ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.22 ಹಾಗೂ 23 ರಂದು (ಶನಿವಾರ ಮತ್ತು ಆದಿತ್ಯವಾರ) ‘ಹಣ್ಣುಗಳ ಮೇಳ’ ವನ್ನು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ಔಷಧೀಯ ಸಸಿಗಳು, ಕಸಿ ಗಿಡಗಳು, ಬೀಜಗಳು, ಸಾವಯವ ಬಳಗದ ವಿವಿಧ ಆಹಾರ ಮತ್ತಿತರ ಪದಾರ್ಥಗಳು, ಬೇರೆ ಬೇರೆ ಹಣ್ಣುಗಳಿಂದ ತಯಾರಿಸಲ್ಪಡುವ ವಿವಿಧ ಖಾದ್ಯಗಳು ಹಾಗೂ ಪಾನೀಯಗಳನ್ನು ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರು ಈ ಮೇಳದ ಸದುಪಯೋಗ ಪಡೆಯುವಂತೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.