ಮಂಗಳೂರು : ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ಮೇ 24 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಗರದ ಉರ್ವದ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಲಿದೆ. ಕರ್ನಾಟಕ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಅಧ್ಯಕ್ಷ ದಿನಕರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಗೌರವ ಸಲಹೆಗಾರರಾದ ಪುರುಷೋತ್ತಮ್ ಪೂಜಾರಿ ಮತ್ತು ರತನ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನನ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಅಶೋಕನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


