21.4 C
Karnataka
Tuesday, December 3, 2024

ಪೊಲೀಸ್ ಆಯುಕ್ತರ ಕಚೇರಿ:ಫೋನ್-ಇನ್, ಸಾರ್ವಜನಿಕರ ಕುಂದುಕೊರತೆಗಳ ಸಭೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ದಿನಾಂಕ: 11-11-2023 ನೇ ಶನಿವಾರದಂದು ಬೆಳಿಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಫೋನ್ ಮೂಲಕ ನೇರವಾಗಿ ಪೊಲೀಸ್ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ. ದೂರವಾಣಿ ಸಂಖ್ಯೆ: 0824-2220801, 0824-2220830
ಕುಂದುಕೊರತೆಗಳ ಸಭೆ
ಫೋನ್-ಇನ್ ಕಾರ್ಯಕ್ರಮದ ನಂತರ 11 ಗಂಟೆಯಿಂದ 12 ಗಂಟೆಯವರೆಗೆ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಸಭೆಯಲ್ಲಿ ತಿಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ ಎ೦ದು ಪ್ರಕಟನೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles