾಲಕಾಲಕ್ಕೆ...
ಪಿಲಿಕುಳದಲ್ಲಿ ನಾಳೆಯಿಂದ ಹಣ್ಣುಗಳ ಮೇಳ
ಮಂಗಳೂರು: ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ ಸಂಕೀರ್ಣ, ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಆಯೋಜಿಸಲಾಗಿದೆ. ಮೇಳದಲ್ಲಿ ದಕ್ಷಿಣ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು, ಉತ್ಪಾದಕರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ವಿವಿಧ...
ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ
ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಗುರುವಾರ ನಗರದ ಪುರಭವನ...
ಜೂನ್ 13 : ಪೊಲೀಸ್ ನೂತನ ವಸತಿಗೃಹ ಉದ್ಘಾಟನೆ
ಮಂಗಳೂರು: ಮಂಗಳೂರು ನಗರ ಪೊಲೀಸ್ ನೂತನ ವಸತಿಗೃಹ ಉದ್ಘಾಟನಾ ಸಮಾರಂಭ ಜೂನ್ 13 ರಂದು ಬೆಳಿಗ್ಗೆ 9:15 ಗಂಟೆಗೆ ಅತ್ತಾವರ ಪೊಲೀಸ್ ಲೇನ್‍ನಲ್ಲಿ ನಡೆಯಲಿದೆ.ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಉದ್ಘಾಟಿಸಲಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ
ಮ೦ಗಳೂರು: ತೆಂಕುತಿಟ್ಟಿನ ಮೇರು ಕಲಾವಿದ,ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ(ಕುಂದಾಪುರದ ಕೃಷ್ಣ ಗಾಣಿಗ) (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು.
ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ.ಉಡುಪಿ...
‘ಬ್ಯಾರಿ ಬಾಸೆ ಪಡಿಕೋರು’ ಪುಸ್ತಕ ಬಿಡುಗಡೆ
ಮಂಗಳೂರು : ಬ್ಯಾರಿ ಕಲಾರಂಗ ಮಂಗಳೂರು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಪ್ರಥಮ ಕಾರ್ಯಕ್ರಮವಾಗಿ ಸಂಘದ ಅಧ್ಯಕ್ಷ ಅಜೀಜ್ ಬೈಕಂಪಾಡಿ ಅವರು ಬರೆದ ‘ಬ್ಯಾರಿ ಬಾಸೆ ಪಡಿಕೋರು’ ಎಂಬ ಪುಸ್ತಕವನ್ನು ಗುರುವಾರ ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಲಾಯಿತು.ಪುಸ್ತಕ ಬಿಡುಗಡೆಗೊಳಿಸಿದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ ‘ ದ.ಕ.ಜಿಲ್ಲೆ ತುಳು, ಕನ್ನಡ, ಕೊಂಕಣಿ, ಬ್ಯಾರಿ,...
ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ
ಮಂಗಳೂರು: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳಾರಾಮ ಕೇಂದ್ರದ ರಾಮ ನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ್ದ ಒಟ್ಟು 1,77,777 ರೂ.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದ್ದಾರೆ.
ದೇಣಿಗೆ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ,...
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ
ಮಂಗಳೂರು: 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ...
ನೈಋತ್ಯ ರೈಲ್ವೆ : ಸೇವೆ, ಆದಾಯ ಮತ್ತು ಸುರಕ್ಷೆಯಲ್ಲಿ ಪ್ರಗತಿ
ಮ೦ಗಳೂರು: ನೈಋತ್ಯ ರೈಲ್ವೆಯು ಮೇ 2025 ರಲ್ಲಿ ಪ್ರಯಾಣಿಕರ ಸೇವೆ, ಡಿಜಿಟಲ್ ನವೀನತೆ ಮತ್ತು ಆದಾಯದಲ್ಲಿ ಪ್ರಗತಿಯನ್ನು ದಾಖಲಿಸಿದ್ದು,ಗಮನಾರ್ಹ ಸಾಧನೆಗಳೊಂದಿಗೆ ಹರ್ಷ ವ್ಯಕ್ತ ಪಡಿಸಿದೆ.
ಪ್ರಯಾಣಿಕರ ಸೌಲಭ್ಯಗಳಲ್ಲಿ ಸುಧಾರಣೆ:ಹುಬ್ಬಳ್ಳಿ ವಿಭಾಗದಲ್ಲಿ ಹೊಸ ಮಾರ್ಗದರ್ಶಕ್ ಡಿಜಿಟಲ್ ನಕ್ಷೆ ಮತ್ತು ಸಂಚರಣೆ ವ್ಯವಸ್ಥೆಪರಿಚಯಿಸಲಾಗಿದೆ. ಹುಬ್ಬಳ್ಳಿ (2) ಮತ್ತುಮೈಸೂರು (4) ನಿಲ್ದಾಣಗಳಲ್ಲಿ ಒಟ್ಟು ಆರು ಹೊಸ ಸ್ವಯಂಚಾಲಿತ ಟಿಕೆಟ್ ಮಾರಾಟ...






