ಮಂಗಳೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಪೆÇೀಲೀಸ್ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ನಗರದ ಪ್ರಮುಖ ಸ್ಥಳಗಳಲ್ಲಿ ಹಾಗೂ ಸಿಗ್ನಲ್‍ಗಳಲ್ಲಿ ಭಿಕ್ಷಾಟಣೆಯಲ್ಲಿ ತೊಡಗಿರುವ ಮಹಿಳೆಯರನ್ನು ಮತ್ತು ಮಕ್ಕಳನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆಯಲ್ಲಿ 2 ಕಿಶೋರ ಕಾರ್ಮಿಕರು, 4 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
