25.7 C
Karnataka
Tuesday, May 26, 2026

ಉರ್ವದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

ಮಂಗಳೂರು : ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ನಗರದ ಉರ್ವದ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಿತು.
ಕರ್ನಾಟಕ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಅಧ್ಯಕ್ಷ ದಿನಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಮಾತನಾಡಿ “ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಉರ್ವ
ಒಳಾಂಗಣ ಕ್ರೀಡಾಂಗಣದಲ್ಲಿ ಮಕ್ಕಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ ಸಂಘಟಿಸುವ ಮೂಲಕ ಎಳೆಯ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿತ್ತು. ಈಗ ಸಾರ್ವಜನಿಕರಿಗೆ ಅನುಕೂಲವಾಗಲು
ಅಂಚೆ ಜನಸಂಪರ್ಕ ಮತ್ತು ಅಪಘಾತ ವಿಮೆ ಹಾಗೂ ಆಧಾರ್ ತಿದ್ದುಪಡಿಯ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಗೌರವ ಸಲಹೆಗಾರರಾದ ಪುರುಷೋತ್ತಮ್ ಪೂಜಾರಿ ಮತ್ತು ರತನ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬಿಲ್ಲವ ಸಂಘದ ಉಪಾಧ್ಯಕ್ಷ
ವೆಂಕಟೇಶ್‌ದಾಸ್ , ಯೋಗೀಶ್ ಬೋಳೂರು. ಸಚಿನ್ ಬಂಗೇರ. ಯಶವಂತ ಮಾಡ. ವಿಕ್ರಂ ಹೊಯ್ಗೆಬೈಲ್. ಜೀವನ್ ಪೂಜಾರಿ ಹೊಯ್ಗೆಬೈಲ್. ಕಬೀರ್ ಕೊಂಚಾಡಿ. ರಂಜನ್ ಶೆಟ್ಟಿ ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಅಶೋಕನಗರ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles