28.8 C
Karnataka
Sunday, May 19, 2024

ಇದು ದೇಶದ ಭವಿಷ್ಯಕ್ಕಾಗಿ ನಡೆಯುವ ಚುನಾವಣೆ: ರವಿಶಂಕರ ಮಿಜಾರ್

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ( ಏ.26ರಂದು ನಡೆಯಲಿದೆ. ಈಗಾಗಲೇ ನಮ್ಮ ಅಭಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮತದಾರರನ್ನು, ವಿವಿಧ ಸ್ತರದ ಪ್ರಮುಖರನ್ನು, ಕಾರ್ಯಕರ್ತರನ್ನು ಭೇಟಿಯಾಗಿ ಮತಯಾಚನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಅಭೂತಪೂರ್ವ ಬಹುಮತದ ಸ್ಥಾನಗಳೊಂದಿಗೆ ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವ ಐತಿಹಾಸಿಕ ಮಹತ್ವದ ಚುನಾವಣೆ ಇದಾಗಿದೆ. 2047ರ ವೇಳೆಗೆ ಭಾರತವನ್ನು ವಿಶ್ವದ ನಂ.1 ರಾಷ್ಟ್ರವಾಗಿ ರೂಪಿಸುವ ಅಮೃತ ಕಾಲದಲ್ಲಿ ಇಂದು ನಾವಿದ್ದೇವೆ. ಈ ಚುನಾವಣೆಯನ್ನು ಅತ್ಯಂತ ಮಹತ್ವದ್ದಾಗಿ ಪರಿಗಣಿಸಿ ದೇಶ ಕಟ್ಟುವ ನಿಟ್ಟಿನಲ್ಲಿ ಮತದಾನ ಮಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಮೂಡಾದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ಚುನಾವಣಾ ಪ್ರಭಾರಿ ರವಿಶಂಕರ ಮಿಜಾರ್ ಹೇಳಿದರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ನಗರ ದಕ್ಷಿಣಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ರೋಡ್‌ ಶೋದ ಮುಖಾಂತರ ಪ್ರಚಾರ ನಡೆಸಿರುವುದು ಮತದಾರರು ಹಾಗೂ ಪಕ್ಷದ ಅನನ್ಯ ಕಾರ್ಯಕರ್ತರಲ್ಲಿ ಬಹಳ ಉತ್ಸಾಹ ಮೂಡಿಸಿದೆ. ಚುನಾವಣಾ ಕಾರ್ಯದಲ್ಲಿ ಎಲ್ಲರೂ ಬಹಳ ಉತ್ಸಾಹದಿಂದ ತಾವು ತೊಡಗಿಸಿಕೊಂಡಿದ್ದಾರೆ. ಪ್ರಧಾನಿ ಮೋದಿಯವರು ಸರ್ವವ್ಯಾಪಿ, ಸರ್ವಸ್ಪರ್ಶಿ ಎಂಬ ಧ್ಯೇಯವಾಕ್ಯದ ಮೂಲಕ ತಮ್ಮ ಸರಕಾರವನ್ನು ಜನರ ಬಳಿಗೆ ಕೊಂಡೊಯ್ದಿದ್ದಾರೆ. ಅವರ ಎಲ್ಲ ಯೋಜನೆಗಳು ಯಾವುದೇ ಒಂದು ವರ್ಗಕ್ಕೆ ಸೀಮಿತವಲ್ಲ. ಭಾರತದ 135 ಕೋಟಿ ಜನರಿಗೆ ತಲುಪುವ ಕೆಲಸವನ್ನು ಅವರು ಮಾಡಿದ್ದಾರೆ. ಸಬ್‌ ಕಾ ಸಾಥ್‌, ಸಬ್ ಕಾ ವಿಕಾಸ್ ಮಂತ್ರದಂತೆ ಎಲ್ಲರಿಗೂ ತಲುಪುವಂತೆ ಕಳೆದ 10 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.
ಕರಾವಳಿಯ ಎಲ್ಲ ಮತದಾರರು ಜಾಗೃತರಾಗಿ ಮೋದಿಯವರ ಕಲ್ಪನೆಗಳಿಗೆ, ಅವರ ಸರಕಾರದ ರೀತಿನೀತಿಗಳಿಗೆ ಬೆಲೆ ಕೊಟ್ಟು ಅವರನ್ನು ಅಭೂತಪೂರ್ವ ಬೆಂಬಲದೊಂದಿಗೆ ಮತ್ತೆ ಅಧಿಕಾರಕ್ಕೆ ತರುವುದು ನಿಶ್ಚಿತ .ದಕ್ಷಿಣ ಕನ್ನಡದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟರು ಹಾಗೂ ಉಡುಪಿ-ಚಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಜನರು ಆಶೀರ್ವಾದ ಮಾಡುವುದು ನಿಶ್ಚಿತ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಎಸ್‌.ಆರ್ ಹರೀಶ್ ಆಚಾರ್ಯ, ಪಕ್ಷದ ಹಿರಿಯರಾದ ನಾರಾಯಣ ಗಟ್ಟಿ, ಸೀತಾರಾಮ್ ಬಂಗೇರ, ಬಾಬು ಬಂಗೇರ ಉಳ್ಳಾಲ, ರುಕ್ಮಯ ನಾಯಕ್ ಹಾಗೂ ಸಂಜೀವ ಅಡ್ಯಾರ್, ಮಾಧ್ಯಮ ಸಹ ಸಂಚಾಲಕ ಮನೋಹರ ಶೆಟ್ಟಿ ಕದ್ರಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles