22.1 C
Karnataka
Monday, June 15, 2026

ದ.ಕ.ಜಿಲ್ಲಾ ರೆಡ್‌ಕ್ರಾಸ್‌ಗೆ ಪಾರುಲ್ ವಿ.ವಿ.ವಿದ್ಯಾರ್ಥಿ ತಂಡ ಭೇಟಿ

ಮಂಗಳೂರು : ಗುಜರಾತ್‌ನ ವಡೋದರದ ಪಾರುಲ್ ವಿಶ್ವವಿದ್ಯಾನಿಲಯದ ಬಿಎಸ್‌ಸಿ ಮತ್ತು ಎಂಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ತಂಡ ತಮ್ಮ ಅಧ್ಯಯನ ಪ್ರವಾಸದ ಅಂಗವಾಗಿ ದ.ಕ.ಜಿಲ್ಲಾ ರೆಡ್‌ಕ್ರಾಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಸಂಸ್ಥೆಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.
ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ “ದ.ಕ.ಜಿಲ್ಲಾ ರೆಡ್‌ಕ್ರಾಸ್ ತನ್ನ ಅತ್ಯಪೂರ್ವ ಸೇವಾ ಕಾರ್ಯಗಳ ಮೂಲಕ ರಾಷ್ಟಿಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಸುಮಾರು ೭ ಕೋಟಿ ರೂ.ವೆಚ್ಚದಲ್ಲಿ ಭವ್ಯ ಶತಮಾನೋತ್ಸವ ನಿರ್ಮಾಣವಾಗಿರುವದು ಹೆಮ್ಮೆಯ ಸಾಧನೆಯಾಗಿದೆ. ಸರ್ಕಾರಿ ಲೇಡಿಗೋಶನ್
ಆಸ್ಪತ್ರೆಗೆ ದಾಖಲಾಗುವ ಗರ್ಭಿಣಿಯರು ಸಹಿತ ಅವಶ್ಯ ಇರುವ ರೋಗಿಗಳಿಗೆ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಪ್ರತೀ ತಿಂಗಳು ಸುಮಾರು ೫೦೦ ಯುನಿಟ್ ರಕ್ತ ಉಚಿತವಾಗಿ ಒದಗಿಸಲಾಗುತ್ತಿದೆ. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಮೂಲಕ ಸೇವೆ ನೀಡಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯಚಟುವಟಿಕೆಗಳ ಪರಿಚಯ ನೀಡಿದರು.
ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ನಿರ್ದೇಶಕರಾದ ಡಾ.ಸತೀಶ್ ರಾವ್ ಅವರು ರಕ್ತದಾನ ಶಿಬಿರದ ಬಗ್ಗೆ, ಡಾ. ಬಿ.ಸಚ್ಚಿದಾನಂದ ರೈ ಅವರು ಅಂಗಾಗ ದಾನದ ಜಾಗೃತಿ ಬಗ್ಗೆ, ಸಚೇತ ಸುವರ್ಣ ಅವರು ಪ್ರಥಮ ಚಿಕಿತ್ಸೆ ತರಬೇತಿ ಬಗ್ಗೆ ಮತ್ತು ಡಾ.ಸುಮನ.ಬಿ. ಅವರು ಮಹಿಳಾ ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಿರ್ದೇಶಕರಾದ ಗುರುದತ್ ನಾಯಕ್, ಪಿ.ಬಿ.ಹರೀಶ್ ರೈ, ಅಧ್ಯಯನ ತಂಡದ ಸಂಯೋಜಕ ಅಲೆಕ್ಸ್ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles