24.5 C
Karnataka
Thursday, April 30, 2026

ಗಣರಾಜ್ಯೋತ್ಸವ : ಅಗತ್ಯ ಸಿದ್ಧತೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಕೂಡ  ನಗರದ ನೆಹರೂ ಮೈದಾನದಲ್ಲಿ  ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ವಿಜೃಂಭಣೆಯಿಂದ ನಡೆಯಲು ಅಗತ್ಯ ಸಿದ್ಧತೆ ನಡೆಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ  ಸಭಾಂಗಣ ದಲ್ಲಿ  ನಡೆದ  ಗಣರಾಜ್ಯೋತ್ಸವ ಆಚರಣೆ ಪೂರ್ವ ಭಾವಿ ಸಭೆ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.
   ದ. ಕ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಸಮಾವೇಶ, ಪರೇಡ್ ವೀಕ್ಷಣೆ,  ಸಚಿವರಿಂದ ಗಣರಾಜ್ಯೋತ್ಸವ ಸಂದೇಶ, ಪಥ ಸಂಚಲನ , ಪ್ರಶಸ್ತಿ ವಿತರಣೆ,  ಸಾಂಸ್ಕೃತಿಕ ಕಾರ್ಯಕ್ರಮ ಗಳು   ನಡೆಯಲಿದೆ.    ವ್ಯವಸ್ಥಿತವಾಗಿ ಗಣರಾಜ್ಯೋತ್ಸವ  ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.
         ಎಲ್ಲಾ ಇಲಾಖೆಯ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ  ಭಾಗವಹಿಸಲು  ಆಯಾಯಾ ಇಲಾಖೆ ಅಧಿಕಾರಿಗಳು  ಸೂಕ್ತ  ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
     ಕುಡಿಯುವ ನೀರಿನ ವ್ಯವಸ್ಥೆ,  ತುರ್ತು ಚಿಕಿತ್ಸೆ  ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.
      ಸಭೆಯಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಹೆಚ್ಚುವರಿ ಪೊಲೀಸ್ ಆಧೀಕ್ಷಕ ಅನಿಲ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles