ಮ೦ಗಳೂರು: ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ಅವರು ಶನಿವಾರ ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ಸಕರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕಉಮಾನಾಥ್ ಕೋಟ್ಯಾನ್ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಉಪಸ್ಥಿತರಿದ್ದರು.
