24.9 C
Karnataka
Thursday, April 30, 2026

ನೋಂದಣಿ ಮತ್ತು ಮುದ್ರಾಂಕ ಶುಲ್ಕ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ ,ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5, ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು ) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ ಶೇ.2 ರಷ್ಟು ಪರಿಷ್ಕರಿಸಿದೆ.
ಪರಿಷ್ಕøತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‍ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‍ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‍ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕøತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುತ್ತದೆ.
ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೆÇೀರ್ಟಲ್‍ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles