ಮ೦ಗಳೂರು: ಮಾಜಿ ಸಚಿವರಾದ ಹಾಗೂ ಪಿ.ಎಂ. ಸ್ವನಿಧಿ ಯೋಜನೆಯ ರಾಜ್ಯ ಸಂಚಾಲಕ ಎಸ್.ಎ. ರಾಮದಾಸ್‌ರವರು ನ.8 ರಂದು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖರೊಂದಿಗೆ, ಶಾಸಕರು ಹಾಗೂ ಮಹಾನಗರ ಪಾಲಿಕೆ ಸದಸ್ಯರೊಂದಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಹಾಗೂ ವಿಶ್ವಕರ್ಮ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸಭೆ ನಡೆಸಿದರು.
ಸ್ವನಿಧಿ ಯೋಜನೆಯ ಅಡಿಯಲ್ಲಿ ಪತ್ರಿಕಾ ವಿತರಕರು, ಮನೆ ಮನೆಗೆ ಹಾಲು ಹಾಕುವವರು, ಕ್ಯಾಟರಿಂಗ್ ರವರು ಪುಡ್‌ಡೆಲಿವರಿ ಬಾಯ್ಸ್, ಮನೆಯಲ್ಲಿ ಆಹಾರೋತ್ಪನ್ನ ಸಿದ್ದಪಡಿಸುವವರನ್ನು ಕೇಂದ್ರ ಸರಕಾರದ ವಿವಿಧ ಯೋಜನೆಯಡಿಯಲ್ಲಿ ತರುವ ಪ್ರಯತ್ನಗಳಾಗಿದೆ ಎಂದರು. ಪ್ರಮುಖವಾಗಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಫಲಾನುಭವಿಗಳನ್ನು ಗುರುತಿಸಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕರೆ ನೀಡಿದರು.
ಸಭೆಯಲ್ಲಿಜಿಲ್ಲಾಧ್ಯಕ್ಷ ಸುದರ್ಶನ ಎಂ., ಶಾಸಕರಾದ ಉಮನಾಥ್ ಕೋಟ್ಯಾನ್, ಡಾ.ವೈ ಭರತ್ ಶೆಟ್ಟಿ, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳ್ಯಾರ್, ಕಾರ್ಯದರ್ಶಿಭರತ್ ಎಸ್, ಪಕ್ಷದ ಕಾರ್ಯಕರ್ತರು ಹಾಗೂ ಪ್ರಮುಖರುಉಪಸ್ಥಿತರಿದ್ದರು.
