26.1 C
Karnataka
Friday, November 22, 2024

ದೇರಳಕಟ್ಟೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ಮಂಗಳೂರು: ನಮಗೆ ಉಚಿತವಾಗಿ ದೊರೆಯುವ ನೈಸರ್ಗಿಕ ಸಂಪನ್ಮೂಲದ ಸಂರಕ್ಷಣೆ ಯೂ ನಮ್ಮೆಲ್ಲರ ಹೊಣೆಗಾರಿಕೆ ಯಾಗಬೇಕು ಎಂದು ಅರಣ್ಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಶ್ರೀಧರ್ ತಿಳಿಸಿದ್ದಾರೆ.
ಅವರು ಇಂದು ದೇರಳಕಟ್ಟೆಯ ರತ್ನ ಎಜುಜೇಶನ್ ಟ್ರಸ್ಟ್ ನ ವತಿಯಿಂದ ನಡೆಯುತ್ತಿರುವ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ದಕ್ಷಿಣ ಕನ್ನಡ ಅರಣ್ಯ ಇಲಾಖೆ,ನೆಲ್ಲಿಗುಡ್ಡೆ ಪರಿಸರ ಅಧ್ಯಯನ ಕೇಂದ್ರ, ವಿದ್ಯಾರತ್ನ ಶಿಕ್ಷಣ ಸಂಸ್ಥೆ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ.ಶಾಂತರಾಮ ಶೆಟ್ಟಿ ಪರಿಸರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿ ಗಳಿಗೆ ಬಟ್ಟೆ ಚೀಲ ಮತ್ತು ಗಿಡಗಳನ್ನು ವಿತರಿಸಿ ಉದ್ಘಾಟಿ ಸಿದರು.ಬಳಿಕ ಮಾತನಾಡಿದ ಅವರು ಪರಿಸರ ಸಂರಕ್ಷಣೆ ಶಿಕ್ಷಣದ ಭಾಗವಾಗಬೇಕು ಈ ನಿಟ್ಟಿನಲ್ಲಿ ವೈಯಕ್ತಿಕ ಜಾಗೃತಿ ಅಗತ್ಯ ಎಂದುಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮತ್ತು ರತ್ನ ಎಜುಕೇಶನ್ ಟ್ರಸ್ಟ್ ನ ಸಂಸ್ಥಾಪಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ ,ನಮ್ಮ ಪರಿಸರದಲ್ಲಿ ಗಿಡಗಳನ್ನು ನೆಡುವುದು,ನಮ್ಮ ಪರಿಸರವನ್ನು ಸ್ವಚ್ಛ ವಾಗಿರುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ಕೆಲಸವನ್ನು ನಾವೆಲ್ಲರೂ ನಿಷ್ಠೆಯಿಂದ ಮಾಡಬೇಕಾಗಿದೆ. ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟಿಕ್ ತ್ಯಾಜ್ಯ ವನ್ನು ಕಡಿತ ಮಾಡಬೇಕಾಗಿದೆ ಎಂದರು.
ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಉಳ್ಳಾಲ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ ಶುಭ ಹಾರೈಸಿದರು. ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕೋಶಾಧಿಕಾರಿ ಮೋಹನ್ ಶೆಟ್ಟಿ,ವಿಶ್ರಾಂತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ವಿದ್ಯಾರತ್ನ ಶಿಕ್ಷಣ ಸಂಸ್ಥೆ ಗಳ ಸಂಚಾಲಕಿ ಸೌಮ್ಯ ಆರ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ನೈಯಿಮ್ ಹಮೀದ್ ಶೇಖ್,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ ಪೊಯ್ಯತಬೈಲ್ ಮೊದಲಾದವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ನಿರೂಪಿಸಿದರು, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles