ಮಂಗಳೂರು : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರದ ಪ್ರದೇಶಗಳಾದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಕಂಕನಾಡಿ, ಪಂಪ್‍ವೆಲ್ ವೃತ್ತ , ಕುದ್ರೋಳಿ, ರಥಬೀದಿ, ಕೆಪಿಟಿ ಸ್ಥಳಗಳಲ್ಲಿ ಕಾಯ್ಯಾಚರಣೆ ನಡೆಸಿ ಭಿಕ್ಷಾಟನೆಯಲ್ಲಿ ತೊಡಗಿದ್ದ 3 ತಾಯಂದಿರು ಮತ್ತು 4 ಮಕ್ಕಳನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ ಪ್ರಕಟಣೆ ತಿಳಿಸಿದೆ.
Rescue of children involved in begging
