ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆ ಮುಂಭಾಗ ನಡೆದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯದಿ೦ದ ನಿರೀಕ್ಷಣ ಜಾಮೀನು ಮಂಜೂರಾಗಿದೆ. ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನಂತೆ ಶಾಸಕರ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ , ಕಾರ್ಪೊರೇಟರ್ ಗಳಾದ ಸಂದೀಪ್ ಹಾಗೂ ಭರತ್ ಕುಮಾರ್ ಅವರಿಗೂ ನಿರೀಕ್ಷಣ ಜಾಮೀನು ಮಂಜೂರಾಗಿದೆ.