21 C
Karnataka
Monday, November 18, 2024

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಇಲ್ಲಿನ ಬಂಟರ ಭವನದಲ್ಲಿ ಜರುಗಿತು.
ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು, “ಸಸಿ ವಿತರಣೆ ಬರೀ ಕಾಟಾಚಾರದ ಕಾರ್ಯಕ್ರಮವಾಗಬಾರದು. ಮನೆಗೆ ಕೊಂಡೊಯ್ದ ಗಿಡವನ್ನು ಮಕ್ಕಳ ಕೈಯಲ್ಲಿ ನೆಡುವಂತೆ ಸಲಹೆ ನೀಡಬೇಕು ಎಂದರು.
ದಿಕ್ಸೂಚಿ ಮಾತನ್ನಾಡಿದ ಎಕ್ಕಾರು ಬಂಟರ ಸಂಘದ ಅಧ್ಯಕ್ಷ ರತ್ನಾಕರ್ ಶೆಟ್ಟಿ ಅವರು, “ಸುರತ್ಕಲ್ ಬಂಟರ ಸಂಘದ ಆಶ್ರಯದಲ್ಲಿ ಹತ್ತು ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇಂದಿನ ಈ ಕಾರ್ಯಕ್ರಮ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಇಂತಹ ಕಾರ್ಯಕ್ರಗಳು ಹೆಚ್ಚೆಚ್ಚು ನಡೆಯುವ ಮೂಲಕ ಪರಿಸರಸ್ನೇಹಿಗಳಾಗಿ ಬದುಕೋಣ” ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಿದ್ದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ, ರೋಟರಿ ಕ್ಲಬ್ ಬೈಕಂಪಾಡಿ ಇದರ ಅಧ್ಯಕ್ಷ ಹರೀಶ್ ಶೆಟ್ಟಿ, ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಇದರ ಅಧ್ಯಕ್ಷ ರಮೇಶ್ ಶೆಟ್ಟಿ, ಕೃಷಿ ಸಮಿತಿ ಸಂಚಾಲಕ ಮೇಬೈಲು ಸದಾಶಿವ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಭಾರತೀಯ ವಾಯುಸೇನೆ ಮಾಜಿ ಯೋಧ ಜೆಡಬ್ಲ್ಯೂ ಮಹಾಬಲ ಭಂಡಾರಿ, ಅರಣ್ಯ ಇಲಾಖೆ ಎಸಿಎಫ್ಓ ಪಿ. ಶ್ರೀಧರ್, ನಾಗರಿಕ ಸಮಿತಿ (ರಿ) ಮಂಗಳೂರು ತಾಲೂಕು ಇದರ ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ಹೊಸಬೆಟ್ಟು, ಮೂಡಬಿದ್ರಿಯ ಸಸ್ಯ ಸಾಮ್ರಾಜ್ನಿ ಅಸ್ಮಭಾನು, ಸಮಾಜ ಸೇವಕ ಸತೀಶ್ ಸದಾನಂದ, ಕೃಷಿಕ ಸತೀಶ್ ಎಂ ಶೆಟ್ಟಿ ಪಂಜ ಬೈಲಗುತ್ತು ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಸ್ವಾಗತಿಸಿದರು. ಕೃಷಿ ಸಮಿತಿ ಸಂಚಾಲಕ ಮೇಬೈಲು ಸದಾಶಿವ ಶೆಟ್ಟಿ ಪ್ರಾಸ್ತಾವಿಕ ಮಾತನ್ನಾಡಿದರು. ಹರೀಶ್ ಶೆಟ್ಟಿ ಇಡ್ಯ ವಂದಿಸಿದರು. ಅರ್ಪಿತಾ ಶಿಶಿರ್ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles