ಮಂಗಳೂರು: ಮೈಸೂರು ರಂಗಾಯಣ ಭಾರತೀಯ ರಂಗ ಶಿಕ್ಷಣ ಕೇಂದ್ರ ದಲ್ಲಿ 2024-25 ನೇ ಸಾಲಿನ ಒಂದು ವರ್ಷದ ರಂಗ ಶಿಕ್ಷಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಂಗ ತರಬೇತಿಗೆ ಸೇರ ಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷದೊಳಗಿನ ಅಭ್ಯರ್ಥಿಗಳಾಗಿರಬೇಕು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಮತ್ತು ತಿಂಗಳಿಗೆ 5,000ಗಳ ವಿದ್ಯಾರ್ಥಿವೇತನ ಪಾವತಿಸಲಾಗುತ್ತದೆ.
ಭಾರತೀಯ ರಂಗ ಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ರಂಗಾಯಣದ
ವೆಬ್ ಸೈಟ್ https://rangayanamysore.karnataka.gov.inಮೂಲಕ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮೈಸೂರಿನ ರಂಗಾಯಣ ಉಪನಿರ್ದೇಶಕರು ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ 20ರ ಒಳಗೆ ತಲುಪುವಂತೆ ಕಳುಹಿಸಬೇಕು.
ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ 230, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 180 ಹಾಗೂ ರಂಗ ಕೈಪಿಡಿ ಶುಲ್ಕ ರೂಪಾಯಿ 30ನ್ನು ಪಾವತಿಸಬೇಕು. ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರದ ಮೂಲಕ ತಿಳಿಸಲಾಗುತ್ತದೆ. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶವಕಾಶವಿರುತ್ತದೆ.
ಸಂದರ್ಶನದ ದಿನ ಮಧ್ಯಾಹ್ನದ ಲಘು ಉಪಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿಂದ ಮಾಡಲಾಗುತ್ತದೆ ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2512639 ಮೊಬೈಲ್ ಸಂಖ್ಯೆ 9148827720 ಸಂಪರ್ಕಿಸುವಂತೆ ರಂಗಾಯಣದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.