ಮಂಗಳೂರು : ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ ಮತ್ತು ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಇದರ ಸಹಯೋಗದಲ್ಲಿಅಂಚೆ ಜನಸಂಪರ್ಕ ಅಭಿಯಾನ ಮಾ.9 ರಂದು ಬೆಳಗ್ಗೆ 9ರಿಂದ ಸಾಯಂಕಾಲ 4ರವರೆಗೆ ನಗರದ ಅತ್ತಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ದ.ಕ. ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಅಧ್ಯಕ್ಷ ಸತೀಶ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಉದ್ಯಮಿ ರತೀಂದ್ರನಾಥ್, ದ.ಕ. ಟ್ಯಾಕ್ಸ್‌ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್ ನ ಅಧ್ಯಕ್ಷ ಆನಂದ್.ಕೆ., ದ.ಕ. ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ಗೌರವ ಸಲಹೆಗಾರ ರಾಮ್ ಪ್ರಸಾದ್ , ಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಅಭಿಯಾನದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ, ಪಾಸ್ ಪೋರ್ಟ್ ನೋಂದಣಿ, ಅಪಘಾತ ವಿಮೆ ಹಾಗೂ ಪಾನ್ ಕಾರ್ಡ್ ನೋಂದಣಿಗೆ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.
…….
