22.7 C
Karnataka
Wednesday, June 18, 2025

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

ಮಂಗಳೂರು: – ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗೆ ವೆಬ್‍ಸೈಟ್ ï
www.bcwd.karnataka.gov.in/ ವೀಕ್ಷಿಸಬಹುದು. ಇಲಾಖಾ ಸಹಾಯವಾಣಿ 8050770005 ಅಥವಾ ಇಮೇಲ್ bcwdhelpline@gmail.com, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ postmatrichelp@karnataka.gov.in ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles