24.5 C
Karnataka
Thursday, April 30, 2026

ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪ್ರಾಯೋಗಿಕ ತರಬೇತಿ

ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ ಕೋಮು ಗಲಭೆಗಳ ಸಂಧರ್ಭಗಳಲಿ ಉದ್ರಗ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ, ಮಂಗಳೂರು ನಗರದ ನೆಹರೂ ಮೈದಾನದಲ್ಲಿ ತರಬೇತಿ ನೀಡಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.

ಈ ತರಬೇತಿ ಮತ್ತು ಪ್ರಾತ್ಯಕ್ಷಕೆಯಲ್ಲಿ ವಿಶೇಷ ಕಾರ್ಯಪಡೆ ಘಟಕದ Operational wing ನ 95 ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ. ಅಲ್ಲದೇ ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿಯನ್ನು ನೀಡಲಾಗಿದ್ದು, ಕಾರ್ಯಪ್ರವೃತ್ತಿಗೆ ಸನ್ನದ್ದರಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles