26.6 C
Karnataka
Friday, April 4, 2025

ಕಲ್ಲೇಗ ಟೈಗರ್ಸ್ ತಂಡದ ಅಕ್ಷಯ್‌ ಕಲ್ಲೇಗ ಕೊಲೆ

ಪುತ್ತೂರು : ಪುತ್ತೂರಿನ ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ತಂಡದ ಅಕ್ಷಯ್‌ ಕಲ್ಲೇಗ(24) ಅವರನ್ನು ದುಷ್ಕರ್ಮಿಗಳ ತಂಡವೊಂದು ಸೋಮವಾರ ತಡರಾತ್ರಿ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದೆ.
ಸೋಮವಾರ ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್‌ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ಬಗ್ಗೆ ಮಾತನಾಡಲೆಂದು ಅದೇ ತಂಡ ಅಕ್ಷಯ್‌ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಬಳಿಕ ಅಟ್ಟಾಡಿಸಿಕೊಂಡು ಹತ್ಯೆ ನಡೆಸಿದ್ದಾರೆ ಎನ್ನಲಾಗಿದೆ.
ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ಸಮೀಪ ಕೆನರಾ ಬ್ಯಾಂಕಿನ ಎಟಿಎಂ ಬಳಿ ದುಷ್ಕರ್ಮಿಗಳ ತಂಡ ಅಕ್ಷಯ್‌ ಮೇಲೆ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಅಟ್ಟಾಡಿಸಿಕೊಂಡು ಬಂದು ತಲಾವರುನಿಂದ ದಾಳಿ ನಡೆಸಿದ್ದಾರೆ. ಕೃತ್ಯ ನಡೆದ ಕೆಲ ಹೊತ್ತಿನ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಹತ್ಯೆ ನಡೆಸಿದ ತಂಡದಲ್ಲಿ ಮೂವರಿದ್ದು ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಅಕ್ಷಯ್‌ ಕಲ್ಲೇಗ ಕಳೆದ 6 ವರ್ಷಗಳಿಂದ ಟೈಗರ್ಸ್ ಕಲ್ಲೇಗ ಎಂಬ ಹುಲಿ ವೇಷ ತಂಡವನ್ನು ಮುನ್ನಡೆಸುತ್ತಿದ್ದರು. ಈ ತಂಡ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು.ಅಕ್ಷಯ್‌ ವಿವೇಕಾನಂದ ಕಾಲೇಜ್‌ ಬಳಿಯ ನಿವಾಸಿಯಾಗಿದ್ದು, ತಂದೆ , ತಾಯಿ , ಇಬ್ಬರು ಸಹೋದರರನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles