ಮಂಗಳೂರು : ಪರರ ಜೀವ ರಕ್ಷಣೆಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಅಂತಹ ಜೀವ ರಕ್ಷಕರನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯ ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
ಜೀವ ರಕ್ಷಣೆಗೆ ನೆರವಾದ ಖಾಸಗಿ ಬಸ್ ಸಿಬ್ಬಂದಿಯನ್ನು ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಸನ್ಮಾನಿಸಿ ಮಾತನಾಡಿದ ಅವರು ” ಬಸ್ ಸಿಬ್ಬಂದಿ ಪ್ರಯಾಣಿಕರ ಜೀವದ ಬಗ್ಗೆ ವಹಿಸಿದ ಕಾಳಜಿ ಯುವ ಸಮುದಾಯಕ್ಕೆ ಪ್ರೇರಣೆಯಾಗಿದೆ” ಎಂದರು.
ಖಾಸಗಿ ಬಸ್ ಸಿಬ್ಬಂದಿ ಗಜರಾಜ ಕುಂದರ್, ಸಂದೀಪ್, ಸುರೇಶ್, ಮೆಹಬೂಬ್ ಮತ್ತು ಮಹೇಶ್ ಪೂಜಾರಿ ಇವರುಗಳನ್ನು ರೆಡ್ ಕ್ರಾಸ್ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಹಿರಿಯ ಸಮಾಜ ಸೇವಕ ಟಿ.ಜಿ.ಶೆಣೈ , ರೆಡ್ ಕ್ರಾಸ್
ಸಮಿತಿಯ ಉಪಾಧ್ಯಕ್ಷ ಡಾ.ಸತೀಶ್ ರಾವ್, ನಿರ್ದೇಶಕರಾದ ಡಾ.ಸಚ್ಚಿದಾನಂದ ರೈ , ಗುರುದತ್ ಕಾಮತ್, ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ , ಮ್ಯಾನೇಜರ್ ಸುಧಾಕರ್, ಒಝಾಸ್ ಟ್ರಸ್ಟ್ ನ ಅಧ್ಯಕ್ಷೆ ಮಂಗಳಾ.ಎನ್
ಕೆ., ಗೌರವಾಧ್ಯಕ್ಷ ನಂದಕುಮಾರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ದಿನಮಣಿ ರಾವ್ ಕಾರ್ಯಕ್ರಮ ನಿರೂಪಿಸಿದರು.