ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಬರ ನಿಧಿ, ಪಿಎಂ ಸ್ವನಿಧಿ ಯೋಜನೆ ಅಡಿ ಸಾಲ ಸೌಲಭ್ಯ ಒದಗಿಸುವ ಸ್ವ್ವನಿಧಿ ಸಮೃದ್ಧಿ ಮೇಳವನ್ನು ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ನಗರದÀ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಬಾರ್ ನಿಧಿ, ಪಿಎಂ ಸ್ವನಿಧಿ ಯೋಜನೆ ಅಡಿ ಸಾಲ ಪಡೆಯದೆ ಇರುವ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯವು ಪ್ರಥಮ ಹಂತದಲ್ಲಿ ರೂ.10,000 ತದನಂತರ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ ಬಡ್ಡಿ ಸಹಾಯಧನ ಸೌಲಭ್ಯದೊಂದಿಗೆ ಸಾಲ ಮರುಪಾವತಿಸಿದ ಬಳಿಕ ದ್ವಿತೀಯ ಹಂತದಲ್ಲಿ ರೂ20,000, ತೃತೀಯ ಹಂತದಲ್ಲಿ ರೂ 50,000, ಸಾಲ ದೊರೆಯಲಿದೆ. ಡಿಜಿಟಲ್ ವ್ಯವಹಾರವನ್ನು ಮಾಡುವ ಬೀದಿಬದಿ ವ್ಯಾಪಾರಿಗಳಿಗೆ ವಾರ್ಷಿಕ ರೂ 1,200 ಕ್ಯಾಶ್ ಬ್ಯಾಕ್ ದೊರೆಯಲಿದೆ.
ಪಿಎಂ ಸ್ವ ನಿಧಿ ಯೋಜನೆ ಅಡಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಸಾಲ ಸೌಲಭ್ಯವನ್ನು ಹಾಲು ಮತ್ತು ದಿನಪತ್ರಿಕೆ ವಿತರಕರು. ಡೋಬಿ ಮತ್ತು ಇಸ್ತ್ರಿ ಸೇವೆ, ಹಳೆಯ ಪಾತ್ರೆಗಳನ್ನು ವ್ಯಾಪಾರ ಮಾಡುವವರು. ಬಡಗಿ, ಚಮ್ಮಾರರು, ಬಿದಿರಿನ ಬುಟ್ಟಿ, ಬೊಂಬು ಬಾಸ್ಕೆಟ್, ಏಣಿ ವ್ಯಾಪಾರಸ್ಥರು, ಹೂವಿನ ಕುಂಡಗಳನ್ನು ಮಾಡುವವರು, ನೆಯ್ಗೆಗಾರರು, ಎಳನೀರು ಮಾರಾಟಗಾರರು, ಆಹಾರ ತಯಾರಿಸಿ ಮಾರಾಟ ಮಾಡುವವರು (ಕ್ಯಾಟರಿಂಗ್ ಸರ್ವಿಸ್) ಇತ್ಯಾದಿ ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡವರಿಗೂ ಕೂಡ ಯೋಜನೆಯ ಸವಲತ್ತುಗಳನ್ನು ವಿಸ್ತರಿಸಲಾಗಿದೆ.
ಮೇಳದಲ್ಲಿ ಬೀದಿ ಬದಿ ವ್ಯಾಪಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಬರ ನಿಧಿ, ಪಿ.ಎಂ. ಸ್ವನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ ತಿಳಿಸಿದೆ.