ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಬ್ಯಾಂಕ್ ಆಫ್ ಬರೋಡ ಹಾಗೂ ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಆಟಿಕೂಟ ಆಗಸ್ಟ್ 10 ರಂದು ಬೆಳಿಗ್ಗೆ 10 ಗಂಟೆಗೆ ಮೂಡುಶೆಡ್ಡೆ ಪಿಲಿಕುಳ ಗುತ್ತು ಮನೆಯಲ್ಲಿ ಆಯೋಜಿಸಲಾಗಿದೆ. ಕಲ್ಕೂರ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ಸರಯೂ ಯಕ್ಷ ಬಳಗ ಕೋಡಿಕಲ್ ಇವರಿಂದ ‘ಮಹಾಶೂರ ಭೌಮಾಸುರ’ ಎಂಬ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10:30 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಆಟಿಯ ಬಗೆಬಗೆಯ ಖಾದ್ಯಗಳ ವಿಶೇಷ ಭೋಜನವನ್ನು ಕೂಡಾ ಏರ್ಪಡಿಸಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


