ಮಂಗಳೂರು: ನ. 14 ರಿಂದ 18ರವರೆಗೆ “ಪಿಲಿಕುಳೋತ್ಸವ” ಹೆಸರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈ ಜಿಲ್ಲಾ ಸಾಂಸ್ಕೃತಿಕ ಉತ್ಸವ, ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು .
ನವೆಂಬರ್ 14ರಂದು ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಮಕ್ಕಳಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಮಕ್ಕಳ ಹಬ್ಬ ಆಯೋಜಿಸುವುದು.ನವೆಂಬರ್ 15ರಿಂದ ಕೃಷಿ ಮತ್ತು ಜಾನುವಾರು ಮೇಳ ಆಯೋಜಿಸುವುಸು
ನವೆಂಬರ್ 16 ರಂದು ಕೆಸರು ಗದ್ದೆಯಲ್ಲಿ ಜಿಲ್ಲಾ ಮಟ್ಟದ ಜಾನಪದ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುವುದು.ನವೆಂಬರ್ 17 ಮತ್ತು 18ರಂದು ಕಂಬಳ ನಡೆಸುವುದು ಹಾಗೂ ಪ್ರತೀ ದಿನ ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿನೂತನವಾದ ಈ ಕಾರ್ಯಕ್ರಮಕ್ಕೆ ವಿಧಾನ ಸಭಾಧ್ಯಕ್ಷರು. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಚುನಾಯಿತ ಪ್ರತಿನಿಧಿಗಳು ಮತ್ತು ಕಂಬಳ ಸಮಿತಿಯೊಂದಿಗೆ ಚರ್ಚಿಸಿ ಕಾರ್ಯಕ್ರಮದ ರೂಪುರೇಖೆ ರಚಿಸಸಲಾಗುವುದು ಎಂದು ಮಂಜುನಾಥ ಭಂಡಾರಿ ತಿಳಿಸಿದರು.